Featured

ಶಬರಿಮಲೆ ವಿವಾದ : ಪರಿಶೀಲನೆ ಗಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಶಬರಿಮಲೆಯತ್ತ ಪ್ರಯಾಣ ..

ಮಂಗಳೂರು ,: ಶಬರಿಮಲೆಯಲ್ಲಿ ಎದುರಾಗಿರುವ ಪ್ರಸ್ತುತ ಸ್ಥಿತಿಗತಿಗಳ ಕುರಿತು ಕೇಂದ್ರಕ್ಕೆ ವರದಿ ನೀಡುವ ಸಲುವಾಗಿ ಅಧ್ಯಯನ ವರದಿ ತಯಾರಿಸಲು ದಕ್ಷಿಣಕನ್ನಡ ಲೋಕಸಭಾ ಸದಸ್ಯ ಹಾಗು ಕೇರಳ ಸಹ ಪ್ರಭಾರಿ ನಳಿನ್ ಕುಮಾರ್ ಕಟೀಲ್ ಶಬರಿಮಲೆ ತಲುಪಿದ್ದಾರೆ.

ಇಂದು ಮುಂಜಾನೆ ಕೇರಳದ ಚೆಂಗನ್ನೂರು ತಲುಪಿದ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಸಂಸದ ವಿ.ಮುರಳೀಧರನ್ ರಾಜ್ಯ ಕಾರ್ಯದರ್ಶಿ ಜೆ.ಆರ್. ಪದ್ಮಕುಮಾರ್ ಮತ್ತು ಪಥನಂತಿಟ್ಟ ಜಿಲ್ಲೆಯ ಅಧ್ಯಕ್ಷ ಅಶೋಕನ್ ಜೊತೆ ಚರ್ಚೆ ನಡೆಸಿದ್ದಾರೆ.

ಸಂಸದ ನಳಿನ್ ಕುಮಾರ್ ಕಟೀಲ್ ಅವರು ನಿಲಕ್ಕಲ್, ಪಂಪಾ ಹಾಗೂ ಸನ್ನಿದಾನ ಪ್ರದೇಶಗಳಿಗೆ ಭೇಟಿ ನೀಡಿ ಅಯ್ಯಪ್ಪ ಭಕ್ತರ ಸಮಸ್ಯೆಗಳ ಸದ್ಯ ಅಲ್ಲಿನ ಪರಿಸ್ಥಿತಿ ಬಗ್ಗೆ ಅಧ್ಯಯನ ವರದಿ ತಯಾರಿಸಲಿದ್ದಾರೆ.

ಮಾಲಾಧಾರಿಯಾಗಿ ತೆರಳಿರುವ  ನಳಿನ್ ಕುಮಾರ್ ಶಬರಿಮಲೆ ಅಯ್ಯಪ್ಪ ದೇವರ ದರ್ಶನವನ್ನೂ ಪಡೆಯಲಿದ್ದಾರೆ. ನಿಲಕ್ಕಲ್, ಪಂಪಾ ಹಾಗೂ ಸನ್ನಿದಾನ ಪ್ರದೇಶಗಳಿಗೆ ಭೇಟಿ ನೀಡಿ ಅಯ್ಯಪ್ಪ ಭಕ್ತರ ಸಮಸ್ಯೆಗಳ ಸದ್ಯ ಅಲ್ಲಿನ ಪರಿಸ್ಥಿತಿ ಬಗ್ಗೆ ಅಧ್ಯಯನ ವರದಿ ತಯಾರಿಸಲಿದ್ದಾರೆ. ಆದರೆ ಕೇರಳ ಪೊಲೀಸರು ಶಬರಿಮಲೆಗೆ ಭೇಟಿ ನೀಡಿರುವ ಸಂಸದ ನಳಿನ್ ಕುಮಾರ್ ಕಟೀಲ್ ,  ರಾಜ್ಯ ಸಭಾ ಸದಸ್ಯ ವಿ.ಮುರಳೀಧರನ್ ಸೇರಿದಂತೆ ತಂಡ ದಲ್ಲಿರುವ ಎಲ್ಲಾ ಬಿಜೆಪಿ ಮುಖಂಡರನ್ನು ಕೇರಳ ಪೋಲೀಸರು ಬಂಧಿಸಲಿದ್ದಾರೆ ಎಂದು ತಿಳಿದುಬಂದಿದೆ.

ಒಂದು ವೇಳೆ ನಳಿನ್ ಕುಮಾರ್‌ ಕೇರಳದಲ್ಲಿ ಬಂಧನವಾದಲ್ಲಿ ದಕ್ಷಿಣಕನ್ನಡ ಜಿಲ್ಲಯಲ್ಲಿಯೂ ಕೇರಳ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆಗಳು ತೀವೃಗೊಳ್ಳುವ ಸಾಧ್ಯತೆಗಳೂ ಇದೆ.

ಪೊಲೀಸ್‌ ಬಿಗಿ ಬಂದೋಬಸ್ತ್‌ನಲ್ಲಿ ನೂರಾರು ಭಕ್ತರು ದರ್ಶನ ಅಯ್ಯಪ್ಪನ ದರ್ಶನ ಪಡೆಯುತ್ತಿದ್ದಾರೆ. ಶಬರಿಮಲೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾವಿರಾರು ಪೊಲೀಸರು ಬಿಗಿ ಬಂದೋಬಸ್ತ್ ನಡೆಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago