ಬೆಂಗಳೂರು: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ಅಂದ್ರೆ ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ.
ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು. ರಾಜಕೀಯ ಮುಖಂಡರುಗಳು, ಮಠಾಧೀಶರು ಇತ್ಯಾದಿ ತಮ್ಮ ಅಥವಾ ತಮ್ಮ ಮಕ್ಕಳ ಜನ್ಮದಿನವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಇತ್ಯಾದಿ ಹಂಚುವ ಮೂಲಕ ಅದ್ದೂರಿಯಾಗಿ ಆಚರಿಸುತ್ತಿರುವುದು ಕಂಡುಬಂದಿದೆ.
ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲಾಗುವ ಮಕ್ಕಳು ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳು, ಬಾಲ ಕಾರ್ಮಿಕ ಪದ್ದತಿಯಿಂದ ರಕ್ಷಿಸಲ್ಪಟ್ಟಿ, ಬಾಲ್ಯ ವಿವಾಹಕ್ಕೆ ಒಳಗಾದ, ಅತ್ಯಾಚಾರಕ್ಕೆ ಒಳಗಾದ. ತಂದೆ-ತಾಯಿಯಿಂದ ತಿರಸ್ಕರಿಸಲ್ಪಟ್ಟ, ತಾಯಿ ಅಥವಾ ತಂದೆ ಇಲ್ಲದ, ಭಿಕ್ಷಾಟನೆಯಿಂದ ರಕ್ಷಿಸಲ್ಪಟ್ಟ ಇತ್ಯಾದಿ ಪಾಲನೆ ಮತ್ತು ರಕ್ಷಣೆಯ ಅವಶ್ಯವಿರುವ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ/ಬಾಲನ್ಯಾಯ ಮಂಡಳಿಗಳ ಆದೇಶದ ಮೂಲಕ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲು ಮಾಡಲಾಗಿರುತ್ತದೆ.
ಈ ಎಲ್ಲಾ ವರ್ಗದ ಮಕ್ಕಳು ಸಮಾಜದಿಂದ ವಂಚಿತರಾಗಿ ಮನನೊಂದವರಾಗಿರುವುದರಿಂದ ಮಕ್ಕಳ ಪಾಲನಾ ಸಂಸ್ಥೆಯಲ್ಲಿ ದಾಖಲಾಗಿರುವ ಮಕ್ಕಳ ಮನಸ್ಸಿಗೆ ಖುಷಿ ತರುವಂತಹ ಸೃಜನಶೀಲತೆಯ ಕಾರ್ಯಕ್ರಮಗಳನ್ನು ಏರ್ಪಡಿಸಿ ಮಕ್ಕಳ ಮನಸ್ಸು ಸಧೃಡ ಹಾಗೂ ಆಹ್ಲಾದಕರವಾಗುವಂತೆ ಪ್ರೋತ್ಸಾಹಿಸಬೇಕಾಗುತ್ತದೆ.
ಆದರೆ ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, ಇತ್ಯಾದಿ ಗಣ್ಯವ್ಯಕ್ತಿಗಳು ಅವರ ಹಾಗೂ ಅವರ ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಇತ್ಯಾದಿ ಹಂಚುವ ಅದ್ದೂರಿ ಕಾರ್ಯಕ್ರಮಗಳು ಸಂಸ್ಥೆಯಲ್ಲಿ ಆಚರಿಸುವುದರಿಂದ ಮಕ್ಕಳ ಪಾಲನಾ ಸಂಸ್ಥೆಯ ಮಕ್ಕಳಿಗೆ ಅವರ ಹುಟ್ಟು ಹಬ್ಬ ಈ ರೀತಿ ಆಚರಿಸಿಕೊಳ್ಳಲು ಸಾಧ್ಯವಾಗದೇ ಆಚರಿಸಲ್ಪಡುತ್ತಿರುವ ಹುಟ್ಟುಹಬ್ಬದೊಂದಿಗೆ ಹೋಲಿಕೆ ಮಾಡಿಕೊಂಡಲ್ಲಿ ಈ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಿ, ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಇಂತಹ ಆಚರಣೆಗಳು ಸದರಿ ಮಕ್ಕಳ ಆತ್ಮಾಭಿಮಾನ, ಆತ್ಮಗೌರವಕ್ಕೆ ಧಕ್ಕೆಯನ್ನುಂಟು ಮಾಡುತ್ತವೆ.
ಮಕ್ಕಳು ಕುಟುಂಬದಲ್ಲಿ ಬೆಳೆಯುವ ಬೇರೆ ಯಾವುದೇ ಮಗುವಿಗಿಂತ ಕಡಿಮೆ ಇಲ್ಲ ಎಂಬ ಭಾವನೆಯನ್ನು ಕಾಪಾಡುವ ಸಲುವಾಗಿ ಈ ಮಕ್ಕಳ ಹುಟ್ಟುಹಬ್ಬ ಹಾಗೂ ಸರ್ಕಾರದ ಆದೇಶದ ಮೂಲಕ ನಿಗದಿಪಡಿಸಿದ ವ್ಯಕ್ತಿಗಳ ಹುಟ್ಟುಹಬ್ಬ ಆಚರಣೆಯನ್ನು ಹೊರತು ಪಡಿಸಿ, ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಬೇರೆ ಯಾರ ಹುಟ್ಟುಹಬ್ಬ ಆಚರಿಸುವುದನ್ನು ಈ ಮೂಲಕ ನಿಷೇಧಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…