Featured

ಶಶಿ ತರೂರ್‌ ಮುಖಕ್ಕೆ ಮಸಿ ಬಳಿಯುವವರಿಗೆ ಬಹುಮಾನ ಘೋಷಿಸಿದ ಮುಸ್ಲಿಂ ಯುವ ಮಂಡಳಿ ಅಧ್ಯಕ್ಷ ಮೊಹಮ್ಮದ್‌ ಆಮೀರ್‌ ರಶೀದ್‌

ಆಗ್ರಾ: 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪುನರಾವರ್ತನೆಯಾದರೆ ಭಾರತ, ಹಿಂದೂ ಪಾಕಿಸ್ತಾನ ಆಗಲಿದೆ ಎಂದು ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಹೇಳಿದ್ದರು. ಈ ಹೇಳಿಕೆಯನ್ನು ವಿರೋಧಿಸಿರುವ ಅಲಿಘಡ ಮುಸ್ಲಿಂ ಯುವ ಮಂಡಳಿ ಅಧ್ಯಕ್ಷ ಮೊಹಮ್ಮದ್‌ ಆಮೀರ್‌ ರಶೀದ್‌, ತರೂರ್‌ ಅವರ ಮುಖಕ್ಕೆ ಮಸಿ ಬಳಿಯುವವರಿಗೆ ₹ 11 ಸಾವಿರ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

ಕಾಂಗ್ರೆಸ್‌ ನಾಯಕತ್ವದ ಬೆಂಬಲದೊಂದಿಗೆ ಹೊರಬಂದಿರುವ ಈ ಬೇಜವಾಬ್ದಾರಿ ಹೇಳಿಕೆಗೆ ಹಿಂದೂಗಳು ಮಾತ್ರವಲ್ಲ ದೇಶಭಕ್ತ ಮುಸ್ಲಿಮರಿಗೂ ನೋವಾಗಿದೆ. ಶ್ರೇಷ್ಠ ದೇಶದಲ್ಲಿ ಸಾಮರಸ್ಯದಿಂದ ಬದುಕುತ್ತಿರುವ ಹಿಂದೂ-ಮುಸ್ಲಿಮರನ್ನು ಒಡೆಯಲು ಪ್ರಯತ್ನಿಸಲಾಗುತ್ತಿದೆ’ ಎಂದು ರಶೀದ್‌ ಹೇಳಿದ್ದಾರೆ.

‘ಬಿಜೆಪಿ ಆಡಳಿತದಲ್ಲಿ ಭಾರತ ಅಭಿವೃದ್ಧಿ ಸಾಧಿಸುವುದನ್ನು ನೋಡಲು ಸಿದ್ಧವಿಲ್ಲದ ಕಾಂಗ್ರೆಸ್ಸಿನವರು ಅಧಿಕಾರ ಹಿಡಿಯುವುದಕ್ಕಾಗಿ ಎಂತಹದೇ ಹಾದಿ ತುಳಿಯಲು ಸಿದ್ಧವಾಗಿದ್ದಾರೆ’ ಎಂದು ಆರೋಪಿಸಿರುವ ಅವರು ಆರ್‌ಎಸ್‌ಎಸ್‌ ಸ್ವಯಂ ಸೇವಕನೂ ಹೌದು.

ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬುಧವಾರ ಮಾತನಾಡಿದ್ದ ತರೂರ್‌, ಹಿಂದೂ ಪಾಕಿಸ್ತಾನ ಹೇಳಿಕೆ ನೀಡಿದ್ದರು. ಪ್ರಜಾಸತ್ತಾತ್ಮಕ ಸಂವಿಧಾನವನ್ನು ಬದಲಿಸಿ ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಸಹಕಾರಿಯಾಗುವಂತಹ ಹೊಸ ಸಂವಿಧಾನ ಬರೆಯಲಾಗುವುದು ಎಂಬರ್ಥದಲ್ಲಿ ಮಾತನಾಡಿದ್ದರು.

ಈ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ನಾಯಕರು ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ ಕ್ಷಮೆ ಕೋರಬೇಕೆಂದು ಆಗ್ರಹಿಸಿದ್ದರು.

Vishwa News 24

Recent Posts

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ – vishwanews24

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…

13 minutes ago

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ – vishwanews24

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…

35 minutes ago

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

20 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

21 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

21 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

23 hours ago