Featured

ಶಬರಿಮಲೆ ವಿವಾದ : ಮರುಪರಿಶೀಲನೆಗಾಗಿ ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾವಣೆ -Vishwanews24

ನವದೆಹಲಿ: ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಿದ್ದ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.

ಶಬರಿಮಲೆ ದೇಗುಲಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿ 2018ರ ಸೆಪ್ಟಂಬರ್ 28ರಂದು ನೀಡಲಾಗಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿ ಕುರಿತು ಸುಪ್ರೀಂಕೋರ್ಟ್ ಪಂಚಸದಸ್ಯ ಸಾಂವಿಧಾನಿಕ ಪೀಠ ಗುರುವಾರ ಅಂಗೀಕರಿಸಿದ್ದು, ವಿಸ್ತೃತ ಪೀಠಕ್ಕೆ ವರ್ಗಾಯಿಸಿ ಆದೇಶ ನೀಡಿದೆ.

2018 ರ ಸೆಪ್ಟೆಂಬರ್ ನಲ್ಲಿ ಸುಪ್ರೀಂ ಕೋರ್ಟ್ ಶಬರಿಮಲೆಗೆ ಮಹಿಳೆಯರು ಪ್ರವೇಶಿಸಲು ಅನುಮತಿ ನೀಡಿತ್ತು. ಆದರೆ ಈ ತೀರ್ಪನ್ನು ಮರುಪರಿಶೀಲಿಸಬೇಕು ಎಂದು ಒಟ್ಟು 56 ಅರ್ಜಿಗಳು ಸಲ್ಲಿಕೆಯಾಗಿದ್ದವು. ಅವೆಲ್ಲವುಗಳ ವಿಚಾರಣೆಯನ್ನು ಕೋರ್ಟು ಮುಗಿಸಿದ್ದು, ಇಂದು ತೀರ್ಪು ಪ್ರಕಟಿಸಬೇಕಿತ್ತು.

ಸುಪ್ರೀಂಕೋರ್ಟ್ ಸಿಜೆಐ ರಂಜನ್ ಗೋಗೊಯಿ ಅವರು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ಸಲ್ಲಿಕೆಯಾದ ಮರುಪರಿಶೀಲನೆ ಮೇಲ್ಮನವಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. 3-2 ಬಹುಮತದಿಂದ ಪಂಚಸದಸ್ಯ ಪೀಠ ಪೂರ್ಣಪೀಠಕ್ಕೆ ನೀಡಿದೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

6 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

11 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

11 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

11 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

1 day ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

1 day ago