ಕೊಚ್ಚಿ:ಶಬರಿಮಲೆ ಅಯ್ಯಪ್ಪನ ದರ್ಶನಕ್ಕಾಗಿ ಬಂದಿದ್ದ ಭೂಮಾತಾ ಬ್ರಿಗೇಡ್ ಮುಖ್ಯಸ್ಥೆ ತೃಪ್ತಿ ದೇಸಾಯಿ ದೇವರ ದರ್ಶನ ಕಾಣದೆ ಮಹಾರಾಷ್ಟ್ರಕ್ಕೆ ವಾಪಸಾಗಿದ್ದಾರೆ.
ತೃಪ್ತಿ ಹಾಗೂ ಬೆಂಬಲಿಗರು ಶಬರಿಮಲೆ ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದ ಅಯ್ಯಪ್ಪಸ್ವಾಮಿ ಭಕ್ತರು ಅವರನ್ನು ಕೊಚ್ಚಿ ವಿಮಾನ ನಿಲ್ದಾಣದಿಂದ ಹೊರಬರದಂತೆ ತಡೆ ಹಿಡಿದಿದ್ದರು. ಈ ಸಂದರ್ಭ ಪೊಲೀಸರು ತೃಪ್ತಿ ಅವರಿಗೆ ರಕ್ಷಣೆ ಒದಗಿಸಿದರೂ, ಅಲ್ಲಿಂದ ಸನ್ನಿಧಾನಕ್ಕೆ ತೆರಳಲು ಸಾಧ್ಯವಾಗಿರಲಿಲ್ಲ.
ನಿರಂತರ ಪ್ರತಿಭಟನೆ ಹಿನ್ನಲೆಯಲ್ಲಿ ತೃಪ್ತಿ ದೇಸಾಯಿ ಮತ್ತು ಅವರ ತಂಡ ಕೊಚ್ಚಿ ವಿಮಾನ ನಿಲ್ದಾಣದಲ್ಲೇ ಉಳಿಯುವಂತಾಯಿತು. ಸುಮಾರು 14 ಗಂಟೆಗಳ ಕಾಲ ಕಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಕೊನೆಗೆ ಪೊಲೀಸರ ಸಲಹೆ ಮೇರೆಗೆ ತೃಪ್ತಿ ದೇಸಾಯಿ ಮತ್ತು ಅವರ ತಂಡವನ್ನು ಮನವೊಲಿಸಿ ಪುಣೆಗೆ ರಾತ್ರಿ 9.25ರ ವಿಮಾನದಲ್ಲಿ ವಾಪಸ್ ಕಳುಹಿಸಲಾಗಿದೆ.
“ಈ ಬಾರಿ ನಾವು ಶಬರಿಮಲೆಗೆ ಹೋಗುವುದಕ್ಕೂ ಮೊದಲು ಘೋಷಣೆ ಮಾಡಿಕೊಂಡಿದ್ದೆವು. ಆದರೆ, ಮುಂದಿನ ಬಾರಿ ಹೋಗುವಾಗ ಸದ್ದಿಲ್ಲದೆ ಹೋಗುವುದಾಗಿ” ತೃಪ್ತಿ ದೇಸಾಯಿ ಹೇಳಿದ್ದಾರೆ.
ಮುಂದಿನ ಬಾರಿ ಯಾವುದೇ ರೀತಿಯ ಮುನ್ಸೂಚನೆ ನೀಡದೇ ಗೆರಿಲ್ಲಾ ತಂತ್ರ ಅನುಸರಿಸಿ ಶಬರಿಮಲೆಗೆ ಹೋಗಿ ಅಯ್ಯಪ್ಪನ ದರ್ಶನ ಪಡೆಯುತ್ತೇವೆ. ಗೆರಿಲ್ಲಾ ತಂತ್ರ ಅನುಸರಿಸುತ್ತೇವೆ. ಇದಕ್ಕೆ ಪೊಲೀಸರೂ ನಮಗೆ ಬೆಂಬಲ ನೀಡಲಿದ್ದಾರೆ ಎಂದು ಹೇಳಿದ್ದಾರೆ.
“ಮುಂದಿನ ಬಾರಿ ಬಂದಾಗ ಭದ್ರತೆ ಒದಗಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ನಮ್ಮಿಂದ ಅಲ್ಲಿ ಅಶಾಂತಿ ಉಂಟಾಗದಿರಲೆಂದು ನಾವು ಹಿಂದಿರುಗಿದ್ದೇವೆ. ನಾವು ದೇವರ ದರ್ಶನಕ್ಕೆ ಆಗಮಿಸುತ್ತಿರುವುದಾಗಿ ಘೋಷಣೆ ಮಾಡಿ ಕೇರಳಕ್ಕೆ ಹೊರಟಿದ್ದರಿಂದಲೇ ನಮ್ಮ ವಿರುದ್ಧ ಪ್ರತಿಭಟನೆಗಳು ನಡೆದಿವೆ. ಮುಂದಿನ ಬಾರಿ ಯಾವುದೇ ಮುನ್ಸೂಚನೆ ನೀಡದೆ ಹೋಗುತ್ತೇವೆ” ಎಂದು ಹೇಳಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…