Featured

ಶಾಂತಿ ಸೌಹಾರ್ದತೆ ತವರೂರಲ್ಲಿ ಕೋಮು ದ್ವೇಷಿ ಹೇಳಿಕೆ ನೀಡುತ್ತಿರುವುದು ಖಂಡನೀಯ : ಪ್ರಸಾದ್ ರಾಜ್ ಕಾಂಚನ್ ಆಕ್ರೋಶ  – vishwanews24

ಶಾಂತಿ ಸೌಹಾರ್ದತೆ ತವರೂರಲ್ಲಿ ಕೋಮು ದ್ವೇಷಿ ಹೇಳಿಕೆ ನೀಡುತ್ತಿರುವುದು ಖಂಡನೀಯ : ಪ್ರಸಾದ್ ರಾಜ್ ಕಾಂಚನ್ ಆಕ್ರೋಶ

ಉಡುಪಿ: ಬ್ರಹ್ಮಾವರದ ಕುಂಜಾಲುವಿನಲ್ಲಿ ನಡೆದಿರುವ ದನದ ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಭಂಧಿಸಿ ಹಿಂದೂ ಸಂಘಟನೆ ಮುಖಂಡ ಶರಣ್ ಪಂಪ್ ವೆಲ್ ನೀಡಿರುವ ಹೇಳಿಕೆಗಳಿಗೆ ಉಡುಪಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಕರಣಕ್ಕೆ ಸಂಭಂಧಿಸಿದಂತೆ ಉಡುಪಿ ಎಸ್ ಪಿ ನೇತೃತ್ವದ ಪೊಲೀಸರ ತಂಡ ಅರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.ಅದರೆ ಸಮಾಜದಲ್ಲಿ ಆಶಾಂತಿಯನ್ನೇ ಬಯಸುವ ಕಿಡಿಗೇಡಿಗಳು ಮತ್ತೆ ಮತ್ತೆ ಅದೇ ವಿಚಾರದಲ್ಲಿ ಕೋಮು ಸೌಹರ್ದ ಕೆಡಿಸುವ ಕಾರ್ಯಕ್ಕೆ ಕೈ ಹಾಕಿರುವುದು ಶೋಚನೀಯ.

ಈ ಪ್ರಕರಣದಲ್ಲಿ ಹಲವು ಮಂದಿ ಬಂಧಿತರಾಗಿದ್ದರೂ ಕೂಡ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಜಿಲ್ಲೆಯಲ್ಲಿ ಆಶಾಂತಿ ಸೃಷ್ಟಿ ಮಾಡುವ ದೃಷ್ಟಿಯಲ್ಲಿ ಉಡುಪಿಗೆ ಆಗಮಿಸಿ ಅನಗತ್ಯ ಗೊಂದಲ ಹಾಗೂ ಕೋಮು ದ್ವೇಷಿ ಹೇಳಿಕೆಗಳನ್ನು ನೀಡುತ್ತಿರುವುದು ಖಂಡನೀಯ ಎಂದು ಹೇಳಿದ್ದಾರೆ.

ಉಡುಪಿ ಜಿಲ್ಲೆ ಸುರಕ್ಷಿತ ಹಾಗೂ ಪ್ರಜ್ಞಾವಂತರ ಜಿಲ್ಲೆ.ಇಲ್ಲಿನ ಜನ ಶಾಂತಿ ನೆಮ್ಮದಿಯನ್ನು ಬಯಸುತ್ತಾರೆ. ಅದರೆ ದಕ್ಷಿಣ ಕನ್ನಡದಲ್ಲಿ ಕೋಮು ದ್ವೇಷಗಳನ್ನು ಹರಡಿಸಿ ಶಾಂತಿ ಕದಡಿಸಿದ ಶರಣ್ ಪಂಪ್ ವೆಲ್ ಈಗ ಉಡುಪಿ ಜಿಲ್ಲೆಯಲ್ಲಿ ಕೋಮು ಸೌಹರ್ದ ಕೆಡಿಸಲು ತೊಡಗಿಸಿಕೊಂಡಿದ್ದು ಇದಕ್ಕೆ ಉಡುಪಿ ಜಿಲ್ಲೆ ಜನ ಬೆಂಬಲಿಸುವಿದಿಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಕೋಮು ದ್ವೇಶ ಹರಡಿಸಿ ದಾಂಧಲೆ ಹಬ್ಬಿಸುವವರ ವಿರುದ್ದ ಕೋಮು ಹಿಂಸೆ ನಿಗ್ರಹ ದಳ ರಚನೆ ಮಾಡಿದೆ.ಈ ಕಾನೂನಿನ ಅಡಿಯಲಿಯಲ್ಲಿ ಉಡುಪಿ ಜಿಲ್ಲಾ ಪೊಲೀಸರು ಶರಣ್ ಪಂಪ್ ವೆಲ್ ಮೇಲೆ ಕಠಿಣ ಕಾನೂನು ಕ್ರಮ ಕೈಗೊಂಡು ,ಜಿಲ್ಲೆಯಲ್ಲಿ ಶಾಂತಿ ಸೌರ್ಹದತೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಲಿ ಎಂದು ಆಗ್ರಹಿಸಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

9 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago