Featured

ಶಾರೂಖ್​ ಪುತ್ರನ ಪರ ಜಾಮೀನಿಗಾಗಿ ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿರುವ ವಕೀಲ ಕರ್ನಾಟಕ ಮೂಲದ ಸತೀಶ ಮಾನೆಶಿಂಧೆ – Vishwanews24

ಶಾರೂಖ್​ ಪುತ್ರನ ಪರ ಜಾಮೀನಿಗಾಗಿ ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿರುವ ವಕೀಲ ಕರ್ನಾಟಕ ಮೂಲದವರು – Vishwanews24

ಸಂಜಯ ದತ್,  ಸಲ್ಮಾನ್ ಖಾನ್ ಮತ್ತು ರಿಯಾ ಚಕ್ರವರ್ತಿಗೆ  ಜಾಮೀನು ಕೊಡಿಸಿ ಬಿಗ್ ರಿಲೀಫ್ ನೀಡಿದ್ದೇ ವಕೀಲ ಸತೀಶ ಮಾನೆಶಿಂಧೆ …

ಧಾರವಾಡ: ವಾಣಿಜ್ಯ ನಗರಿ ಮುಂಬೈನ ಐಷಾರಾಮಿ ಕಾರ್ಡಿಲಿಯಾ ಕ್ರೂಸ್​ ಎಂಪ್ರೆಸ್​ ಹಡಗಿನ ಒಳಗೆ ನಡೆಯುತ್ತಿದ್ದ ರೇವ್​ ಪಾರ್ಟಿಯ ಮೇಲೆ ನಾರ್ಕೋಟಿಕ್​ ಕಂಟ್ರೋಲ್​ ಬ್ಯೂರೋ (ಎನ್​ಸಿಬಿ) ತಂಡ ದಾಳಿ ನಡೆಸಿದ ವೇಳೆ ಸಿಕ್ಕಿಬಿದ್ದು, ಬಂಧನಕ್ಕೆ ಒಳಗಾಗಿರುವ ಬಾಲಿವುಡ್​ ಸೂಪರ್​ಸ್ಟಾರ್​ ಶಾರುಖ್​ ಖಾನ್​, ಪುತ್ರ ಆರ್ಯನ್​ ಖಾನ್​ ಪರ ಜಾಮೀನಿಗಾಗಿ ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿರುವ ವಕೀಲ ಕರ್ನಾಟಕ ಮೂಲದವರು.

ಶಾರುಖ್​ ಪುತ್ರ ಆರ್ಯನ್ ಖಾನ್ ಕೇಸ್ ನಡಿಸ್ತಾ ಇರೋದು ಧಾರವಾಡ ಮೂಲದ ವಕೀಲ ಸತೀಶ ಮಾನೆಶಿಂಧೆ. ಇವರು ಸ್ಟಾರ್ ನಟರ ಕೇಸ್ ನಡಿಸೋ ಸ್ಟಾರ್ ಅಡ್ಟೋಕೇಟ್ ಎಂದೇ ಪರಿಚಿತರಾಗಿದ್ದಾರೆ. ಸಂಜಯ ದತ್, ಸಲ್ಮಾನ್ ಖಾನ್ ಮತ್ತು ರಿಯಾ ಚಕ್ರವರ್ತಿಗೆ ಜಾಮೀನು ಕೊಡಿಸಿರೋ ಖ್ಯಾತಿಯನ್ನು ಹೊಂದಿದ್ದಾರೆ.

ಮುಂಬೈ ಬ್ಲಾಸ್ಟ್ ಪ್ರಕರಣದಲ್ಲಿ ಸಿಲುಕಿದ್ದ ಸಂಜಯ ದತ್, ಡ್ರಿಂಕ್ ಆ್ಯಂಡ್ ಡ್ರೈವ್ ಕೇಸ್‌ನಲ್ಲಿ ಸಿಲುಕಿದ್ದ ಸಲ್ಮಾನ್ ಖಾನ್ ಮತ್ತು ಸುಶಾಂತ್​​ ಸಿಂಗ್ ರಜಪುತ ಕೇಸ್‌ನಲ್ಲಿ ಸಿಲುಕಿದ್ದ ರಿಯಾ ಚಕ್ರವರ್ತಿ ಮೂವರಿಗೂ ಬಿಗ್ ರಿಲೀಫ್ ನೀಡಿದ್ದೇ ವಕೀಲ ಸತೀಶ ಮಾನೆಶಿಂಧೆ. ಈಗ ಶಾರೂಕ್ ಪುತ್ರನ ಪರ ವಾದ ಮಂಡಿಸುತ್ತಿದ್ದಾರೆ.

ಉಡುಪಿ : ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ – Vishwanews24

ಸರ್ಕಾರಿ ಶಾಲೆಗಳಲ್ಲಿಯೇ ಕಲಿತ ಸತೀಶ್​ ಮಾನೆಶಿಂಧೆ ಇಂದು ರಾಷ್ಟ್ರ ಮಟ್ಟದಲ್ಲಿ ಬೆಳೆದಿರುವ ವಕೀಲರಾಗಿದ್ದಾರೆ. ಗದಗ, ರೋಣ, ವಿಜಯಪುರ, ಧಾರವಾಡ ಎಲ್ಲ ಕಡೆಯೂ ಸರ್ಕಾರಿ ಶಾಲೆ, ಸರ್ಕಾರಿ ಕಾಲೇಜ್‌ಗಳಲ್ಲಿಯೇ ಶಿಕ್ಷಣ ಮುಗಿಸಿದ್ದಾರೆ. ಗದಗ ಮತ್ತು ರೋಣ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ವಿಜಯಪುರ ಸೈನಿಕ ಶಾಲೆಯಲ್ಲಿ ಪ್ರೌಢ ಮತ್ತು ಪಿಯು ಶಿಕ್ಷಣ. ಬಳಿಕ ಧಾರವಾಡದ ಕೆಸಿಡಿಯಲ್ಲಿ ಬಿಕಾಂ ಪದವಿ ಮತ್ತು ಸಿದ್ದಪ್ಪ ಕಂಬಳಿ ಲಾ ಕಾಲೇಜ್‌ನಲ್ಲಿ ಕಾನೂನು ಪದವಿ ಪಡೆದ ಬಳಿಕ ಮುಂಬೈಗೆ ಪ್ರಯಾಣ ಬೆಳೆಸಿದರು.

ಈಗ ಮಹಾರಾಷ್ಟ್ರದಲ್ಲೇ ಸುಪ್ರಸಿದ್ದ ಕ್ರಿಮಿನಲ್ ಲಾಯರ್ ಆಗಿದ್ದಾರೆ. ಮುಂಬೈ ಎನ್ ಕೌಂಟರ್ ಸ್ಪೆಷಾಲಿಸ್ಟ್ ದಯಾ ನಾಯಕ್ ಕೇಸ್ ಕೂಡಾ ಸತೀಶ್ ನಡೆಸುತ್ತಿದ್ದಾರೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

3 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

3 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

3 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

3 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

3 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

3 days ago