ಉಡುಪಿ

ಶಾರದೆ ಮಾತೆ ಸಹಿತ ನವದುರ್ಗೆಯರ ಜಲಸ್ತಂಭನ -ಸಂಪನ್ನಗೊಂಡ 2024 ಉಚ್ಚಿಲ ದಸಾರ : vishwanews24

ಶಾರದೆ ಮಾತೆ ಸಹಿತ ನವದುರ್ಗೆಯರ ಜಲಸ್ತಂಭನ -ಸಂಪನ್ನಗೊಂಡ 2024 ಉಚ್ಚಿಲ ದಸಾರ : vishwanews24

ಕಾಪು :- ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರಗುತ್ತಿ ರುವ ಉಡುಪಿ ಉಚ್ಚಿಲ ದಸರಾ – 2024ರ ಪ್ರಯುಕ್ತ ಪ್ರತಿಷ್ಠಾಪಿಸಲಾಗಿರುವ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳ ಜಲಸ್ತಂಭನ ಕಾರ್ಯಕ್ರಮ ಯಶಸ್ವಿಯಾಗಿ ಕಾಪುವಿನ ಕಡಲ ಕಿನಾರೆಯಲ್ಲಿ ನಡೆಯಿತು.

ಜಲಸ್ತಂಭನದ ಪೂರ್ವದಲ್ಲಿ ಕಾಶಿ ಗಂಗಾರತಿ ಮಾದರಿಯಲ್ಲಿ 10 ಬೃಹತ್‌ ಆರತಿಗಳೊಂದಿಗೆ ಮಹಾ ಮಂಗಳಾರತಿ ನಡೆದ ನಂತರ ಸೇರಿದ ಸಾವಿರಾರು ಸುಮಂಗಲೆಯರಿಂದ ಸಾಮೂಹಿಕ ಮಹಾಮಂಗಳಾರತಿ ನೆರವೇರಿದ ನಂತರ ಸಮುದ್ರದ ಮಧ್ಯೆ ಏಕಕಾಲದಲ್ಲಿ ನವದುರ್ಗೆ -ಶಾರದಾ ಮಾತೆ ಸಹಿತ ವಿಗ್ರಹಗಳ ಜಲಸ್ತಂಭನ ನಡೆಸಿದರು. ಈ ಸಂಧರ್ಭದಲ್ಲಿ ಸುಡುಮದ್ದು ಪ್ರದರ್ಶನ ನಡೆಯಿತು.

ಶಾರದೆ ಮತ್ತು ನವದುರ್ಗೆಯರ ವಿಗ್ರಹಗಳನ್ನೊಳಗೊಂಡ 10 ಟ್ಯಾಬ್ಲೋ ಗಳ ಸಹಿತ ಸಾಮಾಜಿಕ ಜಾಗೃತಿ ಸಂದೇಶ ಸಾರುವ ಟ್ಯಾಬ್ಲೋಗಳು, ಭಜನೆ ತಂಡಗಳು, ತೆಯ್ಯಂ ಸಹಿತ ವಿವಿಧ ವೇಷಭೂಷಣಗಳು, ಹುಲಿ ವೇಷ, ಚೆಂಡೆ ಬಳಗ, ನಾಗಸ್ವರ, ವಾದ್ಯ ಸಹಿತ ನಾಸಿಕ್‌ ಬ್ಯಾಂಡ್‌ ತಂಡಗಳು ಹಾಗೂ 50ಕ್ಕೂ ಅಧಿಕ ಟ್ಯಾಬ್ಲೋ ಒಳಗೊಂಡ ಶೋಭಾ ಯಾತ್ರೆ ನಭೂತೋ ಎಂಬತ್ತೆ ನಡೆಯಿತು.
ದಸರಾ ರೂವಾರಿ ಡಾ| ಜಿ. ಶಂಕರ್‌, ಪ್ರಮುಖರಾದ ಜಯ ಸಿ. ಕೋಟ್ಯಾನ್‌ ಬೆಳ್ಳಂಪಳ್ಳಿ, ಗಿರಿಧರ ಸುವರ್ಣ, ವಿನಯ್‌ ಕರ್ಕೇರ,ಶಾಸಕ ಯಶ್ಪಾಲ್ ಸುವರ್ಣ,ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago