Featured

ಶವವಾಗಿ ಮಲಗಿದ್ದ ಮಗು ಜೀವಂತ ; ಅಂತ್ಯಸಂಸ್ಕಾರದ ವೇಳೆ ಉಸಿರಾಡಿದ ಮಗು…..Vishwanews24

ಅಂತ್ಯಸಂಸ್ಕಾರದ ವೇಳೆ ಉಸಿರಾಡಿದ ಮಗು

ಶವವಾಗಿ ಮಲಗಿದ್ದ ಮಗು ಜೀವಂತ….

ಹರಿಯಾಣ, : ಅನಾರೋಗ್ಯದಿಂದ ಬಳಲುತ್ತಿದ್ದ ಮಗು ಸಾವನ್ನಪಿರುವುದಾಗಿ ಎಂದು ವೈದ್ಯರು ಘೋಷಿಸಿ ಕುಟುಂಬಸ್ಥರಿಗೆ ಶವ ಹಸ್ತಾಂತರಿಸಿದ್ದು, ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಯುತ್ತಿದ್ದಂತೆ ಹೆತ್ತಮ್ಮನ ಗೋಳಾಟ ಮುಗಿಲು ಮುಟ್ಟಿದ್ದು ಈ ವೇಳೆ ಶವವಾಗಿ ಮಲಗಿದ್ದ ಮಗುವಿನ ದೇಹದಲ್ಲಿ ದಿಢೀರ್​ ಚಲನೆ ಉಂಟಾದ ಘಟನೆ ಹರಿಯಾಣದ ಜಜ್ಜಾರ್​ ಜಿಲ್ಲೆಯಲ್ಲಿ ನಡೆದಿದೆ.

ಹಿತೇಶ್​ ಎಂಬುವವರ 7 ವರ್ಷದ ಮಗ ಕುನಾಲ್​ ಶರ್ಮಾನಿಗೆ ಕಳೆದ ತಿಂಗಳು ಟೈಫಾಯಿಡ್​ ಜ್ವರ ಕಾಣಿಸಿಕೊಂಡು ತೀವ್ರ ಅಸ್ವಸ್ಥನಾಗಿದ್ದ ಕುನಾಲ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿ ಸ್ಪಲ್ಪ ದಿನದ ಬಳಿಕ ಮಗು ಮೃತಪಟ್ಟಿದೆ ಎಂದು ದೆಹಲಿ ವೈದ್ಯರು ಘೋಷಿಸಿದ್ದರು. ಪಾಲಕರು ಕಣ್ಣೀರು ಹಾಕುತ್ತಲೇ ಸ್ವಗ್ರಾಮಕ್ಕೆ ಮೃತದೇಹ ತಂದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದು, ಈ ನಡುವೆ ಪವಾಡವೇ ನಡೆದಿದ್ದು, ಶವವಾಗಿದ್ದ ಮಗು ಇದೀಗ ಜೀವಂತವಾಗಿದೆ.

ಮಗುವಿನ ತಾಯಿಯು ಮಗನ ದೇಹನ್ನೆಲ್ಲ ಸವರುತ್ತಾ ಎಳೆದಾಡಿದ್ದು, ಆ ವೇಳೆ ಆತನ ದೇಹದಲ್ಲಿ ಚಲನೆ ಕಂಡು ಬಂದಿದ್ದು, ಕೂಡಲೇ ತಂದೆ ಹಿತೇಶ್, ಮಗುವಿನ ಮೇಲೆ ಹಾಕಿದ್ದ ಬಟ್ಟೆ ತೆಗೆದು ಬಾಯಿಗೆ ಬಾಯಿ ಇಟ್ಟು ಉಸಿರು ಕೊಟ್ಟರು. ಆಗ ಮಗನ ದೇಹದಲ್ಲಿ ಮತ್ತಷ್ಟು ಮತ್ತಷ್ಟು ಚಲನ ಕಂಡು ಬಂದಿದ್ದು, ಎದೆಯ ಬಡಿತವೂ ಶುರುವಾಯಿತು.

ಇನ್ನು ಮಗುವನ್ನು ಎತ್ತಿಕೊಂಡು ಪಾಲಕರು ಸಮೀಪದ ಖಾಸಗಿ ಆಸ್ಪತ್ರೆಗೆ ಹೋಗಿದ್ದು,. ಪರೀಕ್ಷಿಸಿದ ವೈದ್ಯರು, ಮಗು ಬದುಕುವ ಸಾಧ್ಯತೆ ಶೇ.15 ಮಾತ್ರ ಎಂದು ಹೇಳಿದರೂ ಪಾಲಕರು ಚಿಕಿತ್ಸೆ ಕೊಡಲು ಹೇಳಿದ್ದರು.

20 ದಿನಗಳ ಕಾಲ ಚಿಕಿತ್ಸೆ ಕೊಟ್ಟಿದ್ದು, ಪವಾಡ ಎಂಬಂತೆ ಮಗು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಜೂ.15 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಮನೆಯಲ್ಲಿ ಆರಾಮಾಗಿದೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

3 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

5 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

5 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

6 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

6 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

6 hours ago