Featured

ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ – vishwanews24

ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ

ಬೆಳಗಾವಿ : ನಗರದ ಶಿವಬಸವ ನಗರದಲ್ಲಿ ಐದು ವರ್ಷಗಳ ಹಿಂದೆ ನಡೆದ ಶಹಬಾಝ್ ಪಠಾಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ಬೆಳಗಾವಿಯ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ನ್ಯಾಯಾಧೀಶ ಗಂಗಾಧರ ಕೆ. ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ದೂರುದಾರರ ಪರವಾಗಿ ಸರಕಾರಿ ಅಭಿಯೋಜಕ ಆರ್.ಎ. ಗಡ್ಕರಿ ವಾದ ಮಂಡಿಸಿದರು. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಗಳಾದ ಲಕ್ಷ್ಮಣ ದಡ್ಡಿ, ಸವೀನ ದಡ್ಡಿ, ಬಸವರಾಜ ದಡ್ಡಿ ಹಾಗೂ ಬಸವಣ್ಣಿ ನಾಯಕರನ್ನು ನ್ಯಾಯಾಲಯ ದೋಷಿಗಳೆಂದು ಘೋಷಿಸಿದೆ. ಇದೇ ವೇಳೆ, ಇವರ ವಿರುದ್ಧ ಇಬ್ಬರ ಮೇಲಿನ ಕೊಲೆ ಯತ್ನ ಪ್ರಕರಣದ ಆರೋಪವೂ ಸಾಬೀತಾಗಿದೆ.

ಇದನ್ನೂ ಓದಿ : 

2020ರಲ್ಲಿ ನಡೆದ ಈ ಘಟನೆಯಲ್ಲಿ, ಶಹಬಾಝ್ ಪಠಾಣ್ ಸ್ನೇಹಿತನ ಜನ್ಮದಿನ ಕಾರ್ಯಕ್ರಮದಿಂದ ಮನೆಗೆ ಬೈಕಿನಲ್ಲಿ ಹಿಂದಿರುಗುತ್ತಿದ್ದ ವೇಳೆ, ಆರೋಪಿಗಳು ವಾಹನದ ಮೂಲಕ ಅವರ ಬೈಕಿಗೆ ಢಿಕ್ಕಿ ಹೊಡೆದು ದಾಳಿ ನಡೆಸಿದ್ದರು. ಪ್ರಾಣ ಉಳಿಸಿಕೊಳ್ಳಲು ಶಹಬಾಝ್ ಸಮೀಪದ ನಿವೃತ್ತ ಡಿವೈಎಸ್ಪಿಯವರ ಮನೆಗೆ ಓಡಿ ಹೋಗಿದ್ದರೂ, ಆರೋಪಿಗಳು ಅವರನ್ನು ಬೆನ್ನಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿದ್ದರು.

ಗಂಭೀರವಾಗಿ ಗಾಯಗೊಂಡ ಶಹಬಾಝ್ ಪಠಾಣ್ ಸ್ಥಳದಲ್ಲೇ ಸಾವನ್ನಪ್ಪಿದರು.

ತನಿಖೆ ವೇಳೆ ಪೊಲೀಸರು 30 ಮಂದಿ ಸಾಕ್ಷಿದಾರರ ಹೇಳಿಕೆಗಳು ಮತ್ತು 128ಕ್ಕೂ ಹೆಚ್ಚು ದಾಖಲೆ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯಕ್ಕೆ ಮಂಡಿಸಿದ್ದರು. ಈ ಎಲ್ಲ ಸಾಕ್ಷ್ಯಗಳನ್ನು ಪರಿಶೀಲಿಸಿದ ಬಳಿಕ ನ್ಯಾಯಾಲಯ ಆರೋಪಿಗಳ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ತೀರ್ಮಾನಿಸಿದೆ.

ಇದನ್ನೂ ಓದಿ : 

ಇದಲ್ಲದೆ, ನ್ಯಾಯಾಲಯ ಆರೋಪಿಗಳಿಗೆ ಒಟ್ಟು 9.60 ಲಕ್ಷ ರೂ. ದಂಡ ವಿಧಿಸಿದ್ದು, ಅದರಲ್ಲಿ ಎಂಟು ಲಕ್ಷ ರೂ.ವನ್ನು ಮೃತ ಶಹಬಾಝ್ ಪಠಾಣ್ ಅವರ ಕುಟುಂಬಕ್ಕೆ ಪರಿಹಾರವಾಗಿ ನೀಡಲು ಹಾಗೂ 1.60 ಲಕ್ಷ ರೂ.ವನ್ನು ದೂರುದಾರರಿಗೆ ನೀಡಲು ಆದೇಶಿಸಿದೆ.

Vishwa News 24

Recent Posts

ರೈಲ್ವೇ ಪ್ರಯಾಣಿಕರಿಗೆ ಶುಭಸುದ್ದಿ: ಬೆಂಗಳೂರು, ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್​ – vishwanews24

ಆಗಸ್ಟ್ 1ರಿಂದ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಆರಂಭ ಬೆಂಗಳೂರು: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು…

2 hours ago

ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ : ಪ್ರಸಾದ್ ರಾಜ್ ಕಾಂಚನ್ – vishwanews24

ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ :…

2 hours ago

ಪಡುಬಿದ್ರಿ : ಬೈಕ್ ಕಳವು ಪ್ರಕರಣ ; ಓರ್ವನ  ಬಂಧನ – vishwanews24

ಪಡುಬಿದ್ರಿ : ಬೈಕ್ ಕಳವು ಪ್ರಕರಣ - ಓರ್ವನ  ಬಂಧನ ಪಡುಬಿದ್ರಿ,: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು…

3 hours ago

ಉಡುಪಿ: ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ; ಅರಣ್ಯ ಅಧಿಕಾರಿ ಕೂದಲೆಳೆ ಅಂತರದಲ್ಲಿ ಪಾರು – vishwanews24

ಉಡುಪಿ: ಹಠಾತ್ತನೆ ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ; ಅರಣ್ಯ ಅಧಿಕಾರಿ ಕೂದಲೆಳೆ ಅಂತರದಲ್ಲಿ ಪಾರು ಉಡುಪಿ: ಜಿಲ್ಲೆಯ ಹಾವಂಜೆ…

3 hours ago

ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ – vishwanews24

ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ ಉಡುಪಿ:…

4 hours ago

ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ತೆಗೆಸಿರುವುದು ಬ್ರಾಹ್ಮಣ ಸಮುದಾಯದ ವಿರುದ್ಧ ಹೆಣೆಯುತ್ತಿರುವ ವ್ಯವಸ್ಥಿತ ಜಾಲ : ಕೃಷ್ಣಮೂರ್ತಿ ಆಚಾರ್ಯ ಖಂಡನೆ – vishwanews24

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಂದ ಬಲವಂತವಾಗಿ ಜನಿವಾರ ತೆಗೆಸಿದ ಘಟನೆ ತೀರಾ ಅವಮಾನಕಾರಿ ಬ್ರಾಹ್ಮಣ ಸಮಾಜದ ಧಾರ್ಮಿಕ ಹಕ್ಕು, ಸಂಸ್ಕೃತಿ…

4 hours ago