Featured

ಶಾಲಾ ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಪಾಲನೆ ಕುರಿತ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶ ಪಾಲಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. -Vishwanews24

ಶಾಲಾ ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಪಾಲನೆ ಕುರಿತ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶ ಪಾಲಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. -Vishwanews24

ಉಡುಪಿ  : ವಿದ್ಯಾರ್ಥಿಗಳು ಹಿಜಬ್ ಧಾರಣೆ, ಮಾಡುವ ಸಂಬoದ ಮಾನ್ಯ ಉಚ್ಚ ನ್ಯಾಯಾಲಯವು ನೀಡಿರುವ ಮಧ್ಯಂತರ ಆದೇಶವನ್ನು ಜಿಲ್ಲೆಯಲ್ಲಿ ಪಾಲನೆ ಮಾಡುವುದರೊಂದಿಗೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕುತ್ತು ಬಾರದೇ ಇರುವ ರೀತಿಯಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಜಿಲ್ಲಾದಿಕಾರಿ ಕೂರ್ಮಾರಾವ್ ಎಂ. ಮನವಿ ಮಾಡಿದರು.

ಅವರು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಶಾಂತಿ ಸಭೆಯ ಆದ್ಯಕ್ಷತೆ ವಹಿಸಿ ಮಾತನಾಡಿದರು.

ಶಿಕ್ಷಣ ಸಂಸ್ಥೆಗಳಲ್ಲಿ ವಸ್ತ್ರ ಸಂಹಿತೆ ಪಾಲನೆ ಸಂಬoದ ವಿವಾದವು ಈಗಾಗಲೇ ನ್ಯಾಯಾಲಯದ ಮುಂದೆ ಇದ್ದು ಕೆಲವೇ ದಿನಗಳಲ್ಲಿ ಪೂರ್ಣ ಪ್ರಮಾಣದ ಆದೇಶ ಬರಲಿದ್ದು, ಪ್ರಸ್ತುತ ನ್ಯಾಯಾಲಯವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದoತೆ ಮಧ್ಯಂತರ ಆದೇಶವನ್ನು ನೀಡಿದ್ದು, ಇದನ್ನು ಪಾಲನೆ ಮಾಡುವುದು ಪ್ರತಿಯೊಬ್ಬ ವಿದ್ಯಾರ್ಥಿಗಳ ಕರ್ತವ್ಯವಾಗಿದೆ ಎಂದರು.

ಸಂವಿಧಾನಾತ್ಮಕ ನ್ಯಾಯಾಲಯದಿಂದ ಹೊರಡಿಸಿರುವ ಮಧ್ಯಂತರ ಆಧೇಶವನ್ನು ವಿದ್ಯಾರ್ಥಿಗಳು ಪಾಲನೆ ಮಾಡುವಂತೆ ಪೋಷಕರು, ವಿವಿಧ ಸಂಘಟನೆಗಳ ಮುಖ್ಯಸ್ಥರು, ಧಾರ್ಮಿಕ ಮುಖಂಡರು, ರಾಜಕೀಯ ಪಕ್ಷದ ಮುಖಂಡರುಗಳು ಸೇರಿದಂತೆ ಸಾರ್ವಜನಿಕರು ಮನವೊಲಿಸಬೇಕು ಎಂದರು.

ಮಧ್ಯಂತರ ಆದೇಶದಲ್ಲಿ ನ್ಯಾಯಾಲಯವು ಶಾಲಾ ಕಾಲೇಜುಗಳಲ್ಲಿ ಶಾಲಾಭಿವೃದ್ಧಿ ಸಮಿತಿಗಳು ಸಮವಸ್ತç ಸಂಹಿತೆಯನ್ನು ಈ ಹಿಂದೆ ಜಾರಿ ತಂದಿದ್ದರೆ ಅದರ ಪಾಲನೆಯನ್ನು ಚಾಚೂ ತಪ್ಪದೇ ಮಾಡಬೇಕಾಗುತ್ತದೆ, ಕೆಲವೊಮ್ಮೆ ಈ ರೀತಿಯ ಸಮವಸ್ತç ಸಂಹಿತೆಗಳು ಇಲ್ಲದೆ ಇದ್ದ ಸಂದರ್ಭದಲ್ಲಿ ಈ ಹಿಂದಿನoತೆಯೇ ಯಥಾ ಪ್ರಕಾರವಾಗಿರುತ್ತದೆ ಎಂದರು.

