Featured

ಶಬರಿಮಲೆ ತೀರ್ಪು ಹಿನ್ನಲೆ : ಸೋಮವಾರ ಕೇರಳ ಬಂದ್​ಗೆ ಕರೆನೀಡಿದ ಶಿವಸೇನೆ

ತಿರುವನಂತಪುರಂ,: ಕೇರಳದ ಶಬರಿಮಲೆ ದೇವಸ್ಥಾನದ ಒಳಗೆ ಎಲ್ಲ ವಯೋಮಾನದ ಮಹಿಳೆಯರಿಗೂ ಮುಕ್ತ ಪ್ರವೇಶಕ್ಕೆ ಅನುಮತಿ ನೀಡುವಂತೆ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಸುಪ್ರೀಂಕೋರ್ಟ್​ನ ಈ ತೀರ್ಪನ್ನ ಹಲವರು ಸ್ವಾಗತಿಸಿದರೆ, ಇನ್ನೂ ಹಲವರು ಅಸಮಾಧಾನ ವ್ಯಕ್ತಪಡಿಸ್ತಿದ್ದಾರೆ.

ಇದೀಗ ಕೇರಳದ ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ವಿರೋಧಿಸಿ ಅಕ್ಟೋಬರ್​ 1 ರಂದು ಶಿವಸೇನೆಯು ಕೇರಳ ಬಂದ್ ಗೆ ಕರೆನೀಡಿದೆ. ಈ ಸಂಬಂಧ ಇತರ ಧಾರ್ಮಿಕ ಸಂಸ್ಥೆಗಳ ಸಹಯೋಗದೊಂದಿಗೆ ​ ತೀರ್ಪನ್ನು ಮರುಪರಿಶೀಲಿಸುವಂತೆ ಮೇಲ್ಮನವಿ ಸಲ್ಲಿಸುತ್ತೇವೆಂದು ಶಿವಸೇನೆ ರಾಜ್ಯ ಮುಖ್ಯಸ್ಥ ಭುವನೇಶ್ವರಾ ಚಂದ್ರ ಹೇಳಿದ್ದಾರೆ.

ಶಬರಿಮಲೆ  ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ಅವಕಾಶ ನೀಡಿರುವ ಸುಪ್ರೀಂಕೋರ್ಟ್‌ ತೀರ್ಪು ದೇಶಾದ್ಯಂತ ಬಹುಚರ್ಚಿತ ವಿಷಯವಾಗಿದೆ. ಅದರಲ್ಲೂ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದಿಂದ ಶಬರಿಮಲೆಗೆ ಲಕ್ಷಾಂತರ ಭಕ್ತರು ಪ್ರತಿವರ್ಷ ದರ್ಶನಕ್ಕಾಗಿ ‌ಹೋಗುತ್ತಾರೆ. ಹೀಗಾಗಿ, ಕರ್ನಾಟಕದ ಭಕ್ತರ ವಲಯದಲ್ಲೂ ತೀರ್ಪು ನೋವನ್ನುಂಟುಮಾಡಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ಕೋರ್ಟ್ ತೀರ್ಪನ್ನು ವಿರೋಧಿಸುವ ಸಂಘಟನೆಗಳು ಬಂದ್ ಗೆ ಬೆಂಬಲ ನೀಡುವ ಸಾಧ್ಯತೆ ಇದೆ. 800 ವರ್ಷಗಳ ಅಯ್ಯಪ್ಪ ದೇವಾಲಯದ ಇತಿಹಾಸದಲ್ಲಿ ಮಹಿಳೆಯರ ಪ್ರವೇಶಕ್ಕೆ ಅವಕಾಶವಿರಲಿಲ್ಲ. ಋತುಮತಿಯಾಗುವ ಹೆಣ್ಣು ಮಕ್ಕಳು ದೇವಾಲಯಕ್ಕೆ ಪ್ರವೇಶಿಸುವುದರಿಂದ ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆ ಬರುತ್ತದೆ ಎಂಬ ಕಾರಣಕ್ಕೆ ಈ ದೇವಾಲಯದ ಆಡಳಿತ ಮಂಡಳಿಯೇ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು.

ಆದರೆ ಶುಕ್ರವಾರ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಲ್ಲಿ ಈ ನಿರ್ಬಂಧವನ್ನು ತೆರವುಗೊಳಿಸಲಾಗಿದ್ದು, ಸುಪ್ರೀಂ ತೀರ್ಪನ್ನು ಹಲವರು ಖಂಡಿಸಿದ್ದಾರೆ.

 

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

7 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

10 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

10 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

10 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

11 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

11 hours ago