Featured

ಶರಣ್‌ ಪಂಪ್ವೆಲ್‌  ಸದಾ ಒಂದೇ ಜಾತಿ ಒಂದೆ ಮತ ಎಂಬ ಧ್ಯೇಯದೊಂದಿಗೆ ಕಾರ್ಯಾಚರಿಸುತ್ತಿರುವ ಬಿಲ್ಲವ ಸಂಘಟನೆಯ ಹೆಸರನ್ನು ಎಳೆದು ತಂದಿರುವುದು ಖಂಡನೀಯ :  ಅಕ್ಷಿತ್‌ ಸುವರ್ಣ – Vishwanews24

ಶರಣ್‌ ಪಂಪ್ವೆಲ್‌  ಸದಾ ಒಂದೇ ಜಾತಿ ಒಂದೆ ಮತ ಎಂಬ ಧ್ಯೇಯದೊಂದಿಗೆ ಕಾರ್ಯಾಚರಿಸುತ್ತಿರುವ ಬಿಲ್ಲವ ಸಂಘಟನೆಯ ಹೆಸರನ್ನು ಎಳೆದು ತಂದಿರುವುದು ಖಂಡನೀಯ :  ಅಕ್ಷಿತ್‌ ಸುವರ್ಣ – Vishwanews24

ಮಂಗಳೂರು: ಎರಡು ಸಂಘಟನೆಗಳ ಮಧ್ಯದ ಮನಸ್ತಾಪದ ವಿಚಾರದಲ್ಲಿ ಬಜರಂಗದಳ ನಾಯಕರಾದ ಶರಣ್‌ ಪಂಪ್ವೆಲ್‌ ಅವರು ಸದಾ ಒಂದೇ ಜಾತಿ ಒಂದೆ ಮತ ಎಂಬ ಧ್ಯೇಯದೊಂದಿಗೆ ಕಾರ್ಯಾಚರಿಸುತ್ತಿರುವ ಬಿಲ್ಲವ ಸಂಘಟನೆಯ ಹೆಸರನ್ನು ಎಳೆದು ತಂದಿರುವುದು ಖಂಡನೀಯವಾಗಿದೆ ಎಂದು ದಕ ಜಿಲ್ಲಾ ಯುವ ಜೆಡಿಎಸ್‌ ಅಧ್ಯಕ್ಷ ಅಕ್ಷಿತ್‌ ಸುವರ್ಣ ಹೇಳಿದ್ದಾರೆ.

ನಾರಾಯಣ ಗುರುಗಳ ತತ್ವದಡಿಯಲ್ಲಿ ಎಲ್ಲರೂ ಕೂಡ ಒಂದೇ ಜಾತಿ ಒಂದೇ ಧರ್ಮ ಎಂಬ ಧ್ಯೇಯದೊಂದಿಗೆ ಜಿಲ್ಲೆಯಲ್ಲಿ ಬಿಲ್ಲವ ಸಂಘಟನೆ ಕಾರ್ಯಾಚರಿಸುತ್ತಿದ್ದು ಯಾವುದೇ ರೀತಿಯ ಘರ್ಷಣೆ ಕಲಹಕ್ಕೆ ಅವಕಾಶ ಮಾಡಿಕೊಡದೆ ತನ್ನ ಪಾಡಿಗೆ ಸಮಾಜದ ಉದ್ದಾರಕ್ಕಾಗಿ ಕೆಲಸ ಮಾಡಿಕೊಂಡು ಬರುತ್ತಿದೆ. ಇತ್ತೀಚೆಗೆ ಬಜರಂಗದಳದ ನಾಯಕರಾಗಿರುವ ಶರಣ್‌ ಪಂಪ್ವೆಲ್‌ ಅವರು ಇನ್ನೊಂದು ಸಂಘಟನೆಯೊಂದಿಗೆ ನಡೆದಿರುವ ಮಾತಿನ ಕಲಹದ ವೇಳೆ ವಿನಾಕಾರಣ ಬಿಲ್ಲವ ಸಂಘಟನೆಯನ್ನು ಎಳೆದು ತಂದಿರುವುದು ಮಾಧ್ಯಮಗಳಿಂದ ತಿಳಿದುಬಂದಿದೆ.

ಬಿಲ್ಲವ ಸಂಘಟನೆ ಎಂದೂ ಕೂಡ ಯಾವುದೇ ಜಾತಿ ಧರ್ಮದ ವಿಚಾರದಲ್ಲಿ ಮೂಗು ತೂರಿಸದೇ ತನ್ನ ಸಮುದಾಯದ ಉದ್ದಾರಕ್ಕೆ ಶ್ರಮಿಸುತ್ತಿರುವಾಗ ತಮ್ಮ ವೈಯುಕ್ತಿಕ ದ್ವೇಷಕ್ಕೆ ಬಿಲ್ಲವ ಸಂಘಟನೆಯ ಹೆಸರನ್ನು ಬಳಸಿಕೊಂಡಿರುವುದು ಸರಿಯಲ್ಲ. ಸಾಮಾಜಿಕ ನ್ಯಾಯದ ಅಡಿಯಲ್ಲಿ ಕೆಲಸ ಮಾಡಿಕೊಂಡು ಬಂದಿರುವಾಗ ಅನಾವಶ್ಯಕವಾಗಿ ಸಂಘಟನೆಗಳ ಹೆಸರನ್ನು ಬಳಸಿಕೊಂಡು ಸಮಾಜದಲ್ಲಿ ಘರ್ಷಣೆಗೆ ಕಾರಣವಾಗುವ ಪರಿಸ್ಥಿತಿ ಉಂಟಾಗುತ್ತದೆ ಎನ್ನುವುದನ್ನು ನಾಯಕರಾದವರು ಅರಿಯಬೇಕಾಗಿದೆ. ಇನ್ನಾದರೂ ಅನಾವಶ್ಯಕವಾಗಿ ಬಿಲ್ಲವ ಸಂಘಟನೆಯ ಹೆಸರನ್ನು ಇಲ್ಲ ಸಲ್ಲದ ವಿಚಾರಕ್ಕೆ ಎಳೆದು ತರುವುದನ್ನು ನಿಲ್ಲಿಸುವಂತೆ ಅವರು ಆಗ್ರಹಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago