ತಿರುವನಂತಪುರಂ: ಕೇರಳ ಸರ್ಕಾರ ಶಬರಿಮಲೆ ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆಯನ್ನು ಪ್ರತಿದಿನ 60,000ಕ್ಕೂ ಹೆಚ್ಚಿನ ಸಂಖ್ಯೆಗೆ ಏರಿಕೆ ಮಾಡಿದೆ.
ಕೋವಿಡ್ ಪ್ರಕರಣಗಳು ಇಳಿಮುಖವಾಗುತ್ತಿರುವ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಭಕ್ತರ ಸಂಖ್ಯೆ ಏರಿಕೆ ಮಾಡಲಾಗಿದ್ದರೂ, ವರ್ಚುವಲ್ ಸರತಿ ವ್ಯವಸ್ಥೆ ಜಾರಿಯಲ್ಲಿರುತ್ತದೆ ಎಂದು ತಿಳಿದುಬಂದಿದೆ.
ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಬೆಳಗ್ಗೆ 7 ರಿಂದ ಮಧ್ಯಾಹ್ನದವರೆಗೆ ನೆಯ್ಯಭಿಷೇಕವನ್ನು ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ದೇವಸ್ವಂ ಸಚಿವ ಕೆ. ರಾಧಾಕೃಷ್ಣನ್ ಅವರ ಕಚೇರಿ ತಿಳಿಸಿದೆ. ಮೂಲಗಳ ಪ್ರಕಾರ ಸನ್ನಿಧಾನದಲ್ಲಿ ಭಕ್ತರಿಗಾಗಿ 500 ಕೊಠಡಿಗಳ ಸೌಲಭ್ಯವನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ. ಆದರೆ ಕೋವಿಡ್-19 ನಿಯಮಗಳಿಂದಾಗಿ ಪ್ರತಿ ಕೊಠಡಿಯಲ್ಲಿ ಒಬ್ಬರಿಗೆ ಮಾತ್ರ ಅವಕಾಶವಿರುತ್ತದೆ.
ಶಬರಿಮಲೆಯಲ್ಲಿ ಕಟ್ಟುನಿಟ್ಟಾದ ಕೋವಿಡ್-19 ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗುತ್ತಿದೆ. ಎರಡು ಹಂತದ ಲಸಿಕೆ ಪ್ರಮಾಣಪತ್ರ ಅಥವಾ 72 ಗಂಟೆಗಳ ಮೊದಲಿನ ಆರ್ಟಿ-ಪಿಸಿಆರ್ನ ನೆಗೆಟಿವ್ ಪ್ರಮಾಣಪತ್ರವನ್ನು ನೀಡಬೇಕಾಗುತ್ತದೆ. ಕೋವಿಡ್ -19 ಪ್ರೋಟೋಕಾಲ್‌ಗಳ ಪ್ರಕಾರ, ಪ್ರತಿಯೊಂದು ಕೊಠಡಿಗಳಲ್ಲಿ ನೈರ್ಮಲ್ಯೀಕರಣವನ್ನು ನಡೆಸುವಂತೆ ತಿರುವಾಂಕೂರ್ ದೇವಸ್ವಂ ಬೋರ್ಡ್ (ಟಿಡಿಬಿ) ಅನ್ನು ಕೇಳಲಾಗಿದೆ.
ಪಂಬಾದಿಂದ ನೀಲಿಮಲೈ, ಅಪ್ಪಾಚಿಮೇಡು ಮತ್ತು ಮರಕ್ಕೂಟಂ ಮೂಲಕ ಹಾದುಹೋಗುವ ಸಾಂಪ್ರದಾಯಿಕ ಮಾರ್ಗವನ್ನು (ದೊಡ್ಡಪಾದ) ಭಕ್ತರಿಗೆ ತೆರೆಯಲಾಗುತ್ತಿದೆ. ಶಬರಿಮಲೆಯಲ್ಲಿ ಭಕ್ತರು ಅಥವಾ ಅಧಿಕಾರಿಗಳಲ್ಲಿ ಯಾವುದೇ ಓಮಿಕ್ರಾನ್ ಪ್ರಕರಣಗಳು ಪತ್ತೆಯಾದರೆ, ಎಲ್ಲಾ ಸಡಿಲಿಕೆಗಳನ್ನು ಒಂದೇ ಬಾರಿಗೆ ಹಿಂಪಡೆಯಲಾಗುವುದು ಎಂದು ಕಂದಾಯ (ದೇವಸ್ವಂ) ಇಲಾಖೆಯು ಆದೇಶ ಹೊರಡಿಸಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…