ಮೈಸೂರು : ಹಿಂದಿನ ಬಿಜೆಪಿ ಸರಕಾರ ಮಾಡಿದ್ದ ಹಿಜಬ್ ನಿಷೇಧ ಆದೇಶವನ್ನು ಹಿಂಪಡೆಯಲು ಕಾಂಗ್ರೇಸ್ ಸರಕಾರ ಮುಂದಾಗಿದ್ದು, ಈ ಹಿನ್ನಲೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ. ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಈ ಮೂಲಕ ಹಿಂದಿನ ಬಿಜೆಪಿ ಸರ್ಕಾರವು ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಮಾಡಿ ಹೊರಡಿಸಿದ್ದ ಆದೇಶವನ್ನು ಸದ್ಯ ಕಾಂಗ್ರೆಸ್ ಸರ್ಕಾರ ತೆರವು ಮಾಡುತ್ತಿದೆ. ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹಿಜಾಬ್ ಧರಿಸಿ ತೆರಳಲು ಅವಕಾಶ ನೀಡಲು ಮುಂದಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…