ಮಂಗಳೂರು ,: ಶಬರಿಮಲೆಯಲ್ಲಿ ಎದುರಾಗಿರುವ ಪ್ರಸ್ತುತ ಸ್ಥಿತಿಗತಿಗಳ ಕುರಿತು ಕೇಂದ್ರಕ್ಕೆ ವರದಿ ನೀಡುವ ಸಲುವಾಗಿ ಅಧ್ಯಯನ ವರದಿ ತಯಾರಿಸಲು ದಕ್ಷಿಣಕನ್ನಡ ಲೋಕಸಭಾ ಸದಸ್ಯ ಹಾಗು ಕೇರಳ ಸಹ ಪ್ರಭಾರಿ ನಳಿನ್ ಕುಮಾರ್ ಕಟೀಲ್ ಶಬರಿಮಲೆ ತಲುಪಿದ್ದಾರೆ.
ಇಂದು ಮುಂಜಾನೆ ಕೇರಳದ ಚೆಂಗನ್ನೂರು ತಲುಪಿದ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಸಂಸದ ವಿ.ಮುರಳೀಧರನ್ ರಾಜ್ಯ ಕಾರ್ಯದರ್ಶಿ ಜೆ.ಆರ್. ಪದ್ಮಕುಮಾರ್ ಮತ್ತು ಪಥನಂತಿಟ್ಟ ಜಿಲ್ಲೆಯ ಅಧ್ಯಕ್ಷ ಅಶೋಕನ್ ಜೊತೆ ಚರ್ಚೆ ನಡೆಸಿದ್ದಾರೆ.
ಸಂಸದ ನಳಿನ್ ಕುಮಾರ್ ಕಟೀಲ್ ಅವರು ನಿಲಕ್ಕಲ್, ಪಂಪಾ ಹಾಗೂ ಸನ್ನಿದಾನ ಪ್ರದೇಶಗಳಿಗೆ ಭೇಟಿ ನೀಡಿ ಅಯ್ಯಪ್ಪ ಭಕ್ತರ ಸಮಸ್ಯೆಗಳ ಸದ್ಯ ಅಲ್ಲಿನ ಪರಿಸ್ಥಿತಿ ಬಗ್ಗೆ ಅಧ್ಯಯನ ವರದಿ ತಯಾರಿಸಲಿದ್ದಾರೆ.
ಅಲ್ಲದೆ ಮಾಲಾಧಾರಿಯಾಗಿ ತೆರಳಿರುವ ಅವರು ಶಬರಿಮಲೆ ಅಯ್ಯಪ್ಪ ದೇವರ ದರ್ಶನವನ್ನೂ ಪಡೆಯಲಿದ್ದಾರೆ.
ಅಧ್ಯಯನ ನಡೆಸಿ ತಯಾರಿಸಿದ ವರದಿಯನ್ನು ಕೇಂದ್ರ ಬಿಜೆಪಿ ನಾಯಕರುಗಳಿಗೆ ನಳಿನ್ ಕುಮಾರ್ ಕಟೀಲ್ ಸಲ್ಲಿಸಲಿದ್ದಾರೆ.
ಮೂಲಗಳ ಪ್ರಕಾರ ಶಬರಿಮಲೆಗೆ ಭೇಟಿ ನೀಡಿರುವ ಸಂಸದ ನಳಿನ್ ಕುಮಾರ್ ಕಟೀಲ್ , ರಾಜ್ಯ ಸಭಾ ಸದಸ್ಯ ವಿ.ಮುರಳೀಧರನ್ ಸೇರಿದಂತೆ ತಂಡ ದಲ್ಲಿರುವ ಎಲ್ಲಾ ಬಿಜೆಪಿ ಮುಖಂಡರನ್ನು ಕೇರಳ ಪೋಲೀಸರು ಬಂಧಿಸಲಿದ್ದಾರೆ ಎಂದು ತಿಳಿದುಬಂದಿದೆ.
ಒಂದು ವೇಳೆ ನಳಿನ್ ಕುಮಾರ್ ಕೇರಳದಲ್ಲಿ ಬಂಧನವಾದಲ್ಲಿ ದಕ್ಷಿಣಕನ್ನಡ ಜಿಲ್ಲಯಲ್ಲಿಯೂ ಕೇರಳ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆಗಳು ತೀವೃಗೊಳ್ಳುವ ಸಾಧ್ಯತೆಗಳೂ ಇದೆ.
ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ನೂರಾರು ಭಕ್ತರು ದರ್ಶನ ಅಯ್ಯಪ್ಪನ ದರ್ಶನ ಪಡೆಯುತ್ತಿದ್ದಾರೆ. ಶಬರಿಮಲೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾವಿರಾರು ಪೊಲೀಸರು ಬಿಗಿ ಬಂದೋಬಸ್ತ್ ನಡೆಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…