ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಿಯ 18 ಮೆಟ್ಟಿಲುಗಳ ಮೇಲೆ ನಿಂತು ಪೊಲೀಸರು ಫೋಟೋಶೂಟ್ ಮಾಡಿಸಿರುವುದು ಇದೀಗ ತೀವ್ರ ವಿವಾದಕ್ಕೀಡಾಗಿದೆ. ಈ ಘಟನೆ ಕುರಿತು ಕೇರಳದ ಎಡಿಜಿಪಿ, ದೇವಸ್ಥಾನದ ವಿಶೇಷ ಅಧಿಕಾರಿ ಬಳಿ ವರದಿ ಕೇಳಿದ್ದಾರೆ.
ದೇವಸ್ಥಾನದಲ್ಲಿ ತಮ್ಮ ಕರ್ತವ್ಯದ ನಂತರ ಮೊದಲ ಬ್ಯಾಚ್‌ನ ಪೊಲೀಸರು 18 ಮೆಟ್ಟಿಲುಗಳ ಮೇಲೆ ನಿಂತು ಕ್ಯಾಮೆರಾಗೆ ಪೋಸ್ ನೀಡಿದರು. ಇದಕ್ಕೆ ಸಂಬಂಧಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಭಕ್ತರಿಂದ ತೀವ್ರ ಟೀಕೆಗಳು ವ್ಯಕ್ತವಾದ ಬಳಿಕ ವಿವಾದ ಭುಗಿಲೆದ್ದಿದೆ. ಸರ್ಕಾರಕ್ಕೆ ಭಕ್ತರ ಬಿಸಿ ತಟ್ಟುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ ದೇವಸ್ಥಾನದ ಆಡಳಿತ ಮಂಡಳಿಯ ಬಳಿ ವರದಿ ಕೇಳಿದೆ.
ಪೊಲೀಸರ ಫೋಟೋಶೂಟ್ ವಿರುದ್ಧ ವಿಶ್ವ ಹಿಂದು ಪರಿಷತ್ ಹರಿಹಾಯ್ದಿದೆ. ಹದಿನೆಂಟು ಮೆಟ್ಟಿಲನ್ನು ಅಯ್ಯಪ್ಪ ಭಕ್ತರು ಆಶೀರ್ವಾದ ಎಂದು ಪರಿಗಣಿಸುತ್ತಾರೆ. ಒಂದೊಂದು ಮೆಟ್ಟಿಲಿಗೂ ಒಂದೊಂದು ಅರ್ಥವಿದೆ. 18 ಮೆಟ್ಟಿಲನ್ನು ಇಳಿಯುವಾಗಲೂ ಭಕ್ತರು ದೇವರಿಗೆ ಬೆನ್ನು ತೋರುವುದಿಲ್ಲ. ಪತಿತಂಪಾಡಿ ವಿಧಿವಿಧಾನದಲ್ಲಿರುವಾಗಲೂ ಅಯ್ಯಪ್ಪನಿಗೆ ಬೆನ್ನು ತೋರಿಸಿ ಅಯ್ಯಪ್ಪ ಭಕ್ತರು ಫೋಟೋಶೂಟ್ ಮಾಡುವಂತಿಲ್ಲ. ಹೀಗಿರುವಾಗ ಪೊಲೀಸರು ಈ ರೀತಿ ಮಾಡಬಹುದೇ ಎಂದು ವಿಶ್ವ ಹಿಂದು ಪರಿಷತ್ ಕೇರಳ ಘಟಕ ಸ್ಪಷ್ಟಪಡಿಸಿದೆ.
ವಿಶ್ವ ಹಿಂದು ಪರಿಷತ್ ರಾಜ್ಯಾಧ್ಯಕ್ಷ ವಿ.ಜಿ.ತಂಪಿ, ಪ್ರಧಾನ ಕಾರ್ಯದರ್ಶಿ ವಿ.ಆರ್.ರಾಜಶೇಖರನ್ ಮಾತನಾಡಿ, ಪೊಲೀಸ್ ಅಧಿಕಾರಿಗಳಿಗೆ ಬೆಂಬಲ ನೀಡಿದ ಮುಖ್ಯಮಂತ್ರಿಗಳ ಮೊದಲ ಆರೋಪಿಯಾಗಿದ್ದಾರೆ ಎಂದು ಕಿಡಿಕಾರಿದರು. ಈ ಘಟನೆ ಕುರಿತು ವರದಿ ನೀಡುವಂತೆ ದೇವಸ್ಥಾನದ ಆಡಳಿತ ಮಂಡಳಿಗೆ ಕೇರಳದ ಎಡಿಜಿಪಿ ಸೂಚನೆ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…