Featured

ಶಬರಿಮಲೆ ಸನ್ನಿಧಿಗೆ  ಹೆಚ್ಚು ಭಕ್ತರಿಗೆ ಪ್ರವೇಶ: ಹೈಕೋರ್ಟ್‌ ಆದೇಶ ಪ್ರಶ್ನಿಸಿ ಕೇರಳ ಸರ್ಕಾರ ಸುಪ್ರಿಂಗೆ ‌ ಮೊರೆ -Vishwanews24

ಶಬರಿಮಲೆ ಸನ್ನಿಧಿಗೆ  ಹೆಚ್ಚು ಭಕ್ತರಿಗೆ ಪ್ರವೇಶ: ಹೈಕೋರ್ಟ್‌ ಆದೇಶ ಪ್ರಶ್ನಿಸಿ ಕೇರಳ ಸರ್ಕಾರ ಸುಪ್ರಿಂಗೆ ‌ ಮೊರೆ -Vishwanews24

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವರ ಸನ್ನಿಧಿಗೆ ತೆರಳುವ ಭಕ್ತರ ಸಂಖ್ಯೆಯನ್ನು 5000ದವರೆಗೆ ಹೆಚ್ಚಿಸಿದ ಕೇರಳ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರವು ಸುಪ್ರೀಂಕೋರ್ಟ್‌ ಮೊರೆ ಹೋಗಿದೆ. ಭಕ್ತರ ಸಂಖ್ಯೆ ಹೆಚ್ಚಿಸಿರುವುದು ಪೊಲೀಸ್ ಸಿಬ್ಬಂದಿ ಮತ್ತು ಆರೋಗ್ಯ ಅಧಿಕಾರಿಗಳ ಮೇಲೆ ತೀವ್ರ ಒತ್ತಡ ಹೇರಲಿದೆ ಎಂದು ಸರ್ಕಾರ ಹೇಳಿದೆ.

ಡಿಸೆಂಬರ್‌ 26ರಿಂದ ಜನವರಿ 14ರತನಕ ನಡೆಯಲಿರುವ ವಾರ್ಷಿಕ ಮಂಡಲ-ಮಕರವಿಳಕ್ಕು ಕಾರ್ಯಕ್ರಮದ ನಿರ್ವಹಣೆಗಾಗಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿತ್ತು. ಈ ಸಮಿತಿಯು ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಶಬರಿಮಲೆಯಲ್ಲಿ ಯಾತ್ರಿಕರ ಸಂಖ್ಯೆಯನ್ನು ಪ್ರತಿದಿನ 2000 ಹಾಗೂ ವಾರಾಂತ್ಯದಲ್ಲಿ 3000ಕ್ಕೆ ಹೆಚ್ಚಿಸಿ ನಿಗದಿ ಮಾಡಿತ್ತು ಎಂದು ಕೇರಳ ಸರ್ಕಾರವು ಅರ್ಜಿಯಲ್ಲಿ ಹೇಳಿದೆ.

ಆದರೆ, ಡಿಸೆಂಬರ್ 20ರಿಂದ ಶಬರಿಮಲೆ ಸನ್ನಿಧಿಗೆ ತೆರಳುವ ಭಕ್ತರ ಸಂಖ್ಯೆಯನ್ನು 5000ದವರೆಗೆ ಹೆಚ್ಚಿಸಿ ಕೇರಳ ಹೈಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಪೊಲೀಸ್‌ ಸಿಬ್ಬಂದಿ, ಆರೋಗ್ಯ ಅಧಿಕಾರಿಗಳ ಸಂಖ್ಯೆ, ಶಬರಿಮಲೆಯಲ್ಲಿರುವ ಕೋವಿಡ್‌ ಪೀಡಿತರ ಸಂಖ್ಯೆಯನ್ನೂ ಪರಿಗಣಿಸದೆ ಕೇರಳ ಹೈಕೋರ್ಟ್‌ ಈ ಆದೇಶ ಹೊರಡಿಸಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ವರ್ಚ್ಯುವಲ್‌ ಕ್ಯೂ ಮೂಲಕ ತೀರ್ಥಯಾತ್ರಿಕರು ದೇವಸ್ಥಾನದೊಳಗೆ ಬಿಡಲಾಗುವುದು. ಈ ವ್ಯವಸ್ಥೆಯನ್ನು ಪೊಲೀಸರು ನೋಡಿಕೊಳ್ಳಲಿದ್ದಾರೆ. ಭಕ್ತರು ದೇವಸ್ಥಾನದೊಳಗೆ ಪ್ರವೇಶಿಸುವುದಕ್ಕೂ ಮುನ್ನ ಅವರನ್ನು ಕೋವಿಡ್‌ ಪರೀಕ್ಷೆಗೂ ಒಳಪಡಿಸಲಾಗುವುದು. ಹಾಗಾಗಿ ಭಕ್ತರ ಸಂಖ್ಯೆ ಹೆಚ್ಚಿಸಿದ್ದರೆ ಪೊಲೀಸ್‌ ಸಿಬ್ಬಂದಿ, ಆರೋಗ್ಯ ಅಧಿಕಾರಿಗಳ ಮೇಲೆ ತುಂಬಾ ಒತ್ತಡ ಬೀಳುತ್ತದೆ ಎಂದು ಕೇರಳ ಸರ್ಕಾರ ಸುಪ್ರೀಂಗೆ ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago