ಯಾದಗಿರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡು ದಂಪತಿ ಸಜೀವದಹನವಾಗಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಸೈದಾಪುರ ಪಟ್ಟಣದಲ್ಲಿ ನಡೆದಿದೆ.
ರಾಗಯ್ಯ ಹಾಗೂ ಶಿಲ್ಪಾ ಬೆಂಕಿಯ ಕೆನ್ನಾಲಿಗೆಗೆ ಸಿಕ್ಕು ಮೃತಪಟ್ಟ ದುರ್ದೈವಿ. ದಂಪತಿ ಮನೆಯಲ್ಲಿಯೇ ಬಟ್ಟೆ ಅಂಗಡಿಯನ್ನೂ ಇಟ್ಟುಕೊಂಡಿದ್ದರು. ಸೋಮವಾರ ನಸುಕಿನ ಜಾವ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಗೆ ಬೆಂಕಿ ತಗುಲಿತ್ತು. ಮನೆಯೊಳಗೆ ದಟ್ಟ ಹೊಗೆ ಅವರಿಸಿಕೊಂಡಿದ್ದರಿಂದ ದಂಪತಿ ಮನೆಯಿಂದ ಹೊರಬರಲಾರದೇ ಪರದಾಡಿ ಕೊನೆಗೆ ಬೆಂಕಿಗಾಹುತಿಯಾಗಿದ್ದಾರೆ.
ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರು ಅಜ್ಜ ಹಾಗೂ ಅಜ್ಜಿಯೊಂದಿಗೆ ಮನೆಯ ಕೆಳಮಹಡಿಯಲ್ಲಿ ಮಲಗಿದ್ದರು. ಇದರಿಂದಾಗಿ ಸದ್ಯ ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಕೊನೆಗೆ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…