ಶಾಲಾ ಆವರಣದಲ್ಲಿ ಅಲ್ಲಾಡ್ಸು ಡ್ಯಾನ್ಸ್‌ ಮಾಡಿದವರು ಸರ್ಕಾರಿ ಶಾಲೆ ಶಿಕ್ಷಕರು ಅಲ್ಲ : ಸುರೇಶ್‌ ಕುಮಾರ್‌ ಸ್ಪಷ್ಟನೆ -Vishwanews24

ಬೆಂಗಳೂರು : ವಿವಾದಕ್ಕೆ ಕಾರಣವಾಗಿದ್ದ ಸರಕಾರಿ ಶಾಲಾ ಆವರಣದಲ್ಲಿ ಮಾಡಲಾಗಿದ್ದ ಅಲ್ಲಾಡ್ಸು ಡ್ಯಾನ್ಸ್‌ ತಿರುವು ಪಡೆದುಕೊಂಡಿದ್ದು ನೃತ್ಯ ಮಾಡಿದವರು ಯಾರೂ ಕಾಡಾ ಸರ್ಕಾರಿ ಶಾಲೆಯ ಶಿಕ್ಷಕರು ಅಲ್ಲ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು ಸ್ಪಷ್ಟಪಡಿಸಿದ್ದಾರೆ.

ಗುರುವಾರ ವಿಡಿಯೋ ಮೂಲಕ ಸುರೇಶ್‌ ಕುಮಾರ್‌ ಅವರೇ ಈ ಬಗ್ಗೆ ತಿಳಿಸಿದ್ದು, “ಈ ಪ್ರಕರಣದಲ್ಲಿ ಶಾಲಾ ಶಿಕ್ಷಕರದ್ದು ಯಾರದೂ ತಪ್ಪಿಲ್ಲ. ಶಾಲಾ ಆವರಣದಲ್ಲಿ ಮಹಿಳಾ ಸಂಘದವರು ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಮಹಿಳಾ ಸಂಘದವರು ಕಾರ್ಯಕ್ರಮದ ಕೊನೆಯಲ್ಲಿ ನೃತ್ಯ ಮಾಡಿದ್ದಾರೆ” ಎಂದು ಹೇಳಿದ್ದಾರೆ.

ಶಾಲಾ ಆವರಣದಲ್ಲಿ ಇಂತಹ ಕಾರ್ಯಕ್ರಮಗಳಿಗೆ ಅವಕಾಶ ಕೊಡಬಾರದು. ಆದರೆ ಮಹಿಳಾ ಸಂಘದವರು ಶಾಲೆಗೆ ಸಹಾಯ ಮಾಡಿರುವ ಹಿನ್ನಲೆಯಲ್ಲಿ ಆವರಣದಲ್ಲಿ ಕಾರ್ಯಕ್ರಮ ಮಾಡುವ ಅವಕಾಶ ನೀಡಲಾಗಿದೆ ಎಂದು ತಿಳಿಸಿ‌ದ್ದಾರೆ.

ಮಹಿಳಾ ಸಂಘದವರು ಈ ಘಟನೆಗೆ ಸಂಬಂಧಿಸಿ ಕ್ಷಮಾಪಣಾ ಪತ್ರ ಬರೆದು ಕೊಟ್ಟಿದ್ದಾರೆ. ಶಾಲಾ ಅಭಿವೃದ್ಧಿ ಸಮಿತಿ ಈ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇನ್ನು ಮುಂದೆ ಸರ್ಕಾರಿ ಶಾಲಾ ಆವರಣದಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಬಿಟ್ಟು ಅನ್ಯ ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಡಬಾರದು. ಬೇರೆ ಕಾರ್ಯಕ್ರಮಗಳಿಗೆ ಶಾಲಾ ಆವರಣದಲ್ಲಿ ಅವಕಾಶ ಮಾಡಿಕೊಟ್ಟಲ್ಲಿ ಅದಕ್ಕೆ ಶಾಲಾ ಅಭಿವೃದ್ಧಿ ಸಮಿತಿ(SDMC) ಜವಾಬ್ದಾರಿಯಾಗುತ್ತದೆ. ಇಂತಹ ಘಟನೆಗಳು ಇನ್ನು ನಡೆಯಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago