Featured

ಶಾಂತಿ ಕಾಪಾಡಬೇಕೆಂದರೆ ಹಿಂಸೆ ಬಿಡಿ; ನಂಬಿಕೆ ಉಳಿಸಿಕೊಳ್ಳಿ : ಪಾಕ್ ಗೆ ಪ್ರಧಾನಿ ಮೋದಿ -Vishwanews24

ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿ ಎರಡನೇ ಭಾರಿ ಪ್ರಧಾನಿಯಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿಗೆ ಪಾಕ್ ಪ್ರಧಾನಿ ಇಮ್ರಾನ್‌ ಖಾನ್‌ ಖುದ್ದು ದೂರವಾಣಿ ಕರೆ ಮಾಡಿ ಮಾತನಾಡಿ ಶುಭ ಕೋರಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ ಎರಡನೇ ಅವಧಿಗೆ ಪ್ರಧಾನಿಯಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿ ಅವರಿಗೆ ರವಿವಾರ ಇಮ್ರಾನ್‌ ಖಾನ್‌ ಖುದ್ದು ದೂರವಾಣಿ ಕರೆ ಮಾಡಿ ಮಾತನಾಡಿದರು. ‘ಎರಡೂ ದೇಶಗಳ ಜನರ ಒಳಿತಿಗಾಗಿ ದ್ವಿಪಕ್ಷೀಯ ಸಂಬಂಧವನ್ನು ವೃದ್ಧಿಸಿಕೊಳ್ಳೋಣ ಹಾಗೂ ಜತೆಯಾಗಿ ಮುಂದೆ ಸಾಗೋಣ’ ಎಂದು ಇಮ್ರಾನ್‌ ಖಾನ್‌ ಅವರು ಮೋದಿಯವರನ್ನು ಕೇಳಿಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಮೋದಿ, ‘ಈ ಪ್ರದೇಶದಲ್ಲಿ ಶಾಂತಿ ಮತ್ತು ಸಮೃದ್ಧಿ ಕಾಪಾಡಿಕೊಳ್ಳಬೇಕೆಂದರೆ ಹಿಂಸಾಚಾರ ಮತ್ತು ಉಗ್ರವಾದ ಮುಕ್ತ ಪರಿಸರವನ್ನು ನಿರ್ಮಿಸಬೇಕು ಹಾಗೂ ನಂಬಿಕೆಯನ್ನು ಉಳಿಸಿಕೊಳ್ಳಬೇಕು’ ಎಂದಿದ್ದಾರೆ. ಅಲ್ಲದೆ ನಮ್ಮದು ನೆರೆರಾಷ್ಟ್ರ ಸ್ನೇಹಿ ನೀತಿ ಯಾಗಿದ್ದು, ನಾವು ಜಂಟಿಯಾಗಿ ಬಡತನದ ವಿರುದ್ಧ ಸಮರ ಸಾರಬೇಕು ಎಂದೂ ಮೋದಿ ಹೇಳಿದ್ದಾರೆ.

‘ಶಾಂತಿ ಬೇಕು’ ಎಂಬ ಪಾಕಿಸ್ಥಾನ ಪ್ರಧಾನಿ ಇಮ್ರಾನ್‌ ಖಾನ್‌ ಮನವಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಕೊಟ್ಟ ಖಡಕ್‌ ಉತ್ತರ ಇದು.

 

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

4 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

5 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

5 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

5 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

5 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

5 hours ago