Featured

ಶಾಲಾ ಕಾಲೇಜು ಸಮವಸ್ತ್ರ ನಿಯಮ ಪಾಲನೆಗೆ ರಾಜ್ಯ ಸರಕಾರದ ಆದೇಶ ಹಿಜಾಬ್ ಹೋರಾಟಕ್ಕೆ ಸಂದ ಪ್ರಥಮ ಗೆಲುವು: ಯಶ್ ಪಾಲ್ ಸುವರ್ಣ -Vishwanews24

ಶಾಲಾ ಕಾಲೇಜು ಸಮವಸ್ತ್ರ ನಿಯಮ ಪಾಲನೆಗೆ ರಾಜ್ಯ ಸರಕಾರದ ಆದೇಶ ಹಿಜಾಬ್ ಹೋರಾಟಕ್ಕೆ ಸಂದ ಪ್ರಥಮ ಗೆಲುವು: ಯಶ್ ಪಾಲ್ ಸುವರ್ಣ -Vishwanews24

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆ 1983 ಅನ್ವಯ ಶಾಲಾ, ಕಾಲೇಜುಗಳಲ್ಲಿ ನಿಗದಿಪಡಿಸಿರುವ ಸಮವಸ್ತ್ರದ ನಿಯಮಗಳನ್ನು ಪಾಲಿಸುವಂತೆ ರಾಜ್ಯ ಸರಕಾರದ ಆದೇಶ ಶಿಕ್ಷಣ ವ್ಯವಸ್ಥೆಯಲ್ಲಿ ಹಿಜಾಬ್ ವಿವಾದದ ವಿಚಾರದಲ್ಲಿ ಹೋರಾಟಕ್ಕೆ ಸಂದ ಪ್ರಥಮ ಗೆಲುವು ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.

ರಾಜ್ಯದಾದ್ಯಂತ ಶಾಲಾ ಕಾಲೇಜಿನಲ್ಲಿ ಹಿಜಾಬ್ ವಿಚಾರದ ಮೂಲಕ ಸೃಷ್ಟಿಯಾಗಿದ್ದ ಗೊಂದಲವನ್ನು ಪರಿಹರಿಸುವ ನಿಟ್ಟಿನಲ್ಲಿ ನಮ್ಮ ಮನವಿಗೆ ಶೀಘ್ರವಾಗಿ ಸ್ಪಂದಿಸಿ

ಆದೇಶ ನೀಡಿದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಶ್ರೀ ಬಿ.ಸಿ. ನಾಗೇಶ್‌ ರವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಕರ್ನಾಟಕ ಶಿಕ್ಷಣ ಕಾಯ್ದೆ 1983 ನಿಯಮದನ್ವಯ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸತಕ್ಕದ್ದು, ಖಾಸಗಿ ಶಾಲೆಗಳು ತಮ್ಮ ಆಡಳಿತ ಮಂಡಳಿಗಳು ನಿರ್ಧರಿಸುವಂತಹ ಸಮವಸ್ತ್ರವನ್ನು ಧರಿಸತಕ್ಕದ್ದು ಎಂಬ ಆದೇಶ ನೀಡಿದೆ.

ಪದವಿಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಆಯಾ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿ ಅಥವಾ ಆಡಳಿತ ಮಂಡಳಿಯ ಮೇಲ್ವಿಚಾರಣಾ ಸಮಿತಿಯ ನಿರ್ಧರಿಸುವಂತಹ ಸಮವಸ್ತ್ರಗಳನ್ನು ಧರಿಸುವುದು. ಆಡಳಿತ ಮಂಡಳಿಗಳು ಸಮವಸ್ತ್ರಗಳನ್ನು ನಿಗದಿಪಡಿಸದೆ ಇದ್ದಲ್ಲಿ ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡಿಕೊಂಡು ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಂತೆ ಇರುವ ಉಡುಪುಗಳನ್ನು ಧರಿಸುವಂತೆ ಆದೇಶಿಸುವ ಮೂಲಕ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆತರಲು ಯತ್ನಿಸುತ್ತಿದ್ದ ಮತೀಯವಾದಿ ರಾಷ್ಟ್ರ ವಿರೋಧಿ ಸಂಘಟನೆಗೆ ತಕ್ಕ ಉತ್ತರ ನೀಡಿದೆ.

ಮುಂದಿನ ದಿನಗಳಲ್ಲಿ ನ್ಯಾಯಾಲಯದಲ್ಲೂ ನಮ್ಮ ಹೋರಾಟಕ್ಕೆ ಗೆಲುವು ಸಿಗುವ ವಿಶ್ವಾಸವಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago