Featured

ಶಸ್ತ್ರಾಸ್ತ್ರ ಖರೀದಿಯಲ್ಲಿ ಭಾರತ ವಿಶ್ವದಲ್ಲಿ ಎರಡನೇ ಸ್ಥಾನ – Vishwanews24

ವಾಷಿಂಗ್ಟನ್‌ : 2014–18ರಲ್ಲಿ ಶಸ್ತ್ರಾಸ್ತ್ರ ಖರೀದಿಯಲ್ಲಿ ಭಾರತ ವಿಶ್ವದಲ್ಲಿ ಎರಡನೇ ಸ್ಥಾನದಲ್ಲಿದ್ದು, ಜಾಗತಿಕ ಒಟ್ಟು ಖರೀದಿಯಲ್ಲಿ ಶೇ 9.5ರಷ್ಟು ಪಾಲು ಹೊಂದಿದೆ.

ಸ್ಟಾಕ್‌ಹೋಮ್‌ ಇಂಟರ್‌ನ್ಯಾಷನಲ್‌ ‍ಪೀಸ್‌ ರಿಸರ್ಚ್‌ ಇನ್‌ಸ್ಟಿಟ್ಯೂಟ್‌(ಎಸ್‌ಐಪಿಆರ್‌ಐ) ಸೋಮವಾರ ‍ಪ್ರಕಟಿಸಿರುವ ವರದಿಯಲ್ಲಿ ಈ ಅಂಶ ತಿಳಿದು ಬಂದಿದೆ. 2009–13 ಮತ್ತು 2014–18ರ ನಡುವೆ ಭಾರತದ ಶಸ್ತ್ರಾಸ್ತ್ರ ಆಮದು ಪ್ರಮಾಣ ಶೇ 24ರಷ್ಟು ಇಳಿಕೆಯಾಗಿದೆ. ವರದಿ ಪ್ರಕಾರ, ರಷ್ಯಾದಿಂದ 2001ರಲ್ಲಿ ಯುದ್ಧ ವಿಮಾನಗಳಿಗೆ ಹಾಗೂ 2008ರಲ್ಲಿಫ್ರಾನ್ಸ್‌ನಿಂದ ಸಬ್‌ಮರೀನ್‌ಗಳ ಖರೀದಿಗೆ ಇಡಲಾದ ಬೇಡಿಕೆ ಪೂರೈಕೆಯಾಗುವಲ್ಲಿ ನಿಧಾನವಾಗಿರುವ ಕಾರಣದಿಂದಲೂ ಆಮದು ಪ್ರಮಾಣ ಕಡಿತಗೊಂಡಿದೆ.

2009–13ರಲ್ಲಿ ರಷ್ಯಾದಿಂದ ಭಾರತ ಶೇ 76ರಷ್ಟು ಶಸ್ತ್ರಾಸ್ತ್ರ ಆಮದು ಮಾಡಿಕೊಂಡಿದ್ದರೆ, 2014–18ರಲ್ಲಿ ಶೇ 58ರಷ್ಟಾಗಿದೆ. 2014–18ರಲ್ಲಿ ಇಸ್ರೇಲ್‌, ಅಮೆರಿಕ ಹಾಗೂ ಫ್ರಾನ್ಸ್‌ನಿಂದ ಭಾರತಕ್ಕೆ ಶಸ್ತ್ರಾಸ್ತ್ರ ರಫ್ತು ಪ್ರಮಾಣ ಹೆಚ್ಚಿದೆ. ಇತ್ತೀಚೆಗೆ ಭಾರತ ರಷ್ಯಾದೊಂದಿಗೆ ಬೃಹತ್‌ ಪ್ರಮಾಣದ ಶಸ್ತ್ರಾಸ್ತ್ರ ಖರೀದಿಗೆ ಒಪ್ಪಂದ ಮಾಡಿಕೊಂಡಿದ್ದು, ಮುಂದಿನ ಐದು ವರ್ಷಗಳಲ್ಲಿ ಆಮದು ಪ್ರಮಾಣ ಏರಿಕೆಯಾಗಲಿದೆ. ಎಸ್‌–400 ಕ್ಷಿಪಣಿ(ವಾಯು ರಕ್ಷಣಾ ವ್ಯವಸ್ಥೆ), ನಾಲ್ಕು ಯುದ್ಧ ನೌಕೆಗಳು, ಎಕೆ–203 ರೈಫಲ್‌ಗಳು, ಗುತ್ತಿಗೆ ಆಧಾರದಲ್ಲಿ ಪರಮಾಣು ಆಕ್ರಮಣಕಾರಿ ಸಬ್‌ಮರೀನ್‌, ಕಮೋವ್‌–226ಟಿ ಹೆಲಿಕಾಪ್ಟರ್‌ಗಳು, ಎಂಐ–17 ಹೆಲಿಕಾಪ್ಟರ್‌ಗಳು ಹಾಗೂ ವಾಯು ರಕ್ಷಣಾ ವ್ಯವಸ್ಥೆಗಳಿಗಾಗಿ ಭಾರತ ಒಪ್ಪಂದ ಮಾಡಿಕೊಂಡಿದೆ.

ಆದರೆ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳ ಮೇಲೆ ಭಾರತವು ಅವಲಂಬನೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಯತ್ನದ ಫ‌ಲವಾಗಿ 2009-2013 ಮತ್ತು 2014-2018ರಲ್ಲಿನ ರಷ್ಯಾದಿಂದ ಮಾಡಿಕೊಳ್ಳುತ್ತಿದ್ದ ಶಸ್ತ್ರಾಸ್ತ್ರ ಆಮದು ತೀರಾ ಕುಂಠಿತವಾಗಿದೆ ಎಂದು ವರದಿ ತಿಳಿಸಿದೆ. 2014–18ರಲ್ಲಿ ಫ್ರಾನ್ಸ್‌, ಇಸ್ರೇಲ್‌, ಅಮೆರಿಕ ದೇಶಗಳು ಭಾರತಕ್ಕೆ ಶಸ್ತ್ರಾಸ್ತ್ರವನ್ನು ಹೆಚ್ಚಿನ ಪ್ರಮಾಣದಲ್ಲಿ ರಫ್ತು ಮಾಡಿದೆ. ಒಟ್ಟಾರೆ ಜಾಗತಿಕವಾಗಿ ಸೌದಿ ಅರೇಬಿಯಾ ಅತಿ ಹೆಚ್ಚು ಶಸ್ತ್ರಾಸ್ತ್ರ ಆಮದು ಮಾಡಿಕೊಳ್ಳುವ ದೇಶವಾಗಿದೆ. ಇನ್ನು ಶಸ್ತ್ರಾಸ್ತ್ರ ರಫ್ತುದಾರ ದೇಶದಲ್ಲಿ ಚೀನಾ ಪ್ರಮುಖ ರಾಷ್ಟವಾಗಿ ಹೊರಹೊಮ್ಮಿದೆ. ಚೀನಾ ದೇಶದ ಪ್ರಮುಖ ಗ್ರಾಹಕ ದೇಶವಾಗಿ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ಮುಂಚೂಣಿಯಲ್ಲಿದೆ.

ಒಟ್ಟು ಶಸ್ತ್ರಾಸ್ತ್ರ ರಫ್ತಿನಲ್ಲಿ ಚೀನಾ ಶೇ 2.7ರಷ್ಟು ವಹಿವಾಟು ನಡೆಸುವ ಮೂಲಕ ಪ್ರಮುಖ ಶಸ್ತ್ರಾಸ್ತ್ರ ರಫ್ತುದಾರ ರಾಷ್ಟ್ರವಾಗಿ ಹೊರಹೊಮ್ಮಿದೆ. ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ಚೀನಾದ ಪ್ರಮುಖ ಗ್ರಾಹಕ ರಾಷ್ಟ್ರಗಳಾಗಿವೆ.

ರಾಷ್ಟ್ರ– ಶಸ್ತ್ರಾಸ್ತ್ರ ಆಮದು ಪ್ರಮಾಣ (2014–18)

ಸೌದಿ ಅರೇಬಿಯಾ– ಶೇ 12

ಭಾರತ– ಶೇ 9.5

ಈಜಿಪ್ಟ್‌– ಶೇ 5.1

ಲಿಯಾ– ಶೇ 4.6

ಅಲ್ಜಿರಿಯಾ– ಶೇ 4.4

ಚೀನಾ– ಶೇ 4.2

ಯು.ಎ.ಇ– ಶೇ 3.7

ಇರಾಕ್‌– ಶೇ 3.7

ದಕ್ಷಿಣ ಕೊರಿಯಾ– ಶೇ 3.1

ವಿಯೆಟ್ನಾಂ– ಶೇ 2.9

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

19 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago