Featured

ಶಬರಿಮಲೆ ಸನ್ನಿಧಿಗೆ ಮಹಿಳೆಯ ಪ್ರವೇಶ ವಿರೋಧಿಸಿ, ಸುಪ್ರೀಂಕೋರ್ಟ್ ತೀರ್ಪಿನ ವಿರುದ್ದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಮಂಗಳೂರು, :ಶಬರಿಮಲೆಯ ಶ್ರೀ ಅಯ್ಯಪ್ಪ ಸನ್ನಿಧಿಗೆ ಮಹಿಳೆಯ ಪ್ರವೇಶ ವಿರೋಧಿಸಿ ಮಂಗಳೂರು ಅಯ್ಯಪ್ಪ ಸೇವಾ ಸಮಿತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಶಬರಿಮಲೆ ಉಳಿಸಿ ಜಾಗೃತಿ ಸಮಾವೇಶ ನಗರದಲ್ಲಿ ಮಂಗಳವಾರ ಆಯೋಜಿಸಲಾಗಿತ್ತು. ಮಂಗಳೂರಿನ ಕದ್ರಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿವಿಧ ಹಿಂದೂ ಪರ ಸಂಘಟನೆಗಳು ಭಾಗವಹಿಸಿದ್ದವು.

ಶಬರಿಮಲೆ ತೀರ್ಪಿನ ವಿರುದ್ಧ ಅ.9 ರಂದು ಮಂಗಳೂರಲ್ಲಿ ಬೃಹತ್ ಪ್ರತಿಭಟನೆ ಸಭೆಯಲ್ಲಿ ನೂರಾರು ಮಂದಿ ಮಹಿಳೆಯರು, ಅಯ್ಯಪ್ಪ ಸ್ವಾಮಿ ಭಕ್ತರು ಭಾಗವಹಿಸಿ ಸುಪ್ರೀಂ ಆದೇಶದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೈಯಲ್ಲಿ ಪ್ಲೆಕ್ ಕಾರ್ಡ್ ಗಳನ್ನು ಹಿಡಿದು ಸೇವ್ ಶಬರಿಮಲೆ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ. ಸಭೆ ಆರಂಭಕ್ಕೂ ಮುನ್ನ ಅಯ್ಯಪ್ಪ ಸ್ವಾಮಿಯ ಶರಣು ಘೋಷ, ಭಕ್ತಿಗೀತೆಗಳನ್ನು ಹಾಡಲಾಯಿತು.

ಸಭೆಯನ್ನು ಉದ್ಧೇಶಿಸಿ ಮಾತನಾಡಿದ ಹಿಂದೂ‌ ಸಂಘಟನೆ ಗಳ ಮುಖಂಡರು ಶಬರಿ ಮಲೆ ಅತ್ಯಂತ ಪರಿಶುದ್ಧ ಕ್ಷೇತ್ರವಾಗಿದೆ. ಮಹಿಳೆಯರ ಪ್ರವೇಶ ವಿಚಾರವನ್ನಿಟ್ಟುಕೊಂಡು ಹಿಂದೂ ಧರ್ಮ ಒಡೆಯುವ ಕೆಲಸವಾಗುತ್ತಿದೆ. ಕೇರಳ ಜನ ಈಗಾಗಲೇ ಆಂದೋಲನ ನಡೆಸುತ್ತಿದ್ದು, ಕೇರಳದ ಜನರ ಜೊತೆ ಮಂಗಳೂರಿಗರು ಕೈಜೋಡಿಸುವುದಾಗಿ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ಕುರಿತು ರಾಷ್ಟ್ರಪತಿಗಳು ಹಾಗು ಪ್ರಧಾನಮಂತ್ರಿ ಮಧ್ಯಪ್ರವೇಶಿಸಿ ಜನರ ನಂಬಿಕೆಯನ್ನು ಉಳಿಸಬೇಕಾಗಿ ಮನವಿ ಮಾಡಿದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago