Featured

ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೂ ಅಥವಾ ಲಿಂಗ ಪರಿವರ್ತನೆ ಆದವರು ಇನ್ನು ಮುಂದೆ  ಮಹಿಳಾ ಕ್ರಿಕೆಟ್​ನಲ್ಲಿ ಆಡುವಂತಿಲ್ಲ.. Vishwanews24

ಮಂಗಳಮುಖಿ ಅಥವಾ ಲಿಂಗ ಪರಿವರ್ತನೆ ಆದವರು ಇನ್ನು ಮುಂದೆ  ಮಹಿಳಾ ಕ್ರಿಕೆಟ್​ನಲ್ಲಿ ಆಡುವಂತಿಲ್ಲ..

ಅಹಮದಾಬಾದ್ : ಮಂಗಳಮುಖಿಯರು ಅಥವಾ ಲಿಂಗ ಪರಿವರ್ತನೆ ಆದವರು ಇನ್ನು ಮುಂದೆ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್​ನಲ್ಲಿ ಆಡುವಂತಿಲ್ಲ ಎಂದು ಐಸಿಸಿ ಮಂಗಳವಾರ ಮಹತ್ವದ ನಿಯಮವನ್ನು ಜಾರಿಗೆ ತಂದಿದೆ.

ಪುರುಷರಾಗಿ ಪ್ರೌಢಾವಸ್ಥೆಗೆ ಬಂದವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೂ ಅಥವಾ ಲಿಂಗ ಪರಿವರ್ತನೆಯಾಗಿದ್ದರೂ ಮಹಿಳೆಯರೊಂದಿಗೆ ಕ್ರಿಕೆಟ್​ ಆಡುವಂತಿಲ್ಲ. ಆಟಗಾರ್ತಿಯರ ಸುರಕ್ಷತೆ ಮತ್ತು ಮಹಿಳಾ ಕ್ರಿಕೆಟ್​ ಸಮಗ್ರತೆಯನ್ನು ಕಾಪಾಡಿಕೊಳ್ಳುವ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಐಸಿಸಿ ತಿಳಿಸಿದೆ.

ಕ್ರೀಡೆಗೆ ಸಂಬಂಧಿಸಿದ ವಿವಿಧ ವ್ಯಕ್ತಿ&ಸಂಸ್ಥೆಗಳ ಜತೆಗೆ 9 ತಿಂಗಳ ಕಾಲ ಸಮಗ್ರ ಚರ್ಚೆ ನಡೆಸಿದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಹೊಸ ಲಿಂಗ ಅರ್ಹತೆಯ ನಿಯಮಾವಳಿಯನ್ನು ಜಾರಿಗೆ ತರಲು ಐಸಿಸಿ ಮಂಡಳಿ ಸಮ್ಮತಿಸಿದೆ. 2028ರ ಲಾಸ್​ ಏಂಜಲಿಸ್​ ಒಲಿಂಪಿಕ್ಸ್​ಗೆ ಟಿ20 ಕ್ರಿಕೆಟ್​ ಸೇರ್ಪಡೆಗೊಂಡಿರುವುದು ಕೂಡ ಐಸಿಸಿ ಶೀಘ್ರವಾಗಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲು ಕಾರಣವಾಗಿದೆ ಎನ್ನಲಾಗಿದೆ.

ಕ್ರೀಡೆಯಲ್ಲಿ ಲಿಂಗ ಪರಿವರ್ತಿತರ ಪಾಲ್ಗೊಳ್ಳುವಿಕೆ ಕಳೆದ ಕೆಲ ವರ್ಷಗಳಿಂದ ಅತ್ಯಂತ ಚರ್ಚಾವಸ್ತುವಾಗಿದ್ದು, ಕ್ರಿಕೆಟ್​ ಕೂಡ ಈಗ ಒಲಿಂಪಿಕ್ಸ್​ ಕ್ರೀಡೆಯಾಗಿರುವುದರಿಂದ ಅದು ಈ ಬಗ್ಗೆ ಸ್ಪಷ್ಟ ನಿರ್ಧಾರವೊಂದನ್ನು ತೆಗೆದುಕೊಳ್ಳುವುದು ಅಗತ್ಯವಾಗಿತ್ತು. ಆದರೆ ದೇಶೀಯ ಕ್ರಿಕೆಟ್​ನಲ್ಲಿ ಲಿಂಗ ಪರಿವರ್ತಿತರಿಗೆ ಆಡಲು ಅವಕಾಶ ನೀಡುವ ಅಧಿಕಾರವನ್ನು ಐಸಿಸಿ, ಆಯಾ ದೇಶಗಳಿಗೆ ಬಿಟ್ಟಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್​ ಆಡಿದ ಮೊದಲ ಮಂಗಳಮುಖಿ ಎನಿಸಿದ್ದ ಕೆನಡದ ಡೇನಿಯಲ್ ಮೆಕ್‌ಗಾಹೆ ಇನ್ನು ಮಹಿಳಾ ಕ್ರಿಕೆಟ್​ನಲ್ಲಿ ಮುಂದುವರಿಯಲು ಅವಕಾಶವಿರುವುದಿಲ್ಲ. ಡೇನಿಯಲ್ ಮೆಕ್‌ಗಾಹೆ ಮಹಿಳಾ ಕ್ರಿಕೆಟ್​ನಲ್ಲಿ ಇದುವರೆಗೆ 6 ಪಂದ್ಯ ಆಡಿದ್ದು, 118 ರನ್​ ಬಾರಿಸಿದ್ದಾರೆ.

 

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

10 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

11 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

11 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

11 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

12 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago