ಉಡುಪಿ: ಸರ್ಕಾರಿ ಶಾಲೆಗಳು ಹೊಸ ಶೈಕ್ಷಣಿಕ ವರ್ಷದೊಂದಿಗೆ ಮೇ 31 ಬುಧವಾರ ಪುನರಾರಂಭಗೊಳ್ಳಲಿದ್ದು, ಉಡುಪಿ ವಿಧಾನ ಸಭಾ ಕ್ಷೇತ್ರದ 72 ಸರ್ಕಾರಿ ಶಾಲೆಗಳು ಮಕ್ಕಳ ಸ್ವಾಗತಕ್ಕೆ ಸಜ್ಜಾಗಿವೆ.
ಉಡುಪಿ ನಗರದ ವಳಕಾಡು ಸರ್ಕಾರಿ ಪ್ರೌಢ ಶಾಲೆಯಲ್ಲಿ ಬೆಳಿಗ್ಗೆ 9.00 ಗಂಟೆಗೆ ಮಾನ್ಯ ಶಾಸಕರು ಪ್ರಾರಂಭೋತ್ಸವಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ. ಬಳಿಕ 10.00 ಗಂಟೆಗೆ ನಿಟ್ಟೂರು ಹನುಮಂತ ನಗರದ ಶಾಲೆ, 10.30 ಕ್ಕೆ ಬೋರ್ಡ್ ಹೈಸ್ಕೂಲ್ ಬ್ರಹ್ಮಾವರ, 11.30 ಗಂಟೆಗೆ ಕೆ.ಪಿ.ಎಸ್. ಶಾಲೆ, ಕೊಕ್ಕರ್ಣೆಯ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಗಳಲ್ಲಿ ಶಾಸಕರು ಭಾಗವಹಿಸಲಿದ್ದಾರೆ.
ಉಡುಪಿ ವಿಧಾನ ಸಭೆ ವ್ಯಾಪ್ತಿಯ ಎಲ್ಲಾ ಜನಪ್ರತಿನಿಧಿಗಳು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕ ಸಮಿತಿಯ ಸದಸ್ಯರು, ಶಿಕ್ಷಣ ಪ್ರೇಮಿಗಳು ಸಂಬಂಧಿಸಿದ ಸಮೀಪದ ತಮ್ಮ ಶಾಲೆಗಳ ವ್ಯಾಪ್ತಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳ ಸಂಭ್ರಮ ಹೆಚ್ಚಿಸುವಂತೆ ಶಾಸಕರು ಮನವಿ ಮಾಡಿದ್ದಾರೆ.
ಶಾಸಕರು ಪ್ರವರ್ತಕರಾಗಿರುವ ಪುಷ್ಪಾನಂದ ಫೌಂಡೇಶನ್ ವತಿಯಿಂದ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಉಡುಪಿ ವಿಧಾನ ಸಭಾ ವ್ಯಾಪ್ತಿಯ ಎಲ್ಲಾ ಸರ್ಕಾರಿ ಶಾಲೆಯ ಸುಮಾರು 12,000 ಶಾಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿರುತ್ತಾರೆ ಎಂದು ಶಾಸಕರ ಕಛೇರಿ ಪ್ರಕಟಣಿ ತಿಳಿಸಿದೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…