ಶಾಲಾ ಕಾಲೇಜುಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದಂಡ ಪ್ರಕ್ರಿಯ ಸಂಹಿತೆ 144 ರ ಆದೇಶವನ್ನು ಹೊರಡಿಸಲಾಗಿದೆ, ಶಾಲೆಯ ಪ್ರಾಚಾರ್ಯರು, ಮುಖ್ಯೋಪಧ್ಯಾಯರು ಸೇರಿದಂತೆ ಶಾಲೆಯ ಶಿಕ್ಷಕರುಗಳು ವಿದ್ಯಾರ್ಥಿಗಳ ಜೊತೆ ಸಮನ್ವಯದೊಂದಿಗೆ ಸಮಾಲೋಚನೆಗಳನ್ನು ನಡೆಸಿ, ಶಾಲಾ ಕಾಲೇಜುಗಳು ಎಂದಿನoತೆ ನಡೆಯಲು ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದರು.

ಒಂದೊಮ್ಮೆ ವಿದ್ಯಾರ್ಥಿಗಳು ಶಾಲಾ ವಸ್ತç ಸಂಹಿತೆಯನ್ನು ಪಾಲನೆ ಮಾಡದೇ ಇರುವ ಬಗ್ಗೆ ವರ್ತಿಸಿದಲ್ಲಿ , ಶಿಕ್ಷಕರು ಅವರುಗಳ ಜೊತೆಯಲ್ಲಿ ಅನುಚಿತವಾಗಿ ವರ್ತಿಸದೇ , ಶಾಲೆಯ ಆವರಣದಲ್ಲಿ ಅವಕಾಶ ನೀಡಿ, ಶಾಲಾ ಬೋಧನಾ ಕೊಠಡಿಯಲ್ಲಿ ವಸ್ತç ಸಂಹಿತೆಯನ್ನು ಪಾಲನೆ ಮಾಡುವಂತೆ ಹೇಳುವುದರೊಂದಿಗೆ ಕಲಿಕಾ ಚಟುವಟಿಕೆಯಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಬೇಕು ಎಂದರು.

ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಸಂಘಟನೆಗಳು ಮುಖ್ಯಸ್ಥರು, ಧಾರ್ಮಿಕ ಮುಖಂಡರು , ರಾಜಕೀಯ ಮುಖಂಡರುಗಳು ಮತ್ತಿತರರು ಜಿಲ್ಲೆಯ ಜನತೆ ಬಹಳ ಹಿಂದಿನಿoದಲೂ ಅಣ್ಣ ತಮ್ಮಂದಿರoತೆ ಸೌಹಾರ್ದಯುತವಾಗಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವುದರೊಂದಿಗೆ ಸಾಮರಸ್ಯಕ್ಕೆ ಒತ್ತು ನೀಡಿದ್ದಾರೆ. ಜೊತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಶಿಕ್ಷಣಕ್ಕೆ ಹೆಸರನ್ನು ಹೊಂದಿದೆ ಇದನ್ನು ಮುಂದುವರೆಸಿಕೊoಡು ಹೋಗುವುದು ನಮ್ಮಗಳ ಆದ್ಯ ಕರ್ತವ್ಯವಾಗಿದೆ, ನ್ಯಾಯಾಲಯದ ಆದೇಶವನ್ನು ಗೌರವಿಸುವುದು ನಮ್ಮೆಲ್ಲರುಗಳ ಜವಾಬ್ದಾರಿಯಾಗಿದೆ , ಅದನ್ನು ಪಾಲನೆ ಮಾಡುವುದರೊಂದಿಗೆ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದOತೆ ನೋಡಿಕೊಂಡು ಅವರುಗಳ ಉತ್ತಮ ಭವಿಷ್ಯ ರೂಪಿಸುವುದು ಆದ್ಯತೆಯಾಗಬೇಕು ಎಂದು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಎಸ್ಪಿ ವಿಷ್ಣು ವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪವಿಭಾಗಾಧಿಕಾರಿ ರಾಜು, ಎಎಸ್ಪಿ ಸಿದ್ದಲಿಂಗಪ್ಪ ಉಪಸ್ಥಿತರಿದ್ದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 hour ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

4 hours ago