Featured

ಶಾಲಾ ಮಕ್ಕಳಿಗೊಂದು ಸಿಹಿ ಸುದ್ದಿ..ಬಿಸಿಯೂಟದ ಜೊತೆ ಲಭ್ಯವಾಗಲಿದೆ ಜೇನುತುಪ್ಪ

ಬೆಂಗಳೂರು: ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಇನ್ನಷ್ಟು ಸಿಹಿಯಾಗಿ ಮತ್ತು ಆರೋಗ್ಯದಾಯಕವಾಗಿ ಸಿಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಬಿಸಿಯೂಟದ ತಿನಿಸುಗಳಲ್ಲಿ ಜೇನುತುಪ್ಪವನ್ನು ಕೂಡ ಸೇರಿಸಲು ನಿರ್ಧರಿಸಿದೆ. ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ಆದೇಶವನ್ನು ಪಾಲಿಸಲು ಮುಂದಾಗಿದೆ.

ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು ಅದರಲ್ಲಿ, ”ಜೇನುತುಪ್ಪದಲ್ಲಿ ಹೇರಳವಾಗಿ ರೋಗ ನಿರೋಧಕಗಳು, ಕಾರ್ಬೋಹೈಡ್ರೇಟ್ ಗಳು, ಉತ್ತಮ ಅಮಿನೊ ಆಮ್ಲಗಳು, ಜೀವಸತ್ವಗಳು ಮತ್ತು ಖನಿಜ, ಪ್ರೊಟೀನ್ ಗಳಿವೆ. ಇದು ದೇಹಕ್ಕೆ ಶಕ್ತಿ ನೀಡುವುದಲ್ಲದೆ ಲಘುವಾದ ಮಕ್ಕಳ ಹೊಟ್ಟೆಯಲ್ಲಿ ಹಸಿವಿನ ಪ್ರಮಾಣವನ್ನು ಹೆಚ್ಚಿಸುತ್ತದೆ ಮತ್ತು ಆಹಾರ ಸುಲಭವಾಗಿ ಜೀರ್ಣವಾಗಲು ಸಹಾಯ ಮಾಡುತ್ತದೆ. ದೇಹದಲ್ಲಿ ಕ್ಯಾಲ್ಸಿಯಂನ ಸಮ್ಮಿಲನಕ್ಕೆ ಸಹಾಯ ಮಾಡುತ್ತದೆ. ಜೇನುತುಪ್ಪ ನಿಯಮಿತವಾಗಿ ಸೇವಿಸುತ್ತಾ ಬಂದರೆ ಮಕ್ಕಳು ಬ್ಯಾಕ್ಟೀರಿಯಾ ಮತ್ತು ಸೋಂಕು, ಶೀತ, ಕಫ, ಅಲರ್ಜಿಗಳಿಗೆ ತುತ್ತಾಗುವುದು ಕಡಿಮೆ. ದೇಹದಲ್ಲಿ ರಕ್ತದ ಮಟ್ಟವನ್ನು ನಿಯಂತ್ರಿಸುವಲ್ಲಿ ಕೂಡ ಸಹಾಯ ಮಾಡುತ್ತದೆ ಎಂದು ವಿವರಿಸಲಾಗಿದೆ.

ಆದರೆ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಜೇನುತುಪ್ಪ ನೀಡುವುದು ಹೇಗೆ ಎಂಬ ಯೋಚನೆಯಲ್ಲಿದ್ದಾರೆ. ಬಿಸಿ ಹಾಲಿನ ಜೊತೆ ಜೇನುತುಪ್ಪ ಸೇರಿಸಿ ಮಕ್ಕಳಿಗೆ ನೀಡಬಹುದು. ಪ್ರತ್ಯೇಕವಾಗಿ ನೀಡುವುದು ಕಷ್ಟ. ನಾವಿನ್ನೂ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ ಎನ್ನುತ್ತಾರೆ.

ರಾಷ್ಟ್ರೀಯ ಜೇನುಹುಳ ನಿಗಮದ ಕಾರ್ಯದಡಿಯಲ್ಲಿ ಬರುವ ಕೇಂದ್ರ ಕೃಷಿ ಮತ್ತು ರೈತರ ಅಭಿವೃದ್ಧಿ ಸಚಿವಾಲಯದ ಸೂಚನೆಯಂತೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಈ ಅಧಿಸೂಚನೆ ಹೊರಡಿಸಿದೆ.ಸ್ವಿಡ್ಜರ್ಲೆಂಡ್ ಮೂಲದ ಜೇನುಹುಳ ಸಂಶೋಧನಾ ಕೇಂದ್ರದ ಅಧ್ಯಯನ ಪ್ರಕಾರ, ಜೇನುತುಪ್ಪದಲ್ಲಿ ಸುಮಾರು 600 ಅಂಶಗಳು ಕಂಡುಬರುತ್ತಿವೆ. ಅವುಗಳ ಪೋಷಕಾಂಶಗಳ ಮೌಲ್ಯಗಳನ್ನು ಆಧರಿಸಿ ಜೇನುತುಪ್ಪ ಒಂದು ಉತ್ತಮ ಜೀರ್ಣಕಾರಿ ಎಂದು ಹೇಳಲಾಗಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜೊತೆ ಸಭೆ ನಡೆಸಿ ಅವುಗಳ ಪೌಷ್ಟಿಕಾಂಶ ಮೌಲ್ಯಗಳಿಗೆ ಹಲವು ತರದ ಜೇನುತುಪ್ಪಗಳನ್ನು ಪರೀಕ್ಷೆ ಮಾಡಲಾಗಿದ್ದು ಅವುಗಳಿಂದ ಬಂದಿರುವ ವರದಿಯಲ್ಲಿ ಜೇನುತುಪ್ಪದಲ್ಲಿ ಹಲವು ಕಾರ್ಬೊಹೈಡ್ರೇಟ್ ಗಳು, ಪ್ರೊಟೀನ್ ಗಳು, ಅಮಿನೊ ಅಮ್ಲ, ಖನಿಜಗಳು, ವಿಟಮಿನ್ ಗಳು, ಕಿಣ್ವಗಳು ಇರುವುದು ಕಂಡುಬರುತ್ತಿದೆ. ಜೇನುತುಪ್ಪ ತಯಾರಿಕೆಯಲ್ಲಿ ತೊಡಗಿರುವ ಸೊಸೈಟಿಗಳು, ಘಟಕಗಳು ಮತ್ತು ಕಂಪೆನಿಗಳು ಗುಣಮಟ್ಟದ ಜೇನುತುಪ್ಪವನ್ನು ಮಕ್ಕಳಿಗೆ ಪೂರೈಸುವಂತೆ ಮನವಿ ಮಾಡಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago