ನವದೆಹಲಿ: ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಿದ್ದ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ಶಬರಿಮಲೆ ದೇಗುಲಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿ 2018ರ ಸೆಪ್ಟಂಬರ್ 28ರಂದು ನೀಡಲಾಗಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿ ಕುರಿತು ಸುಪ್ರೀಂಕೋರ್ಟ್ ಪಂಚಸದಸ್ಯ ಸಾಂವಿಧಾನಿಕ ಪೀಠ ಗುರುವಾರ ಅಂಗೀಕರಿಸಿದ್ದು, ವಿಸ್ತೃತ ಪೀಠಕ್ಕೆ ವರ್ಗಾಯಿಸಿ ಆದೇಶ ನೀಡಿದೆ.
2018 ರ ಸೆಪ್ಟೆಂಬರ್ ನಲ್ಲಿ ಸುಪ್ರೀಂ ಕೋರ್ಟ್ ಶಬರಿಮಲೆಗೆ ಮಹಿಳೆಯರು ಪ್ರವೇಶಿಸಲು ಅನುಮತಿ ನೀಡಿತ್ತು. ಆದರೆ ಈ ತೀರ್ಪನ್ನು ಮರುಪರಿಶೀಲಿಸಬೇಕು ಎಂದು ಒಟ್ಟು 56 ಅರ್ಜಿಗಳು ಸಲ್ಲಿಕೆಯಾಗಿದ್ದವು. ಅವೆಲ್ಲವುಗಳ ವಿಚಾರಣೆಯನ್ನು ಕೋರ್ಟು ಮುಗಿಸಿದ್ದು, ಇಂದು ತೀರ್ಪು ಪ್ರಕಟಿಸಬೇಕಿತ್ತು.
ಸುಪ್ರೀಂಕೋರ್ಟ್ ಸಿಜೆಐ ರಂಜನ್ ಗೋಗೊಯಿ ಅವರು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ಸಲ್ಲಿಕೆಯಾದ ಮರುಪರಿಶೀಲನೆ ಮೇಲ್ಮನವಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. 3-2 ಬಹುಮತದಿಂದ ಪಂಚಸದಸ್ಯ ಪೀಠ ಪೂರ್ಣಪೀಠಕ್ಕೆ ನೀಡಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…