ಶಬರಿಮಲೆ: ಪವಿತ್ರ ಮಕರ ಜ್ಯೋತಿ ಸೋಮವಾರ ಅಂದರೆ ಇಂದು ಸಂಜೆ ಕಾಣಿಸಿಕೊಳ್ಳಲಿದೆ. ಜ್ಯೋತಿಯನ್ನು ಕಣ್ತುಂಬಿಕೊಳ್ಳಲು ಶಬರಿಮಲೆ ದೇಗುಲಕ್ಕೆ ಸಾವಿರಾರು ಜನರು ಬರುತ್ತಿದ್ದಾರೆ.
ಋತುಸ್ರಾವ ವಯೋಮಾನದ ಮಹಿಳೆಯರು ದೇಗುಲ ಪ್ರವೇಶಿಸುವುದಕ್ಕೆ ಸಂಬಂಧಿಸಿದ ವಿವಾದ ಭಕ್ತರ ಸಂಖ್ಯೆ ಕುಸಿಯಲು ಕಾರಣ ಎನ್ನಲಾಗಿದೆ. ಕೇರಳದ ಭಕ್ತರು ಶಬರಿಮಲೆಗೆ ಭೇಟಿ ಕೊಡುವ ಸಂಖ್ಯೆ ಈ ಬಾರಿ ಕಮ್ಮಿಯಾಗಿದೆ. ಆದರೆ, ತಮಿಳುನಾಡು, ಕರ್ನಾಟಕ ಮತ್ತು ಆಂಧ್ರ ಪ್ರದೇಶದಿಂದ ಬರುವ ಭಕ್ತರ ಸಂಖ್ಯೆ ಗಣನೀಯವಾಗಿಯೇ ಇದೆ.
ದೇವಸ್ಥಾನದ ಹದಿನೆಂಟು ಮೆಟ್ಟಿಲುಗಳ ಬಳಿಯಲ್ಲಿ ಭಾರಿ ಸರತಿ ಸಾಲು ಈ ಸಾರಿ ಕಂಡು ಬಂದಿಲ್ಲ. ದಟ್ಟಣೆ ಕಡಿಮೆ ಇರುವುದರಿಂದ ಭಕ್ತರಿಗೆ ದರ್ಶನ ಪಡೆಯುವುದು ಸುಲಭವಾಗಿದೆ.
ಶಬರಿಮಲೆಗೆ ಸಮೀಪದ ಪ್ರಮುಖ ಪಟ್ಟಣ ಪಟ್ಟನಂತಿಟ್ಟ. ತೀರ್ಥಯಾತ್ರೆ ಋತುವಿನಲ್ಲಿ ಈ ಪಟ್ಟಣ ಗಿಜಿಗುಟ್ಟುತ್ತಿರುತ್ತದೆ. ಆದರೆ, ಪಟ್ಟನಂತಿಟ್ಟ ಬಸ್ ನಿಲ್ದಾಣದಲ್ಲಿ ಭಾನುವಾರ ಭಕ್ತರ ದಟ್ಟಣೆ ಇರಲಿಲ್ಲ.
ಶಬರಿಮಲೆಯಿಂದ 80 ಕಿ.ಮೀ. ದೂರದಲ್ಲಿರುವ ಪಂದಲಂ ಅರಮನೆಯಿಂದ ಅಯ್ಯಪ್ಪ ಸ್ವಾಮಿಯ ಆಭರಣಗಳನ್ನು ಶಬರಿಮಲೆಗೆ ಒಯ್ಯಲಾಗುತ್ತದೆ. ಭಾನುವಾರ ಬೆಳಿಗ್ಗೆ ಈ ಆಭರಣಗಳು ಇಲ್ಲಿ ತಲುಪುತ್ತವೆ. ಮಕರಸಂಕ್ರಮಣ ಪೂಜೆಯ ಸಂದರ್ಭದಲ್ಲಿ ಅಯ್ಯಪ್ಪ ಸ್ವಾಮಿಗೆ ಈ ಆಭರಣಗಳನ್ನು ತೊಡಿಸಲಾಗುತ್ತದೆ.
ಆದರೆ, ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ಭಾನುವಾರ ಮಧ್ಯಾಹ್ನ ವರೆಗೆ ಪಂಪಾ ತಲುಪಿದ ಭಕ್ತರ ಸಂಖ್ಯೆ 53,700 ಎಂದು ಇಲ್ಲಿನ ಪೊಲೀಸ್ ನಿಯಂತ್ರಣ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ವರ್ಷದ ಮಕರ ಜ್ಯೋತಿ ಮುನ್ನಾದಿನ ಎರಡು ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ಕೊಟ್ಟಿದ್ದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…