ಕಾಪು: ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಕಾಪು ತಾಲ್ಲೂಕು ವಲಯದ ವತಿಯಿಂದ ಹರಿವರಾಸನಂ ಶತಮಾನೋತ್ಸವ ಕಾರ್ಯಕ್ರಮ ದಿನಾಂಕ 01 ಜನವರಿ 2023 ರಂದು ಕಾಪು ಲಕ್ಷ್ಮೀ ಜನಾರ್ದನ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಸಾಸ್ ಕಾಪು ತಾಲೂಕು ಪ್ರಧಾನಕಾರ್ಯದರ್ಶಿ ದಿವಾಕರ ಶೆಟ್ಟಿ ತಿಳಿಸಿದರು.
ಶ್ರೀ ಹರಿಹರಾತ್ಮಜ ಅಷ್ಟಕಂ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ.
ಸಾಸ್ ವತಿಯಿಂದ ಮನೆಮನೆಯಲ್ಲೂ ಅಯ್ಯಪ್ಪ ಧ್ಯಾನ-ನಾಮಸಂಕೀರ್ತನ-ವರ್ಷಪೂರ್ತಿ ನಡೆಸುವ ಯೋಜನೆಯು ನಡೆಯಲಿದೆ ಎಂದು ಅವರು ತಿಳಿಸಿದರು.
ಜನವರಿ 1 ರಂದು ನಡೆಯುವ ಸಭಾ ಕಾರ್ಯಕ್ರಮವನ್ನು ಮಹಾಕಾಳಿ ಮಂತ್ರದೇವತೆ ಸನ್ನಿಧಿಯ ಧರ್ಮದರ್ಶಿ ಸುಧರ್ಮ ಶ್ರೀಯಾನ್ ದೀಪ ಪ್ರಜ್ವಲನೆ ಮಾಡಲಿದ್ದು ,ಸಾಸ್ ಕಾಪು ವಲಯದ ಅಧ್ಯಕ್ಷ ರಘುರಾಮ ಶೆಟ್ಟಿ ಕೊಪ್ಪಲಂಗಡಿ ಇವರು ಅಧ್ಯಕ್ಷತೆ ವಹಿಸಿಕೊಳ್ಳಲಿದ್ದು ಪತ್ರಕರ್ತ ವಾಗ್ಮಿ ಶ್ರೀಕಾಂತ್ ಶೆಟ್ಟಿ ಹರಿವರಾಸನಂ ಉಪನ್ಯಾಸ ಮಾಡಲಿದ್ದು ಸಮಾಜದ ಗೌರವಾನ್ವಿತರು ಅತಿಥಿಗಳಾಗಿ ಭಾಗವಹಿಸಿಲಿದ್ದಾರೆ ಎಂದರು.
ಜನವರಿ 1 ರಂದು ಬೆಳಿಗ್ಗೆ 11.30 ರಿಂದ ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ಸಮಿತಿ ಕಾಪು ವತಿಯಿಂದ ಭಜನಾ ಕಾರ್ಯಕ್ರಮ, ಮಹಾಪೂಜೆ,ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸಭಾ ಕಾರ್ಯಕ್ರಮದ ಪೂರ್ವದಲ್ಲಿ ಹರಿವರಾಸನಂ ನೃತ್ಯ ,ಸಭಾ ಕಾರ್ಯಕ್ರಮದಲ್ಲಿ ವಿವಿಧ ಶಿಬಿರದ ಒಟ್ಟು ಐದು ಗುರುಸ್ವಾಮಿಗಳಿಗೆ ಗೌರವಸನ್ಮಾನ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂತೋಷ್ ,ಕೊಪ್ಪಲಂಗಡಿ ರಘುರಾಮ್ ಎಮ್ ಶೆಟ್ಟಿ, ನಾರಾಯಣ ಗುರುಸ್ವಾಮಿ ಉಪಸ್ಥಿತರಿದ್ದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…