ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವರ ಸನ್ನಿಧಿಗೆ ತೆರಳುವ ಭಕ್ತರ ಸಂಖ್ಯೆಯನ್ನು 5000ದವರೆಗೆ ಹೆಚ್ಚಿಸಿದ ಕೇರಳ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರವು ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಭಕ್ತರ ಸಂಖ್ಯೆ ಹೆಚ್ಚಿಸಿರುವುದು ಪೊಲೀಸ್ ಸಿಬ್ಬಂದಿ ಮತ್ತು ಆರೋಗ್ಯ ಅಧಿಕಾರಿಗಳ ಮೇಲೆ ತೀವ್ರ ಒತ್ತಡ ಹೇರಲಿದೆ ಎಂದು ಸರ್ಕಾರ ಹೇಳಿದೆ.
ಡಿಸೆಂಬರ್ 26ರಿಂದ ಜನವರಿ 14ರತನಕ ನಡೆಯಲಿರುವ ವಾರ್ಷಿಕ ಮಂಡಲ-ಮಕರವಿಳಕ್ಕು ಕಾರ್ಯಕ್ರಮದ ನಿರ್ವಹಣೆಗಾಗಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿತ್ತು. ಈ ಸಮಿತಿಯು ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಶಬರಿಮಲೆಯಲ್ಲಿ ಯಾತ್ರಿಕರ ಸಂಖ್ಯೆಯನ್ನು ಪ್ರತಿದಿನ 2000 ಹಾಗೂ ವಾರಾಂತ್ಯದಲ್ಲಿ 3000ಕ್ಕೆ ಹೆಚ್ಚಿಸಿ ನಿಗದಿ ಮಾಡಿತ್ತು ಎಂದು ಕೇರಳ ಸರ್ಕಾರವು ಅರ್ಜಿಯಲ್ಲಿ ಹೇಳಿದೆ.
ಆದರೆ, ಡಿಸೆಂಬರ್ 20ರಿಂದ ಶಬರಿಮಲೆ ಸನ್ನಿಧಿಗೆ ತೆರಳುವ ಭಕ್ತರ ಸಂಖ್ಯೆಯನ್ನು 5000ದವರೆಗೆ ಹೆಚ್ಚಿಸಿ ಕೇರಳ ಹೈಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಪೊಲೀಸ್ ಸಿಬ್ಬಂದಿ, ಆರೋಗ್ಯ ಅಧಿಕಾರಿಗಳ ಸಂಖ್ಯೆ, ಶಬರಿಮಲೆಯಲ್ಲಿರುವ ಕೋವಿಡ್ ಪೀಡಿತರ ಸಂಖ್ಯೆಯನ್ನೂ ಪರಿಗಣಿಸದೆ ಕೇರಳ ಹೈಕೋರ್ಟ್ ಈ ಆದೇಶ ಹೊರಡಿಸಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ವರ್ಚ್ಯುವಲ್ ಕ್ಯೂ ಮೂಲಕ ತೀರ್ಥಯಾತ್ರಿಕರು ದೇವಸ್ಥಾನದೊಳಗೆ ಬಿಡಲಾಗುವುದು. ಈ ವ್ಯವಸ್ಥೆಯನ್ನು ಪೊಲೀಸರು ನೋಡಿಕೊಳ್ಳಲಿದ್ದಾರೆ. ಭಕ್ತರು ದೇವಸ್ಥಾನದೊಳಗೆ ಪ್ರವೇಶಿಸುವುದಕ್ಕೂ ಮುನ್ನ ಅವರನ್ನು ಕೋವಿಡ್ ಪರೀಕ್ಷೆಗೂ ಒಳಪಡಿಸಲಾಗುವುದು. ಹಾಗಾಗಿ ಭಕ್ತರ ಸಂಖ್ಯೆ ಹೆಚ್ಚಿಸಿದ್ದರೆ ಪೊಲೀಸ್ ಸಿಬ್ಬಂದಿ, ಆರೋಗ್ಯ ಅಧಿಕಾರಿಗಳ ಮೇಲೆ ತುಂಬಾ ಒತ್ತಡ ಬೀಳುತ್ತದೆ ಎಂದು ಕೇರಳ ಸರ್ಕಾರ ಸುಪ್ರೀಂಗೆ ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಿದೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…