ಬೆಂಗಳೂರು: ಇನ್ನು ಮುಂದೆ ನಿತ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ ಎಂದು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.
ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ ವಿನ್, ಸೆಂಟ್ ಜೋಸೆಫ್ ಶಾಲೆಗಳು ರಾಷ್ಟ್ರಗೀತೆ ಹಾಡಿಸದೇ ಇರುವ ಬಗ್ಗೆ ಶಿಕ್ಷಣ ಇಲಾಖೆಗೆ ದೂರು ಸಲ್ಲಿಕೆ ಆಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ಇದರನುಸಾರ ಎಲ್ಲಾ ಶಾಲೆಗಳಲ್ಲಿ ಮುಂಜಾನೆ ವೇಳೆಯಲ್ಲಿ ವಿದ್ಯಾರ್ಥಿಗಳಿಂದ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಿಸಬೇಕು ಎಂದು ಸುತ್ತೋಲೆ ಹೊರಡಿಸಿದೆ.
ಈ ಬಗ್ಗೆ ಎರಡು ದಿನಗಳ ಹಿಂದಿಯೇ ಪಬ್ಲಿಕ್ ಟಿವಿ ಸುದ್ದಿ ಮಾಡಿತ್ತು. ಇದೀಗ ಸರ್ಕಾರ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ. ಈ ಆದೇಶದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ, ಕಾಲೇಜುಗಳಲ್ಲಿ (1-12) ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಬೇಕು ಸಾಮೂಹಿಕ ಪ್ರಾರ್ಥನೆ ಮಾಡಲು ಸ್ಥಳ ಅವಕಾಶ ಇಲ್ಲದೆ ಹೋದರೆ ಶಾಲಾ ಕೊಠಡಿಗಳಲ್ಲೆ ರಾಷ್ಟ್ರಗೀತೆ ಹಾಡಿಸುವಂತೆ ತಿಳಿಸಿದೆ
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…