Featured

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಮುಕ್ತ ಪ್ರವೇಶ ಸುಪ್ರೀಂನಿಂದ ಐತಿಹಾಸಿಕ ತೀರ್ಪು

ನವದೆಹಲಿ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ನಿಷೇಧಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಸಂವಿಧಾನ ಪೀಠ ಮಹಿಳೆಯರ ದೇಗುಲ ಪ್ರವೇಶಕ್ಕೆ ಅಸ್ತು ಎಂದಿದೆ.

ಮಹಿಳೆಯ ಕುರಿತ ಗ್ರಹಿಕೆ ಬದಲಾಗಬೇಕು. ಸಾಮಾಜಿಕ ಬದಲಾವಣೆ ಅಗತ್ಯವಿದೆ. ಮಹಿಳೆಯರನ್ನು ಸಮಾನವಾಗಿ ಪರಿಗಣಿಸಬೇಕು. ಮಹಿಳೆ ಬಗೆಗಿನ ದೃಷ್ಟಿಕೋನ ಬದಲಾಗಬೇಕು. ಮಹಿಳೆ ಬಗೆಗಿನ ತಾರತಮ್ಯ ನಿವಾರಣೆ ಆಗಬೇಕು. ಮಹಿಳೆಯರು ಅಬಲೆಯರಲ್ಲ. ಮಹಿಳೆಯರ ಬಗೆಗಿನ ಪೂಜ್ಯ ಭಾವನೆಗೆ ಧಕ್ಕೆ ಆಗಬಾರದು. ಧರ್ಮದಲ್ಲೂ ಪುರುಷ ಪ್ರಧಾನವಾಗಬಾರದು ಎಂದು ನ್ಯೂಯಾಧೀಶರಾದ ಮಿಶ್ರಾ, ಖಾನ್ವಿಲ್ಕರ್ ಜಂಟಿ ತೀರ್ಪು ನೀಡಿದ್ದಾರೆ.

ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ 10ರಿಂದ 50 ವರ್ಷದೊಳಗಿನ ಮಹಿಳೆಯರಿಗೆ ಪ್ರವೇಶ ನಿಷೇಧಿಸಿರುವುದನ್ನು ವಿರೋಧಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನೊಳಗೊಂಡ ಸಾಂವಿಧಾನಿಕ ಪೀಠ ನಿತ್ಯ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು.

ಅರ್ಜಿ ವಿಚಾರಣೆ ಸಂದರ್ಭದಲ್ಲಿ ಮಹಿಳೆಯರ ನಿಷೇಧ ಕ್ರಮವನ್ನು ಪ್ರಶ್ನಿಸಿದ್ದ ಸಂವಿಧಾನ ಪೀಠ, ಮಹಿಳೆಯರ ಧಾರ್ವಿುಕ ಹಕ್ಕನ್ನು ಕಸಿದುಕೊಳ್ಳುವುದು ಎಷ್ಟು ಸೂಕ್ತ ಎಂದು ಪ್ರಶ್ನಿಸಿತ್ತು.

2006ರಲ್ಲಿ ಇಂಡಿಯನ್‌ ಯಂಗ್‌ ಲಾಯರ್ಸ್‌ ಅಸೋಸಿಯೇಶನ್‌ ಹಾಗೂ ಇತರರು ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು. 2016ರ ಜನವರಿಯಲ್ಲಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಕಳೆದ ಅಕ್ಟೋಬರ್ 13ರಂದು ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿತ್ತು..

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago