ದಕ್ಷಿಣ ಕನ್ನಡ

ಶಶಿರಾಜ್ ಶೆಟ್ಟಿ ಕೊಳಂಬೆ ಸಹಿತ ನೂರಕ್ಕೂ ಅಧಿಕ ಮಂದಿ ಬಿಜೆಪಿಗೆ ಸೇರ್ಪಡೆ..

ಮಂಗಳೂರು: ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತಪ್ರಚಾರ ಬಿರುಸಿನಿಂದ ಸಾಗಿದೆ. ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಬಿಜೆಪಿ ಕಾರ್ಯಕರ್ತರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.

ಈ ಮಧ್ಯೆ, ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಶಶಿರಾಜ್ ಶೆಟ್ಟಿ ಕೊಳಂಬೆ ನೇತೃತ್ವದಲ್ಲಿ ಬಿಜೆಪಿ ಸೇರಿದರು.

ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹಾಗೂ ಉತ್ತರ ಪ್ರದೇಶದ ಗ್ರಾಮೀಣ ಅಭಿವೃದ್ಧಿ ಸಚಿವ ಡಾ| ಮಹೇಂದ್ರ ಸಿಂಗ್‌ ಅವರು ಪಕ್ಷದ ಧ್ವಜ ಹಸ್ತಾಂತರಿಸುವ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರನ್ನು ಬಿಜೆಪಿಗೆ ಬರಮಾಡಿಕೊಂಡರು. ಪಕ್ಷದ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ಸೇರಿದಂತೆ ಪಕ್ಷದ ವಿವಿಧ ನಾಯಕರು ಈ ಸಂದರ್ಭದಲ್ಲಿ ಹಾಜರಿದ್ದರು.

ಪಕ್ಷಕ್ಕೆ ಸೇರ್ಪಡೆಗೊಂಡ ನಾಯಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ, ವಾರ್ಡ್ ಗಳಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಿ, ರಾಜ್ಯದಲ್ಲಿ ಪರಿವರ್ತನೆಯ ಗಾಳಿ ಬೀಸಲಾರಂಭಿಸಿದೆ. ಕಾಂಗ್ರೆಸ್‌ನ ದುರಾಡಳಿತದಿಂದ ಬೇಸತ್ತ ಹಲವು ಮಂದಿ ಬಿಜೆಪಿಯನ್ನು ಸೇರಿಕೊಳ್ಳುತ್ತಿದ್ದಾರೆ. ಬರುವ ಪ್ರತಿಯೊಬ್ಬರನ್ನು ಬಿಜೆಪಿ ಪ್ರೀತ್ಯಾಧಾರಗಳಿಂದ ನೋಡಿಕೊಳ್ಳಲಿದೆ ಎಂದರು.

ಬಂಟ್ವಾಳದಲ್ಲಿ ರಮಾನಾಥ ರೈ ಅವರು, ತಾನು ಬೆಳೆದದ್ದು ಬಿಟ್ಟರೆ ಬೇರೊಬ್ಬ ನಾಯಕನನ್ನು ಬೆಳೆಸಿಲ್ಲ. ಅಲ್ಪಸಂಖ್ಯಾಕರ ಪರ ವಹಿಸಿ ಮಾತನಾಡುವ ಅವರು ಆ ಸಮುದಾಯಕ್ಕೆ ಏನನ್ನೂ ಮಾಡಿಲ್ಲ. ಅಲ್ಪಸಂಖ್ಯಾಕ ನಾಯಕರನ್ನೂ ಬೆಳೆಸಲು ಸಾಧ್ಯವಾಗಿಲ್ಲ. ಇದರಿಂದ ಬೇಸತ್ತ ಅಲ್ಪ ಸಂಖ್ಯಾಕ ಮಂದಿ ಹೆಚ್ಚಿನ ಪ್ರಮಾಣದಲ್ಲಿ ಬಿಜೆಪಿಯತ್ತ ಬರುತ್ತಿದ್ದಾರೆ ಎಂದರು.

ಪುನರ್‌ ಪರಿಶೀಲಿಸುವ ವಿಶ್ವಾಸ
ಶಶಿರಾಜ್‌ ಶೆಟ್ಟಿ ಕೊಳಂಬೆ ಮಾತನಾಡಿ, ಕಾಂಗ್ರೆಸ್‌ನ ಸ್ವಜನ ಪಕ್ಷಪಾತಕ್ಕೆ ಬೇಸತ್ತು ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ. ದೇಶ ಪ್ರೇಮ, ಧರ್ಮಪ್ರೇಮ ಹೊಂದಿರುವ ಬಿಜೆಪಿಯೊಂದಿಗೆ ಕೆಲಸ ಮಾಡುವುದರೊಂದಿಗೆ ಕಾಂಗ್ರೆಸ್‌ ಮುಕ್ತ ದಕ್ಷಿಣ ಕನ್ನಡ ಜಿಲ್ಲೆಗಾಗಿ ನಾನು ಪಣತೊಡುತ್ತಿದ್ದೇನೆ. ಬಿಜೆಪಿ ಸರಕಾರ ಆಡಳಿತಕ್ಕೆ ಬಂದಲ್ಲಿ ಎತ್ತಿನಹೊಳೆ ಯೋಜನೆಯನ್ನು ಪುನರ್‌ ಪರಿಶೀಲಿಸುವ ವಿಶ್ವಾಸವಿದೆ ಎಂದರು.

ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಮೋನಪ್ಪ ಭಂಡಾರಿ, ಬಿಜೆಪಿ ಮುಖಂಡರಾದ ರುಕ್ಮಯ ಪೂಜಾರಿ, ಸುಲೋಚನಾ ಜಿ.ಕೆ. ಭಟ್‌, ಹರಿಕೃಷ್ಣ ಬಂಟ್ವಾಳ್‌, ರವಿಶಂಕರ ಮಿಜಾರು, ಸುದರ್ಶನ ಮೂಡುಬಿದಿರೆ ಮುಂತಾದವರು ಉಪಸ್ಥಿತರಿದ್ದರು.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago