Featured

ಶಾಲಾ ಬ್ಯಾಗ್ ಹೊರೆ ಇಳಿಸಲು ಮುಂದಾದ ರಾಜ್ಯ ಸರ್ಕಾರ ; ಮೂರನೇ ಶನಿವಾರ ಬ್ಯಾಗ್‌ ರಹಿತ ದಿನ -Vishwanews24

ಮೂರನೇ ಶನಿವಾರ ಬ್ಯಾಗ್‌ ರಹಿತ ದಿನ

ಬೆಂಗಳೂರು: ಶಾಲಾ ಬ್ಯಾಗ್ ಹೊರೆ ಇಳಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದ್ದು, ಸದ್ಯದಲ್ಲೇ ಅಧಿಕೃತ ಆದೇಶವನ್ನು ಶಿಕ್ಷಣ ಇಲಾಖೆ ಹೊರಡಿಸಲಿದೆ ಎನ್ನಲಾಗಿದೆ.

ತಿಂಗಳ ಮೂರನೇ ಶನಿವಾರವನ್ನು ಬ್ಯಾಗ್‌ ರಹಿತ ದಿನವೆಂದು ಆಚರಿಸಬೇಕು ಎಂದು ಆದೇಶಿಸಲಿರುವ ಸರ್ಕಾರ, ಪಠ್ಯಪುಸ್ತಕ ಅಥವಾ ಇತರ ಪೂರಕ ಸಾಮಗ್ರಿಗಳ ಅವಶ್ಯಕತೆ ಇಲ್ಲದ ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿವಿದ್ಯಾರ್ಥಿಗಳನ್ನು ತೊಡಗಿಸುವ ನಿಟ್ಟಿನಲ್ಲಿ ಸಲಹಾತ್ಮಕ ಚಟುವಟಿಕೆಗಳ ಪಟ್ಟಿಯನ್ನು ನೀಡಲಿದೆ.

ಇನ್ನು 2019 ಎಪ್ರೀಲ್ 16 ರಂದು ನಡೆದಿದ್ದ ಸಭೆಯಲ್ಲಿ ಬ್ಯಾಗ್ ತೂಕ ವಿದ್ಯಾರ್ಥಿಯ ದೇಹದ ತೂಕದ ಶೇ 10 ನ್ನು ಮೀರದಂತಿರಬೇಕು ಅನ್ನೋ ತೀರ‍್ಮಾನಕ್ಕೆ ಬಂದಿತ್ತು ಎನ್ನಲಾಗಿದೆ. ಹೀಗಾಗಿ ಒಂದರಿಂದ ಎರಡನೇ ತರಗತಿ ಮಕ್ಕಳಿಗೆ 1.5ಕೆ.ಜಿ ಯಿಂದ 2 ಕೆ.ಜಿ , ಮೂರರಿಂದ ಐದನೇ ತರಗತಿ ಮಕ್ಕಳಿಗೆ- 2 ರಿಂದ 3 ಕೆ.ಜಿ, ಆರರಿಂದ ಎಂಟನೇ ತರಗತಿ ಮಕ್ಕಳಿಗೆ 3 ರಿಂದ 4 ಕೆ.ಜಿ, ಒಂಬತ್ತರಿಂದ ಹತ್ತನೇ ತರಗತಿ ಮಕ್ಕಳಿಗೆ 4 ರಿಂದ 5 ಕೆ.ಜಿ ತೂಕದ ಬ್ಯಾಗ ಇರಬೇಕು ಎನ್ನುವುದರ ಬಗ್ಗೆ ಸದ್ಯದಲ್ಲೇ ಸರ್ಕಾರ ಆದೇಶ ಹೊರಡಿಸಲಿದೆಯಂತೆ.

“ಕ್ಷೇತ್ರ ಸಂಚಾರ, ವಾರ್ತಾಪತ್ರಿಕೆಗಳ ಚಟುವಟಿಕೆಗಳು, ಗಣಿತದ ವಿನೋದ, ಅಬ್ಯಾಕಸ್‌ ಅಲ್ಲದೆ, ಶಾಲಾ ಬ್ಯಾಗ್‌ ಹೊರೆ ಇಳಿಸಲು ಶಾಲಾ ವಾತಾವರಣಕ್ಕೆ ಸೂಕ್ತವಾದ ಅಭ್ಯಾಸಗಳನ್ನು ಅಳವಡಿಸಬೇಕು,” ಎಂದು ಶಾಲಾಮುಖ್ಯಸ್ಥರಿಗೆ ಸೂಚಿಸಲಿದೆ.

ಅಷ್ಟೇ ಅಲ್ಲ. ವಿಜ್ಞಾನದ ಪ್ರಯೋಗ, ಪ್ರದರ್ಶನ, ಸಾಮಾನ್ಯ ಜ್ಞಾನ ಶೈಕ್ಷಣಿಕ ಸಂಘದ ಚಟುವಟಿಕೆಗಳು, ಮಣ್ಣಿನಲ್ಲಿ ವಸ್ತುಗಳ ತಯಾರಿಕೆ, ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳು ಸೇರಿದಂತೆ ಇನ್ನಿತರೆಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಲಿದೆ.

ಶಾಲಾ ಮಕ್ಕಳ ಬ್ಯಾಗಿನ ಹೊರೆ ಇಳಿಸುವ ವಿಚಾರದಲ್ಲಿ ಹಾಗೂ ಮಕ್ಕಳಿಗೆ ಹೋಂವರ್ಕ್ ಕೊಡುವ ವಿಚಾರದಲ್ಲಿಕೇಂದ್ರ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿತ್ತು. ಇದಕ್ಕೆ ಸಂಬಂಧಪಟ್ಟಂತೆ ಮಾನವ ಸಂಪನ್ಮೂಲಅಭಿವೃದ್ಧಿ ಸಚಿವಾಲಯ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ತಮ್ಮ ಮಾರ್ಗದರ್ಶಿ ಸೂತ್ರಪಾಲಿಸುವಂತೆ ನಿರ್ದೇಶನ ನೀಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ತೂಕವಿರುವ ಶಾಲಾ ಬ್ಯಾಗ್‌ಗಳನ್ನು ಹೊತ್ತೊಯ್ಯುವುದರಿಂದ ಮಕ್ಕಳು ದೈಹಿಕ ಮತ್ತು ಮಾನಸಿಕಸಮಸ್ಯೆಗಳಿಗೆ ಗುರಿಯಾಗುತ್ತಾರೆ. ಬೆನ್ನು ನೋವು, ಭುಜದ ನೋವು ಮತ್ತಿತರ ದೈಹಿಕ ಸಮಸ್ಯೆಗಳು ಕಾಣಿಸಿಕೊಳ್ಳಲು ಬ್ಯಾಗ್‌ ಭಾರವೇ ಮೂಲ ಕಾರಣ ಎಂಬುದು ವೈಜ್ಞಾನಿಕ ಅಧ್ಯಯನಗಳಿಂದ ದೃಢಪಟ್ಟಿತ್ತು.

 

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

16 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

18 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

18 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

18 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

18 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago