Featured

ಶಶಿ ತರೂರ್‌, ಮನೀಶ್‌ ತಿವಾರಿ ಪೈಕಿ ಒಬ್ಬರಿಗೆ ಕಾಂಗ್ರೆಸ್‌ ಸಂಸದೀಯ ನಾಯಕನ ಪಟ್ಟ !  -Vishwanews24

ಶಶಿ ತರೂರ್‌, ಮನೀಶ್‌ ತಿವಾರಿ ಪೈಕಿ ಒಬ್ಬರಿಗೆ ಕಾಂಗ್ರೆಸ್‌ ಸಂಸದೀಯ ನಾಯಕನ ಪಟ್ಟ !  -Vishwanews24

ಹೊಸದಿಲ್ಲಿ: ಸಂಸತ್‌ನ ಮುಂಗಾರು ಅಧಿವೇಶನ ಆರಂಭಕ್ಕೆ ಮುನ್ನವೇ ಲೋಕಸಭೆಯಲ್ಲಿ ಕಾಂಗ್ರೆಸ್‌ ಸಂಸದೀಯ ನಾಯಕನ ಬದಲಾವಣೆ ಬಹುತೇಕ ಖಚಿತವಾಗಿದೆ.

ಈ ಸ್ಥಾನಕ್ಕೆ ಶಶಿ ತರೂರ್‌ ಹಾಗೂ ಮನೀಶ್‌ ತಿವಾರಿ ಹೆಸರು ಬಲವಾಗಿ ಕೇಳಿಬಂದಿದೆ. ಇವರಿಬ್ಬರೂ ಪಕ್ಷದ ನಾಯಕತ್ವದ ವಿರುದ್ಧ ಬಂಡೆದ್ದಿರುವ ‘ಜಿ-23’ ಗುಂಪಿನಲ್ಲಿದ್ದವರು ಎನ್ನುವುದು ಗಮನಾರ್ಹ. ಗೌರವ್‌ ಗೊಗೊಯ್‌, ರಣವೀತ್‌ ಸಿಂಗ್‌ ಬಿಟ್ಟೂ, ಉತ್ತಮ್‌ಕುಮಾರ್‌ ರೆಡ್ಡಿ ಹೆಸರು ಸಹ ಹೈಕಮಾಂಡ್‌ ಪರಿಶೀಲನೆಯಲ್ಲಿದೆ ಎನ್ನಲಾಗಿದೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಒಲವು ಗಳಿಸುವ ಉದ್ದೇಶದಿಂದ ಅಧೀರ್‌ರಂಜನ್‌ ಚೌಧರಿ ಬದಲಿಗೆ ಬೇರೊಬ್ಬರನ್ನು ಸಂಸದೀಯ ನಾಯಕ ಸ್ಥಾನಕ್ಕೆ ನೇಮಕ ಮಾಡಲು ಕಾಂಗ್ರೆಸ್‌ ನಿರ್ಧರಿಸಿದೆ.

19ರಿಂದ ಸಂಸತ್‌ ಅಧಿವೇಶನ; ಈ ಸಲ ಏಕಕಾಲದಲ್ಲಿ ಕಲಾಪ

ಸಂಸತ್‌ನ ಮುಂಗಾರು ಅಧಿವೇಶನ ಜುಲೈ 19ರಿಂದ ಆಗಸ್ಟ್‌ 13ರವರೆಗೆ ನಡೆಯಲಿದೆ ಎಂದು ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ತಿಳಿಸಿದ್ದಾರೆ. ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಬಾರಿ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪಗಳು ಏಕಕಾಲದಲ್ಲಿ ನಡೆಯಲಿವೆ. ನಿತ್ಯ ಬೆಳಗ್ಗೆ 11 ಗಂಟೆಗೆ ಕಲಾಪ ಆರಂಭವಾಗಲಿದೆ ಎಂದು ತಿಳಿಸಿದರು.

ಕೊರೊನಾ ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಲೋಕಸಭೆ ಸದಸ್ಯರ ಪೈಕಿ 323 ಮಂದಿ ಕೊರೊನಾ ನಿರೋಧಕ ಲಸಿಕೆಯ ಎರಡೂ ಡೋಸ್‌ ಪಡೆದಿದ್ದರೆ, 23 ಜನ ವೈದ್ಯಕೀಯ ಕಾರಣಗಳಿಂದ ಒಂದೂ ಡೋಸ್‌ ಪಡೆದಿಲ್ಲ. ಉಳಿದವರು ಒಂದು ಡೋಸ್‌ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು. ಕೊರೊನಾ ಕಾರಣದಿಂದ ಮುಂಗಾರು ಮತ್ತು ಬಜೆಟ್‌ ಅಧಿವೇಶನಗಳಲ್ಲಿ ಉಭಯ ಸದನಗಳ ಕಲಾಪವನ್ನು ಪಾಳಿಯಲ್ಲಿ ನಡೆಸಲಾಗಿತ್ತು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago