Featured

ಶಬರಿಮಲೆ ಪ್ರವೇಶಕ್ಕೆ ಪಾಸ್ ಕಡ್ಡಾಯ : ಜೊತೆಗೆ ಹಲವು ಷರತ್ತುಗಳು! vishwanews24

ಶಬರಿಮಲೆ ಪ್ರವೇಶಕ್ಕೆ ಪಾಸ್ ಕಡ್ಡಾಯ- ಜೊತೆಗೆ ಹಲವು ಷರತ್ತುಗಳು!

ಕೇರಳ: ಶಬರಿಮಲೆ ಯಾತ್ರೆ ವೇಳೆ ಹೆಚ್ಚುತ್ತಿರುವ ಜನಸಂದಣಿ ಮತ್ತು ನಕಲಿ ಪಾಸ್‌ಗಳ ಹಾವಳಿಯನ್ನು ಗಂಭೀರವಾಗಿ ಪರಿಗಣಿಸಿದ ಕೇರಳ ಹೈಕೋರ್ಟ್, ” ವರ್ಚುವಲ್ ಕ್ಯೂ ಮತ್ತು ಸ್ಪಾಟ್ ಬುಕಿಂಗ್ ಪಾಸ್‌ಗಳನ್ನು ಹೊಂದಿರುವ ಯಾತ್ರಿಕರಿಗೆ ಮಾತ್ರ ಸನ್ನಿಧಾನ ಪ್ರವೇಶ ಅನುಮತಿ ನೀಡಬೇಕು” ಎಂದು ಖಡಕ್ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ವಿ. ರಾಜಾ ವಿಜಯರಾಘವನ್ ಹಾಗೂ ಕೆ.ವಿ. ಜಯಕುಮಾರ್ ಅವರನ್ನೊಳಗೊಂಡ ದೇವಸ್ವಂ ಪೀಠವು ಹಾಸ್‌ನಲ್ಲಿ ನಮೂದಿಸಿರುವ ದಿನಾಂಕ-ಸಮಯವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸ್ಪಷ್ಟ ಸೂಚಿಸಿದೆ.

ನಕಲಿ ಪಾಸ್‌ಗಳೊಂದಿಗೆ ಬರುವವರನ್ನು ಯಾವುದೇ ಕಾರಣಕ್ಕೂ ಒಳಗೆ ಬಿಡಬಾರದು ಎಂದು ನ್ಯಾಯಾಲಯ ಎಚ್ಚರಿಸಿದೆ. “ಆಡಳಿತಾತ್ಮಕ ನಿರ್ಲಕ್ಷ್ಯದಿಂದ ಲಕ್ಷಾಂತರ ಯಾತ್ರಿಕರ ಜೀವಕ್ಕೆ ಅಪಾಯ ಉಂಟಾಗುವಂತೆ ಮಾಡಲು ಸಾಧ್ಯವಿಲ್ಲ,” ಎಂದು ನ್ಯಾಯಾಲಯ ಹೇಳಿದ್ದು, ತಿರುವಾಂಕೂರು ದೇವಸ್ವಂ ಮಂಡಳಿ ಹಾಗೂ ಪೊಲೀಸರಿಗೆ ಖಡಕ್ ಎಚ್ಚರಿಕೆ ನೀಡಿದೆ.

ಹೈಕೋರ್ಟ್ ವಿಧಿಸಿದ್ದಂತೆ, ಪ್ರತಿದಿನ 70,000 ವರ್ಚುವಲ್ ಕ್ಯೂ ಮತ್ತು 5,000 ಸ್ಪಾಟ್ ಬುಕಿಂಗ್ ಪಾಸ್‌ಗಳ ಮಿತಿಯನ್ನು ನಿಗದಿಪಡಿಸಲಾಗಿತ್ತು. ಆದರೆ, ಯಾತ್ರಿಕರ ಸಂಖ್ಯೆ ಮತ್ತು ನಿಯಂತ್ರಣದ ನಡಿಲತೆಯಿಂದಾಗಿ ಕಳೆದ ಕೆಲವು ದಿನಗಳಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಯಾತ್ರಿಕರು ಸನ್ನಿಧಾನ ತಲುಪಿರುವುದು ನ್ಯಾಯಾಲಯದ ಗಮನಕ್ಕೆ ಬಂತು.

ಶಬರಿಮಲೆ ವಿಶೇಷ ಆಯುಕ್ತರು ಸಲ್ಲಿಸಿದ ವರದಿಯಲ್ಲಿ 7,877 ಪಾಸ್‌ಗಳ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ ಎಂದೂ; ನಕಲಿ ಪಾಸ್‌ಗಳ ಬಳಕೆ ಹಾಗೂ ಗುಂಪುಗಳಲ್ಲಿ ಪಾಸ್‌ಗಳಿಲ್ಲದೆ ಆಗಮಿಸುವ ಘಟನೆಗಳನ್ನೂ ಉಲ್ಲೇಖಿಸಲಾಗಿದೆ. “ಇಂತಹ ಗುಂಪುಗಳನ್ನು ಒಟ್ಟಿಗೆ ಒಳಗಡೆ ಬಿಡುವ ಕ್ರಮವೇ ದೊಡ್ಡ ಸಮಸ್ಯೆಗೆ ಕಾರಣ,” ಎಂದು ಅಮಿಕಸ್ ಕ್ಯೂರಿ ನ್ಯಾಯಾಲಯದ ಗಮನಕ್ಕೆ ತಂದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

17 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

17 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

17 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

18 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

18 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

18 hours ago