Featured

ಶರಣಾಗತಿಗೆ ಸೂಚಿಸಿದ್ದರೂ ದಾಳಿ ; ಎನ್‌ಕೌಂಟರ್‌ನಲ್ಲಿ ನಕ್ಸಲ್ ವಿಕ್ರಂ ಗೌಡ  ಮೃತ್ಯು : ಡಿಜಿಪಿ ರೂಪಾ – vishwanews24

ಎನ್‌ಕೌಂಟರ್ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳ ತಂಡ – ಪರಿಶೀಲನೆ

ಹೆಬ್ರಿ: ಕಬ್ಬಿನಾಲೆ, ಪೀತಬೈಲು ಎಂಬಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ‌ ಎಎನ್ಎಫ್ ಪಡೆ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದು, ನ.19ರ ಮಂಗಳವಾರ ‌ಘಟನಾ ಸ್ಥಳಕ್ಕೆ ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಐಜಿ ರೂಪಾ ಮೌದ್ಗಿಲ್ ಭೇಟಿ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಕ್ಸಲರ ಚಲನವಲನದ‌ ಬಗ್ಗೆ ಮಾಹಿತಿ ಮೇರೆಗೆ ಎಎನ್ಎಫ್ ಕೋಂಬಿಂಗ್ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ‌ ನಕ್ಸಲರು ಮುಖಾಮುಖಿಯಾಗಿದ್ದಾರೆ. ಶರಣಾಗತಿಗೆ ಸೂಚನೆ ನೀಡಿದರೂ, ನಕ್ಸಲರ ತಂಡದಿಂದ ಎಎನ್ಎಫ್ ಸಿಬಂದಿ ದಾಳಿಗೆ ತಯಾರಿ ನಡೆಸಿದರು. ಈ ವೇಳೆ ಎರಡು ಕಡೆಗಳಿಂದ ಗುಂಡಿನ ಚಕಮಕಿ ನಡೆದಿದ್ದು, ಇದರಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಸಾವನ್ನಪ್ಪಿದ್ದಾರೆ. ಈತನ ವಿರುದ್ದ ಕೊಲೆ, ಕಳ್ಳತನ, ದರೋಡೆ ಸಹಿತ 60 ಕ್ಕೂ ಅಧಿಕ ಪ್ರಕರಣಗಳಿದ್ದು, ಕರ್ನಾಟಕ, ಕೇರಳ, ತಮಿಳುನಾಡು ಸಹಿತ ಮೂರು ರಾಜ್ಯಗಳಿಗೆ ಬೇಕಾದ ನಕ್ಸಲ್ ವಿಕ್ರಂ ಗೌಡ. ನಕ್ಸಲ್ ನಿಗ್ರಹ ಪಡೆ ಪೊಲೀಸ್ ಅಧೀಕ್ಷಕ ಜಿತೇಂದ್ರ ದಯಾಮಾ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

10 ದಿನಗಳ ನಿರಂತರ ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗಿದೆ. ಆಂತರಿಕ ವಿಭಾಗದ ಡಿಜಿಪಿ ಗಣಮೋಹನ್ ಪಿ. ಮಾರ್ಗದರ್ಶನ, ಗುಪ್ತಚರ ವಿಭಾಗ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಸಹಕಾರದಲ್ಲಿ ಕಾರ್ಯಾಚರಣೆ ನಡೆದಿದೆ. ಉಡುಪಿ ಜಿಲ್ಲೆಯಲಿ ಇದು 6ನೇ ನಕ್ಸಲ್ ಎನ್ ಕೌಂಟರ್ ಆಗಿದೆ.

ವಿಕ್ರಮ್ ಗೌಡನಿಗೆ 46 ವರ್ಷ ‌ವಯಸ್ಸಾಗಿದ್ದು, ಕಬಿನಿ ದಳದ 2ನೇ ತಂಡವನ್ನು ಮುನ್ನಡೆಸುತ್ತಿದ್ದ. 4ನೇ ತರಗತಿ ವಿದ್ಯಾಭ್ಯಾಸ ಮಾತ್ರ ಪಡೆದಿದ್ದ ಎಂದು ಮಾಹಿತಿ ನೀಡಿದರು. ಎಎನ್ ಎಫ್ ಎಸ್ ಪಿ ಜಿತೇಂದ್ರ ದಯಾಮ, ಉಡುಪಿ ಜಿಲ್ಲಾ ಪೊಲೀಸ್ ‌ಅಧೀಕ್ಷಕ ಡಾ| ಅರುಣ್ ಇದ್ದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

14 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

16 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

17 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

17 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

17 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

17 hours ago