ಕೇರಳ: ಶಬರಿಮಲೆ ಯಾತ್ರೆ ವೇಳೆ ಹೆಚ್ಚುತ್ತಿರುವ ಜನಸಂದಣಿ ಮತ್ತು ನಕಲಿ ಪಾಸ್‌ಗಳ ಹಾವಳಿಯನ್ನು ಗಂಭೀರವಾಗಿ ಪರಿಗಣಿಸಿದ ಕೇರಳ ಹೈಕೋರ್ಟ್, ” ವರ್ಚುವಲ್ ಕ್ಯೂ ಮತ್ತು ಸ್ಪಾಟ್ ಬುಕಿಂಗ್ ಪಾಸ್‌ಗಳನ್ನು ಹೊಂದಿರುವ ಯಾತ್ರಿಕರಿಗೆ ಮಾತ್ರ ಸನ್ನಿಧಾನ ಪ್ರವೇಶ ಅನುಮತಿ ನೀಡಬೇಕು” ಎಂದು ಖಡಕ್ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ವಿ. ರಾಜಾ ವಿಜಯರಾಘವನ್ ಹಾಗೂ ಕೆ.ವಿ. ಜಯಕುಮಾರ್ ಅವರನ್ನೊಳಗೊಂಡ ದೇವಸ್ವಂ ಪೀಠವು ಹಾಸ್‌ನಲ್ಲಿ ನಮೂದಿಸಿರುವ ದಿನಾಂಕ-ಸಮಯವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸ್ಪಷ್ಟ ಸೂಚಿಸಿದೆ.
ನಕಲಿ ಪಾಸ್‌ಗಳೊಂದಿಗೆ ಬರುವವರನ್ನು ಯಾವುದೇ ಕಾರಣಕ್ಕೂ ಒಳಗೆ ಬಿಡಬಾರದು ಎಂದು ನ್ಯಾಯಾಲಯ ಎಚ್ಚರಿಸಿದೆ. “ಆಡಳಿತಾತ್ಮಕ ನಿರ್ಲಕ್ಷ್ಯದಿಂದ ಲಕ್ಷಾಂತರ ಯಾತ್ರಿಕರ ಜೀವಕ್ಕೆ ಅಪಾಯ ಉಂಟಾಗುವಂತೆ ಮಾಡಲು ಸಾಧ್ಯವಿಲ್ಲ,” ಎಂದು ನ್ಯಾಯಾಲಯ ಹೇಳಿದ್ದು, ತಿರುವಾಂಕೂರು ದೇವಸ್ವಂ ಮಂಡಳಿ ಹಾಗೂ ಪೊಲೀಸರಿಗೆ ಖಡಕ್ ಎಚ್ಚರಿಕೆ ನೀಡಿದೆ.
ಹೈಕೋರ್ಟ್ ವಿಧಿಸಿದ್ದಂತೆ, ಪ್ರತಿದಿನ 70,000 ವರ್ಚುವಲ್ ಕ್ಯೂ ಮತ್ತು 5,000 ಸ್ಪಾಟ್ ಬುಕಿಂಗ್ ಪಾಸ್‌ಗಳ ಮಿತಿಯನ್ನು ನಿಗದಿಪಡಿಸಲಾಗಿತ್ತು. ಆದರೆ, ಯಾತ್ರಿಕರ ಸಂಖ್ಯೆ ಮತ್ತು ನಿಯಂತ್ರಣದ ನಡಿಲತೆಯಿಂದಾಗಿ ಕಳೆದ ಕೆಲವು ದಿನಗಳಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಯಾತ್ರಿಕರು ಸನ್ನಿಧಾನ ತಲುಪಿರುವುದು ನ್ಯಾಯಾಲಯದ ಗಮನಕ್ಕೆ ಬಂತು.
ಶಬರಿಮಲೆ ವಿಶೇಷ ಆಯುಕ್ತರು ಸಲ್ಲಿಸಿದ ವರದಿಯಲ್ಲಿ 7,877 ಪಾಸ್‌ಗಳ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ ಎಂದೂ; ನಕಲಿ ಪಾಸ್‌ಗಳ ಬಳಕೆ ಹಾಗೂ ಗುಂಪುಗಳಲ್ಲಿ ಪಾಸ್‌ಗಳಿಲ್ಲದೆ ಆಗಮಿಸುವ ಘಟನೆಗಳನ್ನೂ ಉಲ್ಲೇಖಿಸಲಾಗಿದೆ. “ಇಂತಹ ಗುಂಪುಗಳನ್ನು ಒಟ್ಟಿಗೆ ಒಳಗಡೆ ಬಿಡುವ ಕ್ರಮವೇ ದೊಡ್ಡ ಸಮಸ್ಯೆಗೆ ಕಾರಣ,” ಎಂದು ಅಮಿಕಸ್ ಕ್ಯೂರಿ ನ್ಯಾಯಾಲಯದ ಗಮನಕ್ಕೆ ತಂದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…