ಧಾರವಾಡ: ವಾಣಿಜ್ಯ ನಗರಿ ಮುಂಬೈನ ಐಷಾರಾಮಿ ಕಾರ್ಡಿಲಿಯಾ ಕ್ರೂಸ್ ಎಂಪ್ರೆಸ್ ಹಡಗಿನ ಒಳಗೆ ನಡೆಯುತ್ತಿದ್ದ ರೇವ್ ಪಾರ್ಟಿಯ ಮೇಲೆ ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ತಂಡ ದಾಳಿ ನಡೆಸಿದ ವೇಳೆ ಸಿಕ್ಕಿಬಿದ್ದು, ಬಂಧನಕ್ಕೆ ಒಳಗಾಗಿರುವ ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್, ಪುತ್ರ ಆರ್ಯನ್ ಖಾನ್ ಪರ ಜಾಮೀನಿಗಾಗಿ ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿರುವ ವಕೀಲ ಕರ್ನಾಟಕ ಮೂಲದವರು.
ಶಾರುಖ್ ಪುತ್ರ ಆರ್ಯನ್ ಖಾನ್ ಕೇಸ್ ನಡಿಸ್ತಾ ಇರೋದು ಧಾರವಾಡ ಮೂಲದ ವಕೀಲ ಸತೀಶ ಮಾನೆಶಿಂಧೆ. ಇವರು ಸ್ಟಾರ್ ನಟರ ಕೇಸ್ ನಡಿಸೋ ಸ್ಟಾರ್ ಅಡ್ಟೋಕೇಟ್ ಎಂದೇ ಪರಿಚಿತರಾಗಿದ್ದಾರೆ. ಸಂಜಯ ದತ್, ಸಲ್ಮಾನ್ ಖಾನ್ ಮತ್ತು ರಿಯಾ ಚಕ್ರವರ್ತಿಗೆ ಜಾಮೀನು ಕೊಡಿಸಿರೋ ಖ್ಯಾತಿಯನ್ನು ಹೊಂದಿದ್ದಾರೆ.
ಮುಂಬೈ ಬ್ಲಾಸ್ಟ್ ಪ್ರಕರಣದಲ್ಲಿ ಸಿಲುಕಿದ್ದ ಸಂಜಯ ದತ್, ಡ್ರಿಂಕ್ ಆ್ಯಂಡ್ ಡ್ರೈವ್ ಕೇಸ್‌ನಲ್ಲಿ ಸಿಲುಕಿದ್ದ ಸಲ್ಮಾನ್ ಖಾನ್ ಮತ್ತು ಸುಶಾಂತ್ ಸಿಂಗ್ ರಜಪುತ ಕೇಸ್‌ನಲ್ಲಿ ಸಿಲುಕಿದ್ದ ರಿಯಾ ಚಕ್ರವರ್ತಿ ಮೂವರಿಗೂ ಬಿಗ್ ರಿಲೀಫ್ ನೀಡಿದ್ದೇ ವಕೀಲ ಸತೀಶ ಮಾನೆಶಿಂಧೆ. ಈಗ ಶಾರೂಕ್ ಪುತ್ರನ ಪರ ವಾದ ಮಂಡಿಸುತ್ತಿದ್ದಾರೆ.
ಉಡುಪಿ : ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ – Vishwanews24
ಸರ್ಕಾರಿ ಶಾಲೆಗಳಲ್ಲಿಯೇ ಕಲಿತ ಸತೀಶ್ ಮಾನೆಶಿಂಧೆ ಇಂದು ರಾಷ್ಟ್ರ ಮಟ್ಟದಲ್ಲಿ ಬೆಳೆದಿರುವ ವಕೀಲರಾಗಿದ್ದಾರೆ. ಗದಗ, ರೋಣ, ವಿಜಯಪುರ, ಧಾರವಾಡ ಎಲ್ಲ ಕಡೆಯೂ ಸರ್ಕಾರಿ ಶಾಲೆ, ಸರ್ಕಾರಿ ಕಾಲೇಜ್‌ಗಳಲ್ಲಿಯೇ ಶಿಕ್ಷಣ ಮುಗಿಸಿದ್ದಾರೆ. ಗದಗ ಮತ್ತು ರೋಣ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ವಿಜಯಪುರ ಸೈನಿಕ ಶಾಲೆಯಲ್ಲಿ ಪ್ರೌಢ ಮತ್ತು ಪಿಯು ಶಿಕ್ಷಣ. ಬಳಿಕ ಧಾರವಾಡದ ಕೆಸಿಡಿಯಲ್ಲಿ ಬಿಕಾಂ ಪದವಿ ಮತ್ತು ಸಿದ್ದಪ್ಪ ಕಂಬಳಿ ಲಾ ಕಾಲೇಜ್‌ನಲ್ಲಿ ಕಾನೂನು ಪದವಿ ಪಡೆದ ಬಳಿಕ ಮುಂಬೈಗೆ ಪ್ರಯಾಣ ಬೆಳೆಸಿದರು.
ಈಗ ಮಹಾರಾಷ್ಟ್ರದಲ್ಲೇ ಸುಪ್ರಸಿದ್ದ ಕ್ರಿಮಿನಲ್ ಲಾಯರ್ ಆಗಿದ್ದಾರೆ. ಮುಂಬೈ ಎನ್ ಕೌಂಟರ್ ಸ್ಪೆಷಾಲಿಸ್ಟ್ ದಯಾ ನಾಯಕ್ ಕೇಸ್ ಕೂಡಾ ಸತೀಶ್ ನಡೆಸುತ್ತಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…