ಆಗ್ರಾ: 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪುನರಾವರ್ತನೆಯಾದರೆ ಭಾರತ, ಹಿಂದೂ ಪಾಕಿಸ್ತಾನ ಆಗಲಿದೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದರು. ಈ ಹೇಳಿಕೆಯನ್ನು ವಿರೋಧಿಸಿರುವ ಅಲಿಘಡ ಮುಸ್ಲಿಂ ಯುವ ಮಂಡಳಿ ಅಧ್ಯಕ್ಷ ಮೊಹಮ್ಮದ್ ಆಮೀರ್ ರಶೀದ್, ತರೂರ್ ಅವರ ಮುಖಕ್ಕೆ ಮಸಿ ಬಳಿಯುವವರಿಗೆ ₹ 11 ಸಾವಿರ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
‘ಕಾಂಗ್ರೆಸ್ ನಾಯಕತ್ವದ ಬೆಂಬಲದೊಂದಿಗೆ ಹೊರಬಂದಿರುವ ಈ ಬೇಜವಾಬ್ದಾರಿ ಹೇಳಿಕೆಗೆ ಹಿಂದೂಗಳು ಮಾತ್ರವಲ್ಲ ದೇಶಭಕ್ತ ಮುಸ್ಲಿಮರಿಗೂ ನೋವಾಗಿದೆ. ಶ್ರೇಷ್ಠ ದೇಶದಲ್ಲಿ ಸಾಮರಸ್ಯದಿಂದ ಬದುಕುತ್ತಿರುವ ಹಿಂದೂ-ಮುಸ್ಲಿಮರನ್ನು ಒಡೆಯಲು ಪ್ರಯತ್ನಿಸಲಾಗುತ್ತಿದೆ’ ಎಂದು ರಶೀದ್ ಹೇಳಿದ್ದಾರೆ.
‘ಬಿಜೆಪಿ ಆಡಳಿತದಲ್ಲಿ ಭಾರತ ಅಭಿವೃದ್ಧಿ ಸಾಧಿಸುವುದನ್ನು ನೋಡಲು ಸಿದ್ಧವಿಲ್ಲದ ಕಾಂಗ್ರೆಸ್ಸಿನವರು ಅಧಿಕಾರ ಹಿಡಿಯುವುದಕ್ಕಾಗಿ ಎಂತಹದೇ ಹಾದಿ ತುಳಿಯಲು ಸಿದ್ಧವಾಗಿದ್ದಾರೆ’ ಎಂದು ಆರೋಪಿಸಿರುವ ಅವರು ಆರ್‌ಎಸ್‌ಎಸ್ ಸ್ವಯಂ ಸೇವಕನೂ ಹೌದು.
ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬುಧವಾರ ಮಾತನಾಡಿದ್ದ ತರೂರ್, ಹಿಂದೂ ಪಾಕಿಸ್ತಾನ ಹೇಳಿಕೆ ನೀಡಿದ್ದರು. ಪ್ರಜಾಸತ್ತಾತ್ಮಕ ಸಂವಿಧಾನವನ್ನು ಬದಲಿಸಿ ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಸಹಕಾರಿಯಾಗುವಂತಹ ಹೊಸ ಸಂವಿಧಾನ ಬರೆಯಲಾಗುವುದು ಎಂಬರ್ಥದಲ್ಲಿ ಮಾತನಾಡಿದ್ದರು.
ಈ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ನಾಯಕರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಕ್ಷಮೆ ಕೋರಬೇಕೆಂದು ಆಗ್ರಹಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…