Featured

ಶರಣಾದ 6 ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ – vishwanews24

ಶರಣಾದ 6 ನಕ್ಸಲರ ಶಸ್ತ್ರಾಸ್ತ್ರಗಳು ಮೇಗೂರು ಅರಣ್ಯದಲ್ಲಿ ಪತ್ತೆ

ಚಿಕ್ಕಮಗಳೂರು: ಶರಣಾದ ಆರು ಮಂದಿ ನಕ್ಸಲರು ಬಳಸುತ್ತಿದ್ದ AK 56 ಗನ್, ರಿವಾಲ್ವಾರ್, ಬಂದೂಕು ಸೇರಿದಂತೆ 6 ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದು, ಚಿಕ್ಕಮಗಳೂರು ಪೊಲೀಸರು ಜಪ್ತಿ ಮಾಡಿದ್ದಾರೆ.

ಕೊಪ್ಪ ತಾಲೂಕಿನ ಮೇಗೂರು ಅರಣ್ಯದಲ್ಲಿ AK 56 ಗನ್, ರಿವಾಲ್ವಾರ್, ಬಂದೂಕು ಸೇರಿದಂತೆ 6 ಶಸ್ತ್ರಾಸ್ತ್ರಗಳನ್ನು ನಕ್ಸಲರು ಹೂತು ಇಟ್ಟಿದ್ದರು. ನಕ್ಸಲರು ಶರಣಾಗುವ ದಿನ ಮೇಗೂರು ಅರಣ್ಯದಲ್ಲೇ ಕೊನೆಯಬಾರಿಗೆ ಸಭೆ ನಡೆಸಿ, ಬಳಿಕ ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗಿದ್ದರು ಎನ್ನಲಾಗಿದೆ.

ಶರಣಾಗತಿ ವೇಳೆ ಶಸ್ತ್ರಾಸ್ತ್ರ ಹಸ್ತಾಂತರ ಬಗ್ಗೆ ಚರ್ಚೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕೊಪ್ಪ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಕಳೆದ ಎರಡು ದಿನಗಳಿಂದ ಹುಡುಕಾಟ ನಡೆಸಿ ಶಸ್ತ್ರಾಸ್ತ್ರಗಳನ್ನು ಪತ್ತೆಹಚ್ಚಿದೆ. ನಕ್ಸಲರು ಶರಣಾಗುವ ಮುನ್ನ ಕೊನೆಯಬಾರಿಗೆ ಸಭೆ ನಡೆಸಿದ್ದ ಸ್ಥಳದಲ್ಲೇ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಒಂದು AK 56, ಮೂರು 303 ರೈಫಲ್, ಒಂದು 12 bore SBBL, ಒಂದು ಕಂಟ್ರಿ ಮೇಡ್ ಪಿಸ್ತೂಲ್ ಸೇರಿಂದತೆ ಒಟ್ಟು 6 ಬಂದೂಕು ಪತ್ತೆಯಾಗಿವೆ. ಜೊತೆಗೆ ಹನ್ನೊಂದು 7.62ಎಂಎಂ AK ammunitions , ೩೦೩ ಬಂದೂಕಿನ 133 ಗುಂಡುಗಳು ಸೇರಿದಂತೆ 176 ಜೀವಂತ ಗುಂಡುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಬಗ್ಗೆ ಜಯಪುರ ಪೊಲೀಸ್ ಠಾಣೆಯಲ್ಲಿ 25(1ಬಿ), 7 ಮತ್ತು 25(1ಎ) ಶಸ್ತ್ರಾಸ್ತ್ರ ಕಾಯ್ದೆ 1959 ಅಡಿ ಪ್ರಕರಣ ದಾಖಲಾಗಿರುತ್ತದೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

13 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

13 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

13 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

16 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

16 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

16 hours ago