ತಿರುವನಂತಪುರಂ:ಕೇರಳದ ಶಬರಿಮಲೆಯ ಅಯ್ಯಪ್ಪ ದೇಗುಲವನ್ನು ಪ್ರವೇಶಿಸುವ ಮೂಲಕ ಇಂದು ಇಬ್ಬರು ಮಹಿಳೆಯರು ಇತಿಹಾಸ ಸೃಷ್ಟಿ ಮಾಡಿದ್ದಾರೆ. . 40 ವರ್ಷ ವಯಸ್ಸಿನ ಇಬ್ಬರು ಮಹಿಳೆಯರು ದೇವಾಲಯವನ್ನು ಇಂದು ಬೆಳಗ್ಗೆ ಪ್ರವೇಶ ಮಾಡಿದ್ದಾರೆ ಎಂದು ಹೇಳಲಾಗಿದೆ.
ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಮಹಿಳೆಯರಿಗೆ ಸಮವಸ್ತ್ರ ಧರಿಸಿದ್ದ ಪೊಲೀಸರು ರಕ್ಷಣೆ ನೀಡಿದ್ದಾರೆ.
ಡಿಸೆಂಬರ್ ನಲ್ಲಿ ಇಬ್ಬರು ಮಹಿಳೆಯರು ಶಬರಿಮಲೆ ಪ್ರವೇಶಿಸಿಲು ಪ್ರಯತ್ನ ನಡೆಸಿದ್ದರು. ಆದರೆ ಈ ವೇಳೆ ಭಾರೀ ಪ್ರತಿಭಟನೆ ನಡೆದ ಪರಿಣಾಮ ದೇವಾಲಯ ಪ್ರವೇಶಿಸುವ ನಿರ್ಧಾರದಿಂದ ಮಹಿಳೆಯರು ಹಿಂದಕ್ಕೆ ಸರಿದಿದ್ದರು.
ಇದಲ್ಲದೆ ಮಹಿಳೆಯರು ದೇಗುಲ ಪ್ರವೇಶಿಸಿದ ವಿಚಾರವನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಧೃಡಪಡಿಸಿದ್ದಾರೆ. ಮಹಿಳೆಯರಿಬ್ಬರು ದೇವಾಲಯ ಪ್ರವೇಶಿಸಿದ ಹಿನ್ನಲೆಯಲ್ಲಿ ಅಯ್ಯಪ್ಪ ಭಕ್ತ ವಲಯದಲ್ಲಿ ಆಕ್ರೋಶ ಬುಗಿಲೆದ್ದಿದೆ.
ಸುಪ್ರೀಂ ಕೋರ್ಟ್ ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ ನೀಡಿದ ನಂತರ ಸಾಕಷ್ಟು ಹೋರಾಟಗಳು ನಡೆದಿತ್ತು. ಹಿಂದೂ ಸಂಘಟನೆಗಳು ತೀರ್ಪನ್ನು ವಿರೋಧಿಸಿ ಕೇರಳ ರಾಜ್ಯದಲ್ಲಿ ಪ್ರತಿಭಟನೆ ನಡೆಸಿದ್ದರೆ, ಮಹಿಳಾ ಪರ ಸಂಘಟನೆಗಳು ತೀರ್ಪನ್ನು ಸ್ವಾಗತಿಸಿತ್ತು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…