Featured

ಶಬರಿಮಲೆ ವಿವಾದ : ಪ್ರತಿಯೊಬ್ಬರಿಗೂ ಪ್ರಾರ್ಥಿಸುವ ಹಕ್ಕಿದೆ ಆದರೆ ಅಪವಿತ್ರಗೊಳಿಸುವ ಹಕ್ಕಿಲ್ಲ :ಸ್ಮೃತಿ ಇರಾನಿ

ಮುಂಬಯಿ : ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಎಲ್ಲ ವಯೋವರ್ಗದ ಮಹಿಳೆಯರಿಗೆ ಸುಪ್ರೀಂ ಕೋರ್ಟ್‌  ಪ್ರವೇಶಾವಕಾಶ ನೀಡಿರುವುದಕ್ಕೆ ಪ್ರತಿಭಟನೆ ನಡೆಯುತ್ತಿರುವ ನಡುವೆಯೇ ಕೇಂದ್ರ ಸಚಿವ ಸ್ಮ್ರತಿ ಇರಾನಿ ಅವರು “ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಹಕ್ಕೆಂದರೆ ದೇವಸ್ಥಾನವನ್ನು ಅಪವಿತ್ರಗೊಳಿಸುವ ಹಕ್ಕೆಂದು ತಿಳಿಯುವಂತಿಲ್ಲ” ಎಂದು ಹೇಳಿದ್ದಾರೆ.

”ಸುಪ್ರೀಂ ಕೋರ್ಟ್‌ ತೀರ್ಪಿನ ವಿರುದ್ಧ ಮಾತನಾಡಲು ನಾನು ಯಾರೂ ಅಲ್ಲ; ಮೇಲಾಗಿ ನಾನು ಕೇಂದ್ರ ಸರಕಾರದಲ್ಲಿ ಸಚಿವೆಯಾಗಿರುವುದರಿಂದ ಕೂಡ ನಾನು ಮಾತನಾಡುವಂತಿಲ್ಲ. ಆದರೆ ರಕ್ತದ ಕಲೆಗಳಿರುವ ನ್ಯಾಪ್ಕಿನ್ ಜತೆ ಸ್ನೇಹಿತರ ಮನೆಗೆ ಹೋದರೆ ಹೇಗೆ ಎಂಬ ಸಾಮಾನ್ಯ ಪರಿಜ್ಞಾನ ಇರಬೇಕು. ನ್ಯಾಪ್ಕಿನ್ ಜತೆ ಸ್ನೇಹಿತರ ಮನೆಗೆ ಹೋಗಲು ನಮ್ಮಿಂದ ಸಾಧ್ಯವಿಲ್ಲ ಎಂದ ಮೇಲೆ ದೇವಸ್ಥಾನಕ್ಕೆ ಹೋಗುವುದು ಸರಿಯೇ? ನಮಗೆ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುವ ಹಕ್ಕು ಇದೆ. ಆದರೆ ಅದನ್ನು ಅಪವಿತ್ರಗೊಳಿಸುವ ಹಕ್ಕು ಇಲ್ಲ ಎಂದು ಸ್ಮೃತಿ ಇರಾನಿ ತಿಳಿಸಿದ್ದಾರೆ..”

”…ಹಾಗೆಯೇ ದೇವರ ಮನೆಯನ್ನು ಪ್ರವೇಶಿಸುವ ಹಕ್ಕಿನಲ್ಲಿ ಅದನ್ನು ಅಪವಿತ್ರ ಗೊಳಿಸುವ ಹಕ್ಕು ಇರುವುದಿಲ್ಲ. ಈ ವ್ಯತ್ಯಾಸವನ್ನು ನಾವು ಅರಿತುಕೊಳ್ಳಬೇಕು; ನನಗೆ ದೇವಸ್ಥಾನದಲ್ಲಿ ಪೂಜಿಸುವ ಹಕ್ಕಿದೆ; ಆದರೆ ಅದನ್ನು ಅಪವಿತ್ರಗೊಳಿಸುವ ಹಕ್ಕು ಇರುವುದಿಲ್ಲ. ಈ ವ್ಯತ್ಯಾಸವನ್ನು ನಾವು ಅರಿತುಕೊಂಡು ದೇವಸ್ಥಾನದ ಪಾವಿತ್ರ್ಯವನ್ನು ಗೌರವಿಸಬೇಕು” ಎಂದು ಸ್ಮ್ರತಿ ಇರಾನಿ ಹೇಳಿದರು.

”ನಾನೋರ್ವ ಹಿಂದು; ಆದರೆ ಮದುವೆಯಾದದ್ದು  ಝೊರಾಸ್ಟ್ರಿಯನ್‌ ನನ್ನು. ಹಾಗಾಗಿ ನನಗೆ ಅಗ್ನಿ ದೇವಳಕ್ಕೆ ನನಗೆ ಪ್ರವೇಶ ಇರಲಿಲ್ಲ; ನಾನು ಕುಟುಂಬ ಸಹಿತ ಅಲ್ಲಿಗೆ ಹೋಗಿದ್ದಾಗ ಮಕ್ಕಳನ್ನು ಗಂಡನ ಕೈಗೆ ಒಪ್ಪಿಸಿ, ನಾನು ಮಾತ್ರವೇ ದೇವಳದ ಹೊರಗೆ ಕಾರಿನಲ್ಲಿ ಕುಳಿತಿರಬೇಕಾದ ಪರಿಸ್ಥಿತಿಯನ್ನು ಎದುರಿಸಿದ್ದೇನೆ ಎಂದು ಸ್ಮ್ರತಿ  ಇರಾನಿ ಹೇಳಿದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago