Featured

ಶಬರಿಮಲೆ ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆ ಪ್ರತಿ ದಿನ 60,000 ಕ್ಕೂ ಹೆಚ್ಚಿನ ಸಂಖ್ಯೆಗೆ ಏರಿಕೆ – Vishwanews24

ಶಬರಿಮಲೆ ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆ ಪ್ರತಿ ದಿನ 60,000 ಕ್ಕೂ ಹೆಚ್ಚಿನ ಸಂಖ್ಯೆಗೆ ಏರಿಕೆ – Vishwanews24

ತಿರುವನಂತಪುರಂ: ಕೇರಳ ಸರ್ಕಾರ ಶಬರಿಮಲೆ ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆಯನ್ನು ಪ್ರತಿದಿನ 60,000ಕ್ಕೂ ಹೆಚ್ಚಿನ ಸಂಖ್ಯೆಗೆ ಏರಿಕೆ ಮಾಡಿದೆ.

ಕೋವಿಡ್ ಪ್ರಕರಣಗಳು ಇಳಿಮುಖವಾಗುತ್ತಿರುವ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಭಕ್ತರ ಸಂಖ್ಯೆ ಏರಿಕೆ ಮಾಡಲಾಗಿದ್ದರೂ, ವರ್ಚುವಲ್ ಸರತಿ ವ್ಯವಸ್ಥೆ ಜಾರಿಯಲ್ಲಿರುತ್ತದೆ ಎಂದು ತಿಳಿದುಬಂದಿದೆ.

ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಬೆಳಗ್ಗೆ 7 ರಿಂದ ಮಧ್ಯಾಹ್ನದವರೆಗೆ ನೆಯ್ಯಭಿಷೇಕವನ್ನು ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ದೇವಸ್ವಂ ಸಚಿವ ಕೆ. ರಾಧಾಕೃಷ್ಣನ್ ಅವರ ಕಚೇರಿ ತಿಳಿಸಿದೆ. ಮೂಲಗಳ ಪ್ರಕಾರ ಸನ್ನಿಧಾನದಲ್ಲಿ ಭಕ್ತರಿಗಾಗಿ 500 ಕೊಠಡಿಗಳ ಸೌಲಭ್ಯವನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ. ಆದರೆ ಕೋವಿಡ್-19 ನಿಯಮಗಳಿಂದಾಗಿ ಪ್ರತಿ ಕೊಠಡಿಯಲ್ಲಿ ಒಬ್ಬರಿಗೆ ಮಾತ್ರ ಅವಕಾಶವಿರುತ್ತದೆ.

ಶಬರಿಮಲೆಯಲ್ಲಿ ಕಟ್ಟುನಿಟ್ಟಾದ ಕೋವಿಡ್-19 ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗುತ್ತಿದೆ. ಎರಡು ಹಂತದ ಲಸಿಕೆ ಪ್ರಮಾಣಪತ್ರ ಅಥವಾ 72 ಗಂಟೆಗಳ ಮೊದಲಿನ ಆರ್​ಟಿ-ಪಿಸಿಆರ್​​ನ ನೆಗೆಟಿವ್​ ಪ್ರಮಾಣಪತ್ರವನ್ನು ನೀಡಬೇಕಾಗುತ್ತದೆ. ಕೋವಿಡ್ -19 ಪ್ರೋಟೋಕಾಲ್‌ಗಳ ಪ್ರಕಾರ, ಪ್ರತಿಯೊಂದು ಕೊಠಡಿಗಳಲ್ಲಿ ನೈರ್ಮಲ್ಯೀಕರಣವನ್ನು ನಡೆಸುವಂತೆ ತಿರುವಾಂಕೂರ್ ದೇವಸ್ವಂ ಬೋರ್ಡ್ (ಟಿಡಿಬಿ) ಅನ್ನು ಕೇಳಲಾಗಿದೆ.

ಪಂಬಾದಿಂದ ನೀಲಿಮಲೈ, ಅಪ್ಪಾಚಿಮೇಡು ಮತ್ತು ಮರಕ್ಕೂಟಂ ಮೂಲಕ ಹಾದುಹೋಗುವ ಸಾಂಪ್ರದಾಯಿಕ ಮಾರ್ಗವನ್ನು (ದೊಡ್ಡಪಾದ) ಭಕ್ತರಿಗೆ ತೆರೆಯಲಾಗುತ್ತಿದೆ. ಶಬರಿಮಲೆಯಲ್ಲಿ ಭಕ್ತರು ಅಥವಾ ಅಧಿಕಾರಿಗಳಲ್ಲಿ ಯಾವುದೇ ಓಮಿಕ್ರಾನ್ ಪ್ರಕರಣಗಳು ಪತ್ತೆಯಾದರೆ, ಎಲ್ಲಾ ಸಡಿಲಿಕೆಗಳನ್ನು ಒಂದೇ ಬಾರಿಗೆ ಹಿಂಪಡೆಯಲಾಗುವುದು ಎಂದು ಕಂದಾಯ (ದೇವಸ್ವಂ) ಇಲಾಖೆಯು ಆದೇಶ ಹೊರಡಿಸಿದೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago