ಮಂಗಳೂರು, : ಶಬರಿಮಲೆಯಲ್ಲಿ ಎಲ್ಲಾ ಮಹಿಳೆಯರಿಗೂ ಪ್ರವೇಶ ನೀಡಲು ಕೇರಳ ಸರಕಾರ ಕಠಿಣ ಕ್ರಮ ಕೈಗೊಳ್ಳಲಿ. ಈ ವಿಚಾರದಲ್ಲಿ ರಾಜಕೀಯ ಬೇಡ ಎಂದು ಮಾಜಿ ಬಿ. ಜನಾರ್ದನ ಪೂಜಾರಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಸೋಮವಾರ ಕುದ್ರೋಳಿ ಕ್ಷೇತ್ರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಬರಿಮಲೆಯ ವಿಚಾರವನ್ನು ಪಕ್ಷಗಳು ರಾಜಕೀಯವಾಗಿ ಬಳಸಿಕೊಳ್ಳುತ್ತಿವೆ. ದುರುದ್ದೇಶವನ್ನಿಟ್ಟುಕೊಂಡು ಲಾಭಕ್ಕಾಗಿ ಇದಕ್ಕೆ ರಾಜಕೀಯ ಬಣ್ಣ ಹಚ್ಚಲಾಗುತ್ತಿದೆ. ಅದು ಕಾಂಗ್ರೆಸ್ ,ಬಿಜೆಪಿ ಅಥವಾ ಇನ್ಯಾವುದೋ ಪಕ್ಷವಾಗಲಿ ಅಥವಾ ವ್ಯಕ್ತಿಯಾಗಲಿ ಮಹಿಳೆಯರ ಪ್ರವೇಶ ವಿರೋಧಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.
ಈಗಾಗಲೇ ಶಬರಿಮಲೆಯಲ್ಲಿ ಮಹಿಳೆಯರು ಪ್ರವೇಶ ಮಾಡಿದ್ದಾರೆ. ಅದರಲ್ಲಿ ತಪ್ಪೇನು ಇಲ್ಲ. ಎಲ್ಲಾ ಮಹಿಳೆಯರನ್ನು ಪ್ರವೇಶ ಮಾಡಿಸಿ ಇದರಿಂದ ದೇವರು ಮೆಚ್ಚುತ್ತಾನೆ. ಮಹಿಳೆಯರು ಕೂಡಾ ದೇವರ ಮಕ್ಕಳಲ್ಲವೇ ? ಎಂದು ಪ್ರಶ್ನಿಸಿದ ಅವರು , ಅಯ್ಯಪ್ಪ ಮಹಿಳೆಯರ ಪ್ರವೇಶ ಬೇಡ ಎನ್ನಲಿಲ್ಲ. ವಿರೋಧಿಸುವವರು ಕೇವಲ ರಾಜಕೀಯ ಮಾಡುತ್ತಿದ್ದಾರೆ. ಮಹಿಳೆಯರಿಗೆ ದ್ರೋಹ ಬಗೆಯದಂತೆ ಸಿಎಂ ತಮ್ಮ ಕರ್ತವ್ಯ ಪಾಲಿಸಿ ಎಲ್ಲಾ ಮಹಿಳೆಯರ ಪ್ರವೇಶಕ್ಕೆ ಅನುಕೂಲಕರ ವ್ಯವಸ್ಥೆ ಕಲ್ಪಿಸಲಿ ಎಂದು ಆಗ್ರಹಿಸಿದರು..
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…