Featured

ಶಹಬ್ಬಾಶ್ ಮಗನೇ, ಮಗನಿಗೆ ಶಹಬ್ಬಾಶ್ ಎಂದ ಮಾಜಿ ಪ್ರಧಾನಿ ದೇವೇಗೌಡ! ಯಾಕೆ ಗೊತ್ತಾ ಓದಿ ಈ ವರದಿ

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಮಗ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರಿಗೆ ಶಹಬ್ಬಾಶ್ ಅಂದಿದ್ದಾರೆ.

ಹೌದು. ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಇಳಿಸಿದ್ದ ಕುಮಾರಸ್ವಾಮಿ ನಿರ್ಧಾರಕ್ಕೆ ದೊಡ್ಡಗೌಡರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಒಳ್ಳೆಯ ನಿರ್ಧಾರ ಅಂತ ಹೇಳುವ ಮೂಲಕ ಸೆಸ್ ಇಳಿಸಿರುವ ಕುರಿತು ಸರ್ಕಾರದ ಬೆನ್ನು ತಟ್ಟಿದ್ದಾರೆ. ಅಲ್ಲದೇ ಮುಂದಿನ ದಿನಗಳಲ್ಲಿ ಜನರ ಮೇಲಿನ ಹಣದ ಹೊರೆಯನ್ನು ಕಡಿಮೆ ಮಾಡಿಕೊಡುವುದಾಗಿ ನರೇಂದ್ರ ಮೋದಿ ಸರ್ಕಾರವನ್ನು ಕೇಳಿಕೊಂಡಿದ್ದಾರೆ.

ದಿನನಿತ್ಯ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ದರ ಏರಿಕೆಯಾಗುತ್ತಿದೆ. ಸಾರ್ವಜನಿಕರ ಮೇಲಿನ ಹೊರೆಯನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಇಂದು ಪೆಟ್ರೋಲ್, ಡೀಸೆಲ್ ರೇಟ್ ಮೇಲಿನ ಸೆಸ್ ಕಡಿತಗೊಳಿಸುತ್ತಿದೆ.

ಈ ಕುರಿತು ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕಲಬುರಗಿಯಲ್ಲಿ ಮಾತನಾಡಿ, ಸಮ್ಮಿಶ್ರ ಸರ್ಕಾರ ರಚನೆ ಬಳಿಕ 40 ಸಾವಿರ ಕೋಟಿ ರೂ. ಮೊತ್ತದಷ್ಟು ರೈತರ ಸಾಲ ಮನ್ನಾ ಘೋಷಿಸಿದ್ದ ಎಚ್‍ಡಿಕೆ, ಅದಕ್ಕಾಗಿ ಹಣ ಹೊಂದಿಸಲು ಸೆಸ್ ಹೆಚ್ಚಿಸಿದ್ದರು. ಬಜೆಟ್ ನಲ್ಲಿ ಕುಮಾರಸ್ವಾಮಿ ಪೆಟ್ರೋಲ್ ಮೇಲಿನ ಸುಂಕವನ್ನು ಶೇ.30 ರಿಂದ ಶೇ.32ಕ್ಕೆ ಹೆಚ್ಚಿಸಿದ್ದರೆ ಡೀಸೆಲ್ ಮೇಲಿನ ಸುಂಕವನ್ನು ಶೇ.19 ರಿಂದ ಶೇ.21ಕ್ಕೆ ಏರಿಸಿದ್ದರು. ಆದರೆ ಬಂದ್ ದಿನವೇ ಸೆಸ್ ಇಳಿಸುವ ಸುಳಿವನ್ನು ನೀಡಿದ್ದರು. ಇದರಂತೆ ಲೀಟರ್ ಪೆಟ್ರೋಲ್, ಡೀಸೆಲ್‍ಗೆ 2 ರೂ ಇಳಿಕೆಯಾಗಲಿದೆ.ನೆರೆರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದ ಸರ್ಕಾರ ವಿಧಿಸುವ ಸೆಸ್ ಕಡಿಮೆಯಾದರೂ ತೈಲಬೆಲೆ ಹೆಚ್ಚಳದಿಂದ ಜನಸಾಮಾನ್ಯರಿಗೆ ಹೊರೆಯಾಗಿರುವ ಕಾರಣ ಸೆಸ್ ಕಡಿಮೆ ಮಾಡಲು ಸಿಎಂ ತೀರ್ಮಾನಿಸಿದ್ದಾರೆ. ಇತ್ತ ತೈಲ ಬೆಲೆ ನಿತ್ಯ ಹೆಚ್ಚಾಗುತ್ತಿದ್ದು ಇಂದು ಕೂಡ ಲೀಟರ್ ಪೆಟ್ರೋಲ್‍ಗೆ 15 ಪೈಸೆ, ಡೀಸೆಲ್ 6 ಪೈಸೆಯಷ್ಟು ಹೆಚ್ಚಳವಾಗಿದೆ. ರಾಜಸ್ಥಾನ, ಆಂಧ್ರ ಪ್ರದೇಶ, ಪಶ್ಚಿಮ ಬಂಗಾಳ ಸರ್ಕಾರದ ನಡೆಯನ್ನು ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರ ಅನುಸರಿಸಿದ್ದು ರಾಜ್ಯದಲ್ಲೂ ಪೆಟ್ರೋಲ್ ಡೀಸೆಲ್ ದರ ಇಳಿಕೆ ಮಾಡಿದೆ.

 ಜಾಹಿರಾತು: ಪಂಡೀತ್ ಸುದರ್ಶನ್ ಭಟ್

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago