ನವದೆಹಲಿ: ಇನ್ನು ಮುಂದೆ ಶಬರಿಮಲೆ ಭಕ್ತಾದಿಗಳಿಗೆ ವಿಮಾನದ ‘ಕ್ಯಾಬಿನ್ ಬ್ಯಾಗೇಜ್’ನಲ್ಲಿ ಇರುಮುಡಿ ಜತೆಗೆ ತೆಂಗಿನಕಾಯಿ ಕೊಂಡೊಯ್ಯಲು ವಿಮಾನಯಾನ ಭದ್ರತಾ ನಿಯಂತ್ರಕ ಸಂಸ್ಥೆಯಾದ ‘ಬಿಸಿಎಎಸ್’ ಅನುಮತಿ ನೀಡಿದೆ.
ಸಾಮಾನ್ಯವಾಗಿ ತೆಂಗಿನಕಾಯಿ ದಹನಶೀಲವಾಗಿದ್ದರಿಂದ ಅದನ್ನು ವಿಮಾನದೊಳಗಡೆ ಕ್ಯಾಬಿನ್ ಬ್ಯಾಗೇಜ್‌ನಲ್ಲಿ ಕೊಂಡೊಯ್ಯಲು ಬಿಡಲಾಗುತ್ತಿರಲಿಲ್ಲ. ಆದರೆ ವಿಶೇಷವಾಗಿ ಶಬರಿಮಲೆ ಯಾತ್ರಾರ್ಥಿಗಳ ಇರುಮುಡಿ ಇರುವ ಬ್ಯಾಗೇಜ್ ಅನ್ನು ಸಂಪೂರ್ಣವಾಗಿ ತಪಾಸಣೆಗೆ ಒಳಪಡಿಸಿದ ಬಳಿಕ, ಅಂದರೆ ಎಕ್ಸ್‌ರೇ, ಸ್ಫೋಟಕ ಪತ್ತೆ ಪರೀಕ್ಷೆ ಹಾಗೂ ವಿಮಾನಯಾನ ಭದ್ರತಾ ಸಿಬ್ಬಂದಿ (ಎಎಸ್‌ಜಿ) ಸ್ವಯಂ ಪರೀಕ್ಷೆ ನಡೆಸಿದ ಬಳಿಕ ಅನುಮತಿ ನೀಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶಬರಿಮಲೆಗೆ ಹೋಗುತ್ತಿರುವ ಭಕ್ತಾದಿಗಳು ದೇವರಿಗೆ ಸಮರ್ಪಿಸಲು ತಮ್ಮೊಂದಿಗೆ ಇರುಮುಡಿ ಕಟ್ಟು (ತುಪ್ಪ ಹಾಗೂ ತೆಂಗಿನಕಾಯಿ ಇರುವ ಕಟ್ಟು) ಕೊಂಡೊಯ್ಯುತ್ತಾರೆ. ಈ ನಿಟ್ಟಿನಲ್ಲಿಯಾತ್ರಾರ್ಥಿಗಳ ಅನುಕೂಲಕ್ಕಾಗಿ ನಿಗದಿತ ಅವಧಿಯವರೆಗೆ ಮಾತ್ರ ಈ ವಿಶೇಷ ವಿನಾಯಿತಿ ನೀಡಲಾಗಿದೆ ಎಂದು ‘ಬಿಸಿಎಎಸ್ ’ ಸ್ಪಷ್ಟಪಡಿಸಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…