Featured

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ – vishwanews24

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ

ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ (SASS) ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿಯ ಹೋಟೆಲ್ ಕಾರ್ತಿಕ್ ಎಸ್ಟೇಟ್‌ನಲ್ಲಿ ಜಿಲ್ಲಾ ಕಾರ್ಯಕಾರಿಣಿ ಸಭೆ ಹಾಗೂ ಉಡುಪಿ ತಾಲೂಕು SASS ಸಮಿತಿ ಮತ್ತು ಕುಂದಾಪುರ ತಾಲೂಕು ಮಹಿಳಾ SASS ಸಮಿತಿಯ ಪದಗ್ರಹಣ ಸಮಾರಂಭ ನಡೆಯಿತು.

ಕಾರ್ಯಕ್ರಮದಲ್ಲಿ ಕೇಂದ್ರ SASS ರಾಷ್ಟ್ರೀಯ ಅನ್ನದಾನ ಸಮಿತಿಯ ಅಧ್ಯಕ್ಷ ಟಿ.ಬಿ.ಶೇಖರ್, ದಕ್ಷಿಣಪ್ರಾಂತ ಕಾರ್ಯದರ್ಶಿ ಕೃಷ್ಣಯ್ಯ, SASS ರಾಜ್ಯಾಧ್ಯಕ್ಷ ಜಯರಾಮ್‌, ರಾಜ್ಯ ಸಂಘಟನಾ ಕಾರ್ಯದರ್ಶಿ ದತ್ತಾತ್ರೇಯ ಶಿಂತ್ರೆ, ಜಿಲ್ಲಾ SASS ಗೌರವಾಧ್ಯಕ್ಷ ಹರಿಯಪ್ಪ ಕೋಟ್ಯಾನ್, ಗೌರವ ಸಲಹೆಗಾರ ದಿವಾಕರ್ ಶೆಟ್ಟಿ, ರಾಜ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ವಸಂತ್ ಕುಮಾರ್, ಜಿಲ್ಲಾ SASS ಅಧ್ಯಕ್ಷ ರಾಧಾಕೃಷ್ಣ ಮೆಂಡನ್, ಉಪಾಧ್ಯಕ್ಷರಾದ ಕೆ. ವಿಜಯ ಕೊಡವೂರು, ಗೋಪಾಲ್ ಪೂಜಾರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಜಿತ್ ಶೆಟ್ಟಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ತಾರಾ ಯು. ಆಚಾರ್ಯ, ಪ್ರಧಾನ ಕಾರ್ಯದರ್ಶಿ ತಾರಾಸತೀಶ್, ಉಡುಪಿ ತಾಲೂಕು SASS ನ ನೂತನ ಅಧ್ಯಕ್ಷ ಸತೀಶ್ ಕುಲಾಲ್, ಪ್ರಧಾನ ಕಾರ್ಯದರ್ಶಿ ಅಶ್ವಥ್ ಆಚಾರ್ಯ, ಕುಂದಾಪುರ ತಾಲೂಕು ಮಹಿಳಾ SASS ಘಟಕದ ನೂತನ ಅಧ್ಯಕ್ಷೆ ಸುಶ್ಮಾ ಗಿರೀಶ್, ಪ್ರಧಾನ ಕಾರ್ಯದರ್ಶಿ ಶ್ವೇತಾ ಶ್ರೀನಿಧಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಅಯ್ಯಪ್ಪ ಸ್ವಾಮಿ ಭಕ್ತರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕೇಂದ್ರ SASS ರಾಷ್ಟ್ರೀಯ ಅನ್ನದಾನ ಸಮಿತಿಯ ಅಧ್ಯಕ್ಷ ಟಿ.ಬಿ. ಶೇಖರ್‌ ಅವರು, “SASSನ ಒಂದು ಜಿಲ್ಲಾ ಘಟಕ ಹೊಂದಿರಬೇಕಾದ ಎಲ್ಲಾ ಅಗತ್ಯ ಸಂಘಟನಾತ್ಮಕ ಅಂಶಗಳು, ಕಾರ್ಯಚಟುವಟಿಕೆಗಳು ಹಾಗೂ ಸೇವಾ ಚಟುವಟಿಕೆಗಳನ್ನು ಸಮರ್ಪಕವಾಗಿ ಹೊಂದಿರುವ ಆದರ್ಶ ಜಿಲ್ಲಾ ಘಟಕ ಉಡುಪಿ” ಎಂದು ಪ್ರಶಂಸಿಸಿ, ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲಾ ಘಟಕವನ್ನು “ಪ್ರಭಾವಿ ಜಿಲ್ಲೆ” ಎಂದು ಘೋಷಿಸಿದರು

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

12 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

15 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

15 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

16 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

16 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

16 hours ago