ಮುಂಬಯಿ : ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಎಲ್ಲ ವಯೋವರ್ಗದ ಮಹಿಳೆಯರಿಗೆ ಸುಪ್ರೀಂ ಕೋರ್ಟ್ ಪ್ರವೇಶಾವಕಾಶ ನೀಡಿರುವುದಕ್ಕೆ ಪ್ರತಿಭಟನೆ ನಡೆಯುತ್ತಿರುವ ನಡುವೆಯೇ ಕೇಂದ್ರ ಸಚಿವ ಸ್ಮ್ರತಿ ಇರಾನಿ ಅವರು “ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಹಕ್ಕೆಂದರೆ ದೇವಸ್ಥಾನವನ್ನು ಅಪವಿತ್ರಗೊಳಿಸುವ ಹಕ್ಕೆಂದು ತಿಳಿಯುವಂತಿಲ್ಲ” ಎಂದು ಹೇಳಿದ್ದಾರೆ.
”ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮಾತನಾಡಲು ನಾನು ಯಾರೂ ಅಲ್ಲ; ಮೇಲಾಗಿ ನಾನು ಕೇಂದ್ರ ಸರಕಾರದಲ್ಲಿ ಸಚಿವೆಯಾಗಿರುವುದರಿಂದ ಕೂಡ ನಾನು ಮಾತನಾಡುವಂತಿಲ್ಲ. ಆದರೆ ರಕ್ತದ ಕಲೆಗಳಿರುವ ನ್ಯಾಪ್ಕಿನ್ ಜತೆ ಸ್ನೇಹಿತರ ಮನೆಗೆ ಹೋದರೆ ಹೇಗೆ ಎಂಬ ಸಾಮಾನ್ಯ ಪರಿಜ್ಞಾನ ಇರಬೇಕು. ನ್ಯಾಪ್ಕಿನ್ ಜತೆ ಸ್ನೇಹಿತರ ಮನೆಗೆ ಹೋಗಲು ನಮ್ಮಿಂದ ಸಾಧ್ಯವಿಲ್ಲ ಎಂದ ಮೇಲೆ ದೇವಸ್ಥಾನಕ್ಕೆ ಹೋಗುವುದು ಸರಿಯೇ? ನಮಗೆ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುವ ಹಕ್ಕು ಇದೆ. ಆದರೆ ಅದನ್ನು ಅಪವಿತ್ರಗೊಳಿಸುವ ಹಕ್ಕು ಇಲ್ಲ ಎಂದು ಸ್ಮೃತಿ ಇರಾನಿ ತಿಳಿಸಿದ್ದಾರೆ..”
”…ಹಾಗೆಯೇ ದೇವರ ಮನೆಯನ್ನು ಪ್ರವೇಶಿಸುವ ಹಕ್ಕಿನಲ್ಲಿ ಅದನ್ನು ಅಪವಿತ್ರ ಗೊಳಿಸುವ ಹಕ್ಕು ಇರುವುದಿಲ್ಲ. ಈ ವ್ಯತ್ಯಾಸವನ್ನು ನಾವು ಅರಿತುಕೊಳ್ಳಬೇಕು; ನನಗೆ ದೇವಸ್ಥಾನದಲ್ಲಿ ಪೂಜಿಸುವ ಹಕ್ಕಿದೆ; ಆದರೆ ಅದನ್ನು ಅಪವಿತ್ರಗೊಳಿಸುವ ಹಕ್ಕು ಇರುವುದಿಲ್ಲ. ಈ ವ್ಯತ್ಯಾಸವನ್ನು ನಾವು ಅರಿತುಕೊಂಡು ದೇವಸ್ಥಾನದ ಪಾವಿತ್ರ್ಯವನ್ನು ಗೌರವಿಸಬೇಕು” ಎಂದು ಸ್ಮ್ರತಿ ಇರಾನಿ ಹೇಳಿದರು.
”ನಾನೋರ್ವ ಹಿಂದು; ಆದರೆ ಮದುವೆಯಾದದ್ದು ಝೊರಾಸ್ಟ್ರಿಯನ್ ನನ್ನು. ಹಾಗಾಗಿ ನನಗೆ ಅಗ್ನಿ ದೇವಳಕ್ಕೆ ನನಗೆ ಪ್ರವೇಶ ಇರಲಿಲ್ಲ; ನಾನು ಕುಟುಂಬ ಸಹಿತ ಅಲ್ಲಿಗೆ ಹೋಗಿದ್ದಾಗ ಮಕ್ಕಳನ್ನು ಗಂಡನ ಕೈಗೆ ಒಪ್ಪಿಸಿ, ನಾನು ಮಾತ್ರವೇ ದೇವಳದ ಹೊರಗೆ ಕಾರಿನಲ್ಲಿ ಕುಳಿತಿರಬೇಕಾದ ಪರಿಸ್ಥಿತಿಯನ್ನು ಎದುರಿಸಿದ್ದೇನೆ ಎಂದು ಸ್ಮ್ರತಿ ಇರಾನಿ ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…